ರಘುನಾಥಪುರ ಗ್ರಾಮಸ್ಥರ ಆರೋಗ್ಯ ತಪಾಸಣೆ
1 min readರಘುನಾಥಪುರ ಗ್ರಾಮಸ್ಥರ ಆರೋಗ್ಯ ತಪಾಸಣೆ
ನ್ಯಾಯಾಂಗ ಇಲಾಖೆಯಿಂದ ಗ್ರಾಮಸ್ಥರ ಆರೋಗ್ಯ ತಪಾಸಣೆ
ಗ್ರಾಮಸ್ಥರು ನೀಡಿದ ದೂರಿನ ಕಾರಣ ಕಾರ್ಯಕ್ರಮ
ಸ್ಥಳೀಯ ಇಂಡೇನ್ ಪ್ರೆವೇಟ್ ಲಿಮಿಟೆಡ್ ಕಾರ್ಖಾನೆ ವಿರುದ್ಧ ಸ್ಥಳೀಯ ಗ್ರಾಮಸ್ಥರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನ್ಯಾಯಾಂಗ ಇಲಾಖೆ ಸಹಯೋಗದೊಂದಿಗೆ ರಘುನಾಥಪುರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಆರೋಗ್ಯ ತಪಾಸರ ಶಿಬಿರ ಆಯೋಜನೆ ಮಾಡಲಾಗಿತ್ತು.
ಸ್ಥಳೀಯ ಇಂಡೇನ್ ಪ್ರೆವೇಟ್ ಲಿಮಿಟೆಡ್ ಕಾರ್ಖಾನೆ ವಿರುದ್ಧ ಸ್ಥಳೀಯ ಗ್ರಾಮಸ್ಥರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನ್ಯಾಯಾಂಗ ಇಲಾಖೆ ಸಹಯೋಗದೊಂದಿಗೆ ರಘುನಾಥಪುರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಆರೋಗ್ಯ ತಪಾಸರ ಶಿಬಿರ ಆಯೋಜನೆ ಮಾಡಲಾಗಿತ್ತು. ಶಿಬಿರದಲ್ಲಿ ನೂರಾರು ಗ್ರಾಮಸ್ಥರು ಪಾಲ್ಗೊಂಡು ಬಿಪಿ, ಶುಗರ್, ತಲೆನೋವು, ಜ್ವರ, ಶ್ವಾಸಕೋಶ ಸಂಬoಧಿ ಕಾಯಿಲೆಗಳು ಸೇರಿದಂತೆ ಹಲವು ಸಮಸ್ಯೆಗಳಿಗೆ ಆರೋಗ್ಯ ಇಲಾಖೆಯಿಂದ ಪ್ರಾಥಮಿಕವಾಗಿ ಚಿಕಿತ್ಸೆ ಪಡೆಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡ ಆರ್.ಎಂ ಮಹದೇವ್ ಮಾತನಾಡಿ, ರಘುನಾಥಪುರ ಗ್ರಾಮಸ್ಥರು ಆರೋಗ್ಯ ಸಮಸ್ಯೆ ಕುರಿತಾಗಿ ನ್ಯಾಯಾಲಯಕ್ಕೆ ದೂರು ನೀಡಿದ್ದು, ಈ ಸಂಬoಧ ನ್ಯಾಯಾಂಗ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಗ್ರಾಮಸ್ಥರ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದರು.
ಶಿಬಿರದಲ್ಲಿ ಪಾಲ್ಗೊಂಡ ಗ್ರಾಮಸ್ಥರಲ್ಲಿ ಸಾಮಾನ್ಯವಾಗಿ ಜ್ವರ, ಮೈ ಕೈ ನೋವು, ತಲೆ ನೋವು, ಸೇರಿದಂತೆ ಉಸಿರಾಟದ ತೊಂದರೆ ಕಂಡುಬರುತ್ತಿದ್ದು. ಈ ಕುರಿತು ಆರೋಗ್ಯ ಇಲಾಖೆ ಸೂಕ್ಷ ವಾಗಿ ಗಮನಿಸಬೇಕಿದೆ. ಗ್ರಾಮಸ್ಥರ ಆರೋಗ್ಯ ಸಮಸ್ಯೆಗಳಿಗೆ ಮುಖ್ಯ ಕಾರಣ ಸ್ಥಳೀಯವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇಂಡೇನ್ ಕಾರ್ಖಾನೆಯಿಂದ ಹೊರಬರುವ ವಿಷಕಾರಿ ಅನಿಲವೇ ಆಗಿದೆ. ಕಾರ್ಖಾನೆಯನ್ನು ಕೂಡಲೇ ವರ್ಗಾಯಿಸುವ ಮೂಲಕ ಸ್ಥಳೀಯರ ಜೀವ ಉಳಿಸಬೇಕಿದೆ. ಎಂದು ಹೇಳಿದರು.