ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ಮುನ್ನುಡಿ

1 min read

ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ಮುನ್ನುಡಿ
ಜಿಲ್ಲಾ ಕಾನೂನುಸೇವಾ ಪ್ರಾಧಿಕಾರದ ನ್ಯಾಯಧೀಶ ಉಮೇಶ್ ಹೆಚ್.ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಗಳ ಪೈಕಿ 300 ಅಂಗವಾಡಿಗಳು ಸ್ವಂತ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಬಗ್ಗೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಚ್.ಕೆ.ಉಮೇಶ್ ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಕೂಡಲೇ ಇದನ್ನು ಸರಿಪಡಿಸಲು ಜಿಲ್ಲಾಡಳಿತ ಗಮನಹರಿಸಬೇಕು ಮತ್ತು ಈ ಬಗ್ಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ವರದಿ ನೀಡಿರುವುದಾಗಿ ಅವರು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಗಳ ಪೈಕಿ 300 ಅಂಗವಾಡಿಗಳು ಸ್ವಂತ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಬಗ್ಗೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಚ್.ಕೆ.ಉಮೇಶ್ ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಕೂಡಲೇ ಇದನ್ನು ಸರಿಪಡಿಸಲು ಜಿಲ್ಲಾಡಳಿತ ಗಮನಹರಿಸಬೇಕು ಮತ್ತು ಈ ಬಗ್ಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ವರದಿ ನೀಡಿರುವುದಾಗಿ ಅವರು ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ವೇಣುಗೋಪಾಲಗೌಡ ಅಧ್ಯಕ್ಷತೆಯಲ್ಲಿ ಅಪೌಷ್ಟಿಕತೆ ನಿವಾರಣಾ ರಾಜ್ಯ ಸಲಹಾ ಸಮಿತಿ ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ಕ್ರಮವಹಿಸಿದಂತೆ ಜಿಲ್ಲಾ ಸಮಿತಿ ಮಾಡಬೇಕು ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ನೀಡಿದ ಸೂಚನೆ ಮೇಲೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜುಲೈ 8ರಂದು ಜಿಲ್ಲೆಯ ಆಯ್ದ ಅಂಗನವಾಡಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿದೆ ಎಂದರು.

ಜಿಲ್ಲೆಯಲ್ಲಿ 300 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಲ್ಲಿ ಈ ಹಿಂದೆ ತರಕಾರಿಯುಕ್ತ ಆಹಾರ ಪದಾರ್ಥಗಳಿಂದ ತಯಾರು ಮಾಡಿದ ಆಹಾರ ನೀಡುತ್ತಿದ್ದರು. ಈಗ ಸಿರಿಧಾನ್ಯಗಳಿಂದ ಉಂಡೆ ಅಥವಾ ಉಪ್ಪಿಟ್ಟು ಮಾಡಿ ನೀಡುವ ಕಾರಣ ಹೆಚ್ಚು ಸಂಖ್ಯೆಯ ಮಕ್ಕಳು, ಗರ್ಭಿಣಿ-ಬಾಣಂತಿಗಳು ಅಂಗನವಾಡಿ ಕೇಂದ್ರಗಳಿಗೆ ಬರುತ್ತಿಲ್ಲ. ಈ ಆಹಾರವನ್ನು ತಿನ್ನಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 10 ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವರದಿ ಸಿದ್ದಪಡಿಸಲಾಗಿದೆ. ಹಿಂದೆ ಅಂಗನವಾಡಿ ಕೇಂದ್ರಗಳಲ್ಲಿ ಅನ್ನದ ಜತೆಗೆ ಮೊಳಕೆ ಕಾಳು ತರಕಾರಿ ಸಾಂಬಾರು ಮಾಡುತ್ತಿದ್ದರು. ಆದರೆ ಈಗ ಪ್ರತಿ ಮಗುವಿಗೆ ತರಕಾರಿ ಖರೀದಿಸಲು 2 ರೂಪಾಯಿ ನೀಡುತ್ತಿದ್ದು ಇದರಿಂದ ತರಕಾರಿ ಖರೀದಿ ಆಗುತ್ತಿಲ್ಲ ಎಂದು ತಿಳಿದು ಬಂದಿದೆ. ಜಿಲ್ಲೆಯ ಬಹಳಷ್ಟು ಅಂಗವಾಡಿ ಕೇಂದ್ರಗಳಿಗೆ ಶುದ್ಧಕುಡಿಯುವ ನೀರಿನ ಸರಬರಾಜು ಇಲ್ಲ. ಇಲ್ಲಿಗೆ ಬರುವ ಮಕ್ಕಳಿಗೆ ನಲಿಕಲಿಯೋಜನೆಯಡಿಯಲ್ಲಿ ಬರುವ ಯಾವೊಂದು ಆಟೋಪಕರಣಗಳೂ ಇಲ್ಲದಿರುವುದು ಕಂಡುಬದಿದೆ. ಮೊಟ್ಟೆ ಸರಬರಾಜು ಸ್ಥಗಿತಗೊಂಡಿದೆ. ಅಅಗನವಾಡಿ ಕೇಂದ್ರಗಳಲ್ಲಿ ಖರೀದಿಸುವ ವಸ್ತುಗಳ ರಸೀತಿ ಪುಸ್ತಕ ಬಳಕೆಯಿಲ್ಲದಿರುವುದು ಕಂಡು ಬಂದಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಭೇಟಿ ನೀಡಿದ ಬಹಳಷ್ಟು ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಶಿಕ್ಷಕರು ಅಡುಗೆ ಸಹಾಯಕಿಯರನ್ನು ಕೇಂದ್ರಗಳಲ್ಲಿ ಬಿಟ್ಟು, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ಹೊರಗಡೆ ಉಳಿದಿರುವುದು ಕಂಡು ಬಂದಿದೆ. ಇದು ಕರ್ತವ್ಯಲೋಪದ ಸ್ಪಷ್ಟ ಉಲ್ಲಂಘನೆಯಾಗಿದೆ. 2022ರಿಂದ ಈವರೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಪರಿಶೀಲನೆಗಾಗಿ ತೆರಳಿರುವುದು ಸಂದರ್ಶನದ ಪುಸ್ತಕದಲ್ಲಿ ಈ ಸಂಬಧ ಸಹಿ ಹಾಕಿರುವುದು ನಮ್ಮ ತಂಡ ಭೇಟಿ ನೀಡಿದ ವೇಳೆ ಕಂಡು ಬಂದಿಲ್ಲ ಎಂದು ಹೇಳಿದರು.

ಅಂಗನವಾಡಿ ಭೇಟಿಯ ವೇಳೆ ಮಕ್ಕಳ ಪೋಷಕರು ಬಂದು ಹೇಳಿದ ಪ್ರಕಾರ ಈಗ ಅಂಗನವಾಡಿ ಕೇಂದ್ರಗಳಲ್ಲಿ ಕೇವಲ ತರಕಾರಿ ಇಲ್ಲದ ಉಪ್ಪಿಟ್ಟು, ಮತ್ತು  ಉಂಡೆ ಮಾತ್ರ ನೀಡುತ್ತಿದ್ದಾರೆ. ಇದಕ್ಕಿಂತಲೂ ಉತ್ತಮ ಆಹಾರವನ್ನು ನಾವು ಮನೆಯಲ್ಲಿ ಮಕ್ಕಳಿಗೆ ನೀಡುತ್ತಿದ್ದೇವೆ.ಇದೇ ಕಾರಣಕ್ಕೆ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳಿಸಲು ಮನಸ್ಸು ಬರುತ್ತಿಲ್ಲ ಎಂದು ದೂರಿದ್ದಾರೆ. ಈ ಸಂಬಧ ವಿಸ್ತತ ವರದಿಯನ್ನು ಮುಂದಿನ ಕ್ರಮಕ್ಕಾಗಿ ತಯಾರಿಸಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ನೀಡಿರುವುದಾಗಿ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾಲಕಾಲಕ್ಕೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ. ಇತ್ತೀಚೆಗೆ ಮಕ್ಕಳ ಬಾಲ ಮಂದಿರಕ್ಕೆ ಮೇಲ್ವಿಚಾರಕಿ ವಿದ್ಯಾರ್ಥಿಗಳಿಗೆ ಓದಲು ಬರೆಯಲು ಶಾಲೆಗೆ ಹೋಗಲು ತೊಂದರೆ ಕೊಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಲಾಗಿದೆ. ಜಿಲ್ಲಾಸ್ಪತ್ರೆ ಹೆರಿಗೆ ವಾರ್ಡಿನ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ತಮಗಾಗುವ ಸಮಸ್ಯೆಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಬಹುದು ಎಂದು ತಿಳಿಸಿದರು. ಈ ವೇಳೆ ಪ್ಯಾನಲ್ ವಕೀಲ ಮಂಜುನಾಥ್, ಸೌಜನ್ಯ ಗಾಂಧಿ, ವಂಧನಾ, ಆಶಾ ಮತ್ತಿತರರು ಇದ್ದರು.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *