ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕರ ಭೇಟಿ
1 min readಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕರ ಭೇಟಿ
ಗಂಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ
ಮಾಜಿ ಶಾಸಕ ಹರ್ಷವರ್ಧನ್ ತಗ್ಗು ಪ್ರದೇಶಗಳಿಗೆ ಭೇಟಿ
ದಕ್ಷಿಣ ಕಾಶಿ ನಂಜನಗೂಡು ನಗರದ ಕಪಿಲಾ ನದಿ ಪ್ರವಾಹಕ್ಕೆ ಸಿಲುಕಿ ತತ್ತರಿಸಿರುವ ನಿವಾಸಿಗಳ ಬಡಾವಣೆಗಳಿಗೆ ಮಾಜಿ ಶಾಸಕ ಬಿ. ಹರ್ಷವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂಜನಗೂಡು ಪಟ್ಟಣದ ಹಳ್ಳದ ಕೇರಿ, ತೋಪಿನ ಬೀದಿ, ಸರಸ್ವತಿ ಕಾಲೋನಿ, ಗಿರಿಜ ಕಲ್ಯಾಣ ಮಂಟಪದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ನಿರಾಶ್ರಿತರಿಗೆ ಧೈರ್ಯ ತುಂಬಿದರು. ಮಾಜಿ ಶಾಸಕರಿಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿ. ಚಿಕ್ಕರಂಗನಾಯಕ ಸಾಥ್ ನೀಡಿದರು.
ಬಳಿಕ ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಮತ್ತೆ ನಂಜನಗೂಡು ಪಟ್ಟಣದ ತಗ್ಗು ಪ್ರದೇಶಗಳಿಗೆ ಕಪಿಲಾ ನದಿ ನೀರು ನುಗ್ಗಿ ನಿವಾಸಿಗಳಿಗೆ ತುಂಬಾ ತೊಂದರೆಯಾಗಿದೆ. ಮುಳುಗಡೆಯಾದ ಮನೆಗಳಿಗೆ ನಮ್ಮ ಸರ್ಕಾರ ಇದ್ದ ಸಂದರ್ಧದಲ್ಲಿ 10 ಸಾವಿರ ಪರಿಹಾರ ನೀಡಿದ್ದೇವು. ಈಗಿರುವ ರಾಜ್ಯ ಸರ್ಕಾರ ದುರಸ್ತಿಯಾಗಿರುವ ಮನೆಗಳ ಬಗ್ಗೆ ವರದಿ ತೆಗೆದುಕೊಂಡು ಸೂಕ್ತ ಪರಿಹಾರ ನೀಡಬೇಕು. ಆಹಾರ ಸೇರಿದಂತೆ ಇನ್ನಿತರ ವಸ್ತುಗಳನ್ನು ತೆಗೆದುಕೊಳ್ಳಲು ಅವರಿಗೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಕಾರ್ಖಾನೆಯವರು ಮಾತ್ರ ನೆರವು ನೀಡುತಿದ್ದಾರೆ. ಆದರೆ, ಸರ್ಕಾರ ಯಾವುದೇ ನೆರವು ನೀಡಿಲ್ಲ. ಸರ್ಕಾರದಲ್ಲಿ ಹಣ ಇದೆಯೋ ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಿದೆ. ನಿರಾಶ್ರಿತರಿಗೆ ನೆರವು ನೀಡಲು ದುಡ್ಡಿಲ್ಲವೇ ಎಂದು ಪ್ರಶ್ನಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಮೂರು ಲಕ್ಷದವರೆಗೂ ಪರಿಹಾರ ನೀಡಿದ್ದೇವೆ. ಈಗಾಗಲೇ ಶ್ರೀ ನಂಜು0ಡೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದಿಂದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಸರಸ್ವತಿ ಕಾಲೋನಿಯಲ್ಲಿ ಸ್ವಚ್ಛತೆ ಇಲ್ಲ ಡೆಂಗ್ಯೂ ಬರುವ ಸಾಧ್ಯತೆ ಇದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಿಕ್ಕರಂಗನಾಯಕ, ನಗರ ಬಿಜೆಪಿ ಅಧ್ಯಕ್ಷ ಸಿದ್ದರಾಜು, ವೆಂಕಟೇಶ್ , ಆನಂತ್ ಇದ್ದರು.