ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ
1 min read
ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ
ವಿಕಲಚೇತನರ ಸಬಲೀಕರಣ ಇಲಾಖೆಯಿಂದ ವಾಹನ ವಿತರಣೆ
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇಂದು ದ್ವಿಚಕ್ರ ವಾಹನಗಳನ್ನು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ವಿತರಣೆ ಮಾಡಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇಂದು ದ್ವಿಚಕ್ರ ವಾಹನಗಳನ್ನು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ವಿತರಣೆ ಮಾಡಿದರು. ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ 2023-24 ನೇ ಸಾಲಿಗೆ ಬಾಗೇಪಲ್ಲಿ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಕೆ.ವಿ. ರಾಮಚಂದ್ರ ಸಮ್ಮುಖದಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಪಟ್ಟಣದ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ 20 ದ್ವಿಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಮಾತನಾಡಿ, ತಾಲ್ಲೂಕಿನ ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಬೇರೆಯವರಿಗೂ ತೊಂದರೆ ಕೊಡದೆ, ಬದುಕು ನಡೆಸಲು ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗೆ ಅರ್ಜಿ ಹಾಕಿದ್ದರು. ಈ ಹಿನ್ನೆಲೆ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ವಿಶೇಷ ಚೇತನರ ಸರ್ವೆ ಕಾರ್ಯ ಮಾಡಲಾಗಿದ್ದು, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇಂದು ೨೦ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಹಸ್ತಾಂತರ ಮಾಡಲಾಯಿತು ಎಂದರು.
ಜೊತೆಗೆ ಮಹಿಳಾ ವಿಕಲಚೇತರಾದ ಇಬ್ಬರ ಮಹಿಳೆಯರಿಗೆ ಲ್ಯಾಪ್ಟಾಪ್ ಹಾಗೂ ಒಬ್ಬ ಮಹಿಳೆಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.