ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷ ರಾಗಿ ಬಾಬು
1 min readವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷ ರಾಗಿ ಬಾಬು
ಇಂದು ನಡೆದ ಚುನಾವಣೆಯಲ್ಲಿ ನರಸಿಂಹಮೂರ್ತಿ ಸೋಲು
ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣಯೆಲ್ಲಿ ಬಾಬುಗೆ ಮೇಲುಗೈ
ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಉಪಾ ಅಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು, ನೂತನ ಅದ್ಯ ಅಧ್ಯಕ್ಷರಾಗಿ ಟಿ.ಎಸ್. ಬಾಬು ಗೆಲುವು ಸಾಧಿಸಿದ್ದಾರೆ. ಬಾಬು ಅವರು ಗೆಲುವು ಸಾಧಿಸಿದ ಕಾರಣ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.
ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ , ಉಪಾ ಅಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಟಿ.ಎಸ್. ಬಾಬು ಗೆಲುವು ಸಾಧಿಸಿದ್ದಾರೆ. ಬಾಬು ಅವರು ಗೆಲುವು ಸಾಧಿಸಿದ ಕಾರಣ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಆಡಳಿತ ಮಂಡಳಿಗೆ ಇಂದು ಚುನಾವಣೆ ನಡೆದು ನೂತನ ಅಧ್ಯಕ್ಷರ ಆಯ್ಕೆನಡೆಯಿತು.
ಚಿಕ್ಕಬಳ್ಳಾಪುರ ಜಿಲ್ಲಾ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಒಟ್ಟು 17 ಸ್ಥಾನಗಳಲ್ಲಿ ಅಧ್ಯಕ್ಷ ಸ್ಥಾನ ಮತ್ತು ಎರಡು ಉಪಾಅಧ್ಯಕ್ಷ ಸ್ಥಾನಗಳನ್ನು ಹೊರತುಪಡಿಸಿ, ಉಳಿದ 14 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಮೂರು ಸ್ಥಾನಗಳಿಗೆ ಇಂದು ಚಿಕ್ಕಬಳ್ಳಾಪುರ ನಗರದ ಕೆಇಬಿ ಸಮುದಾಯ ಭವನದಲ್ಲಿ ಚುನಾವಣೆ ನಡೆಯಿತು. ಬೆಳಗ್ಗೆಯಿಂದಲೆ ಮತದಾರರು ಸಾಲಿನಲ್ಲಿ ನಿಂತು ಮತ ಚಾಲಯಿಸಿದರು.
ಜಿಲ್ಲಾ ವ್ಯಾಪ್ತಿಯಲ್ಲಿ 202 ಮತದಾರರಿದ್ದು, ಅದರಲ್ಲಿ 196 ಮತ ಚಲಾವಣೆಯಾಗಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡು, ಮತ ಎಣಿಕೆ ನಡೆದು ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಟಿ.ಎಸ್ ಬಾಬು 122 ಮತ ಪಡೆದು ನರಸಿಂಹಮೂರ್ತಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ಉಪಾಅಧ್ಯಕ್ಷ ಸ್ಥಾನಕ್ಕೆ ಜಿ. ಅಂಜನಪ್ಪ 102 ಮತ ಪಡೆದು ಗೆಲುವು ಸಾಧಿಸಿದರೆ ಮತ್ತೊಂದು ಉಪಾಅಧ್ಯಕ್ಷ ಸ್ಥಾನಕ್ಕೆ ಬೈರರೆಡ್ಡಿ 139 ಮತ ಪಡೆದು ಭರ್ಜರಿ ಗೆಲುವು ಸಾದಿಸಿರುವುದಾಗಿ ಚುನಾವಣಾ ಧಿಕಾರಿಗಳು ಘೋಷಣೆ ಮಾಡಿದ್ರು.
ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಚುನಾವಣೆ ಭಾರಿ ಕೂತುಹಲ ಮೂಡಿಸಿತ್ತು. ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದ ಟಿ.ಎಸ್ ಬಾಬು ಮತ್ತು ನರಸಿಂಹಮೂರ್ತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಚುನಾವಣೆ ಫಲಿತಾಂಶ ಘೋಷಣೆ ಆಗುತ್ತಿದ್ದಂತೆ ನೂತನ ಅಧ್ಯಕ್ಷ ಬಾಬು ಅವರ ಅಭಿಮಾನಿಗಳು ಹೂಮಾಲೆ ಹಾಕಿ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಮಾತಾನಾಡಿದ ನೂತನ ಅಧ್ಯಕ್ಷ ಬಾಬು, ಮತದಾರರು ನನ್ನ ನಂಬಿ ಮತ ಹಾಕಿದ್ದಾರೆ ಹಾಗಾಗಿ ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಈ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಬಳ್ಳಾಪುರ ನಗರ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.