ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆ ಸೇತುವೆ ಬಳಿ ಪತ್ತೆ

1 min read

ಸರ್ವೆ ಗೌರಿ ಹೊಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್‌ (21) ಮೃತದೇಹ ಪತ್ತೆಯಾಗಿದೆ.

ಸರ್ವೆಯ ಗೌರಿ ಹೊಳೆಯ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.

ಜು.19ರ ರಾತ್ರಿಯಿಂದ ಸನ್ಮಿತ್‌ ಕಾಣೆಯಾಗಿದ್ದು, ಆತನ ಸ್ಕೂಟರ್‌ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು.

ಮೃತ ಸನ್ಮಿತ್‌ ತಂದೆ ಚಂದ್ರಗೌಡ ನೀಡಿದ ದೂರಿನಂತೆ ಜು.20ರ ಶನಿವಾರ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹಕ್ಕಾಗಿ ಗೌರಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿದ್ದರು.

ಜು.21ರ ಭಾನುವಾರ ರಾಜ್ಯ ವಿಪತ್ತು ನಿರ್ವಹಣ ಘಟಕ ಸ್ಥಳಕ್ಕಾಗಮಿಸಿ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಮುಂದಾಗಿದ್ದರು.

ಆ ವೇಳೆಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *