ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಕನ್ನಡ ಜ್ಯೋತಿ ರಥಯಾತ್ರೆಗೆ ತಹಸೀಲ್ದಾರ್ ಅನಿಲ್ ಚಾಲನೆ

1 min read

ಕನ್ನಡ ಜ್ಯೋತಿ ರಥಯಾತ್ರೆಗೆ ತಹಸೀಲ್ದಾರ್ ಅನಿಲ್ ಚಾಲನೆ
ಚಿಕ್ಕಬಳ್ಳಾಪುರದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಭಾನುವಾರವಾದರೂ ಕನ್ನಡಾಭಿಮಾನಿಗಳಿಂದ ರಥಯಾತ್ರೆ ಅದ್ಧೂರಿ

ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನಾಗರಿಕರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಕರೆ ನೀಡಿದರು. ಗುಡಿಬಂಡೆ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೆಸಂದ್ರ ಪಂಚಾಯಿತಿಯ ಆರೂರು ಗ್ರಾಮಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಭಾನುವಾರ ಸ್ವಾಗತಿಸಿದ ನಂತರ ಮುಖ್ಯ ರಸ್ತೆಗಳಲ್ಲಿ ಸಂಚರಿಸಲು ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನಾಗರಿಕರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಕರೆ ನೀಡಿದರು. ಗುಡಿಬಂಡೆ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೆಸಂದ್ರ ಪಂಚಾಯಿತಿಯ ಆರೂರು ಗ್ರಾಮಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಭಾನುವಾರ ಸ್ವಾಗತಿಸಿದ ನಂತರ ಮುಖ್ಯ ರಸ್ತೆಗಳಲ್ಲಿ ಸಂಚರಿಸಲು ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡ ಜ್ಯೋತಿ ರಥಯಾತ್ರೆ ಇಂದಿನಿoದ ಜುಲೈ 30 ರವರೆಗೆ ಜಿಲ್ಲಾದ್ಯಂತ ಸಂಚಾರ ಮಾಡಲಿದೆ ಎಂದರು.

ಪ್ರತಿ ತಾಲ್ಲೂಕಿನಲ್ಲೂ ಒಂದೊoದು ದಿನ ಸಂಚಾರ ನಡೆಸಿ, ಮುಂದಿನ ಜಿಲ್ಲೆಗೆ ಸಾಗಲಿದೆ. ಈ ವರ್ಷದ ಕನ್ನಡ ರಾಜ್ಯೋತ್ಸವ ದಿನಕ್ಕೆ ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರ್ಣ ಆಗುವುದರಿಂದ ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ. ಕನ್ನಡ ಜ್ಯೋತಿ ರಥಯಾತ್ರೆ ರಾಜ್ಯಾಧ್ಯತ ಸಂಚರಿಸುತ್ತಿದ್ದು, ಕನ್ನಡ ನಾಡು ನುಡಿ ಏಳಿಗೆಯ ಪಥದಲ್ಲಿ ಸಾಗಲು, ಕನ್ನಡ ಭಾಷೆಯನ್ನು ಮಹೋನ್ನತ ಮಟ್ಟಕ್ಕೆ ಬೆಳೆಸಬೇಕು ಎಂದು ಕರೆ ನೀಡಿದರು.

ಕನ್ನಡ ಭಾಷೆ ಉಳಿವಿಗಾಗಿ ಶ್ರಮಪಟ್ಟ ಸಾಹಿತಿಗಳು ಮತ್ತು ಹೋರಾಟಗಾರರನ್ನು ಸ್ಮರಿಸಬೇಕು. ಈ ಸಂದೇಶ ಎಲ್ಲರಿಗೂ ತಲುಪಿಸಬೇಕು. ಆ ನಿಟ್ಟಿನಲ್ಲಿ ರಥಯಾತ್ರೆಯನ್ನು ತುಂಬು ಹೃದಯದಿಂದ ಸ್ವಾಗತಿಸಿ ಗೌರವ ಸಮರ್ಪಣೆ ಮಾಡಬೇಕು. ಜೊತೆಗೆ ಕನ್ನಡ ನಾಡು ನುಡಿಯ ಮಹತ್ವವನ್ನು ಎಲ್ಲರಿಗೂ ತಿಳಿಸಿಕೊಡಬೇಕು ಎಂದು ತಹಸೀಲ್ದಾರ್ ಅನಿಲ್ ಅವರು ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿ, ಭವ್ಯ ಭಾರತದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಒಗ್ಗಟ್ಟಿನಿಂದ ಹೋರಾಡಲು ಹೆಚ್ಚು ಆದ್ಯತೆ ನೀಡಬೇಕು. ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಕಾಣಿಕೆಯನ್ನಾಗಿ ನೀಡುವ ಕಾರ್ಯವಾಗಬೇಕು. ಕನ್ನಡ ನೆಲದ ಪ್ರತಿಭೆಗಳು ಪ್ರಪಂಚದಾದ್ಯoತ ಬೆಳೆಯಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಕೋಡಿರಂಗಪ್ಪ ಮಾತನಾಡಿ, ಕರ್ನಾಟಕದ ನಾವೆಲ್ಲರೂ ಒಂದೇ, ಎಲ್ಲರೂ ಸಹೋದರ ಭಾವನೆ ಹೊಂದಿರಬೇಕು. ಕರ್ನಾಟಕದ ಕನ್ನಡ ಭಾಷೆಯ ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಗೌರವಿಸಬೇಕು. ಕರ್ನಾಟಕದ ಬಹುತೇಕ ಜನರಿಗೆ ಕನ್ನಡ ಮಾತೃಭಾಷೆಯಾಗಿದೆ. ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಹಾಗೂ ದಮನ್ ಹಾಗೂ ದಿಯುಗಳಲ್ಲಿ ಕನ್ನಡವನ್ನು ಮಾತೃ ಭಾಷೆಯಾಗಿ ಬಳಸುವ ಗಣನೀಯ ಸಂಖ್ಯೆಯ ಜನರಿದ್ದಾರೆ. ಕನ್ನಡವನ್ನು ಬೆಳೆಸುವ ಹಲವಾರು ಕವಿಗಳು ಹಾಗೂ ನಾಯಕರು ಹೆಚ್ಚು ಮಾಧ್ಯಮಗಳು ಅಭಿವೃದ್ಧಿಯ ಕಾರ್ಯದಲ್ಲಿ ಪ್ರವೃತ್ತವಾಗಿವೆ. ಕರ್ನಾಟಕ ಸರ್ವೋದಯ ವಿಶ್ವಮಾನವರ ರಾಜ್ಯವಾಗಬೇಕು ಎಂದರು.

ರಥಯಾತ್ರೆ ನಿಗದಿತ ಮಾರ್ಗದಲ್ಲಿ ಕಲಾತಂಡಗಳೊoದಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಾದ್ಯಂತ ಅದ್ದೂರಿಯಾಗಿ ಸಾಗಿತು. ಕಲಾತಂಡಗಳ ಕಲಾವಿದರ ಡೊಳ್ಳುಕುಣಿತ, ಶಾಲಾ ಮಕ್ಕಳ ಕೋಲಾಟ, ಬ್ಯಾಂಡ್ ವಾದನ, ಸಾರ್ವಜನಿಕರ ಗಮನ ಸೆಳೆದವು. ಚಿಕ್ಕಬಳ್ಳಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ, ಕನ್ನಡ ಪರ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಭಾಗವಹಿಸಿದ್ದರು.

 

About The Author

Leave a Reply

Your email address will not be published. Required fields are marked *