ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಪಡಿತರ ದಾಸ್ತಾನು ಮಾಡಿದ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

1 min read

ಪಡಿತರ ದಾಸ್ತಾನು ಮಾಡಿದ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬಾಗೇಪಲ್ಲಿಯಲ್ಲಿ ಸಿಪಿಎಂನಿoದ ಪ್ರತಿಭಟನೆ ನಡೆಸಿ ಒತ್ತಾಯ
ಬಡವರ ಹಸಿವು ನೀಗಿಸುವ ವಿವಿಧ ಯೋಜನೆಗಳ ಪಡಿತರ ಸಾಮಗ್ರಿ ದಾಸ್ತಾನು ಮಾಡಿದ್ದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ ಮುನಿವೆಂಕಟಪ್ಪ ಎಚ್ಚರಿಕೆ ನೀಡಿದರು.

ಈ ವೇಳೆ ಎಂ.ಪಿ ಮುನಿವೆಂಕಟಪ್ಪ ಮಾತನಾಡಿ, ಕಳೆದ ಜು.19 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಿಇಓ, ತಹಶೀಲ್ದಾರ್ ಮನಿಷಾ ಮಹೇಶ್ ಎಸ್ ಪತ್ರಿ ಮತ್ತಿತರ ಅಧಿಕಾರಿಗಳು ತಾಲೂಕಿನ ಪೂಲವಾರಪಲ್ಲಿಯಲ್ಲಿ ವಿವಿಧ ಯೋಜನೆಗಳ ಲಕ್ಷಾಂತರ ರೂ.ಗಳ ಮೌಲ್ಯದ ಪಡಿತರ ಸಾಮಗ್ರಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದನ್ನು ಪತ್ತೆ ಮಾಡಿ ಸೀಜ್ ಮಾಡಲಾಗಿದೆ. ಆದರೆ ಆ ಅಕ್ರಮದಲ್ಲಿ ತೊಡಗಿದ್ದವರು ವಿರುದ್ಧ ಕ್ರಮ ಜರುಗಿಸುವಲ್ಲಿ ವಿಳಂಬ ಮಾಡಲಾಗುತ್ತಿದೆ. ಕೆಲವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆದರೆ ಅಕ್ರಮ ಪಡಿತರ ದಾಸ್ತಾನು ಮಾಡುವ ಜಾಲದ ಹಿಂದೆ ರಾಜಕೀಯ ಪ್ರಭಾವಿಗಳು ಭಾಗಿಯಾಗಿದ್ದು, ಸಮಗ್ರ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಹೋರಾಟಗಳನ್ನು ಮಾಡಬೇಕಾಗುತ್ತದೆ ಎಂದು ಮುನಿವೆಂಕಟಪ್ಪ ಎಚ್ಚರಿಸಿದರು.

ಇದೇ ವೇಳೆ ಮುಖಂಡ ಚನ್ನರಾಯಪ್ಪ ಮಾತನಾಡಿ,ಈ ಅಕ್ರಮ ದಾಸ್ತಾನು ಮಾಡಿದ ಆರೋಪಿಗಳ ಬಗ್ಗೆ ಮಾಹಿತಿ ತಿಳಿದಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಈ ಅಕ್ರಮ ದಾಸ್ತಾನು ಕುರಿತು ತನಿಖೆಯು ಸಮರ್ಪಕವಾಗಿ ನಡೆಯುತ್ತಿಲ್ಲ, ಗೊಂದಲಗಳನ್ನು ಉಂಟು ಮಾಡುತ್ತಿದೆ. ಇದರ ಹಿಂದೆ ರಾಜಕೀಯ ಬಲಾಢ್ಯರ ಒತ್ತಡಕ್ಕೆ ಮಣಿದು ತನಿಖೆಯನ್ನು ಹಳ್ಳ ಹಿಡಿಸಬಾರದು.ಇದರಲ್ಲಿ ಹಲವು ಇಲಾಖೆಗಳ ಅಧಿಕಾರಿಗಳೂ ಭಾಗಿಯಾಗಿರುವ ಅನುಮಾನವಿದ್ದು, ಈ ಅಕ್ರಮದಲ್ಲಿ ಎಂತವರೇ ಇದ್ದರೂ ನಿಷ್ಪಕ್ಷಪಾತವಾಗಿ ತನಿಖೆ ಮಾಡಿ, ಬಡವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ನಂತರ ಪ್ರತಿಭಟನಾಕಾರರಿಂದ ತಹಶೀಲ್ದಾರ್ ಮನಿಷಾ ಮಹೇಶ್ ಎಸ್ ಪತ್ರಿಯವರು ಮನವಿ ಪತ್ರ ಸ್ವೀಕರಿಸಿ ಮಾತನಾಡಿ,ಈ ಪ್ರಕರಣದ ಹಿಂದೆ ಯಾರೇ ಇದ್ದರೂ ಪಾರದರ್ಶಕ ತನಿಖೆ ಕೈಗೊಳ್ಳಲಾಗುತ್ತದೆ. ಹಾಗೂ ವರದಿಯ ನಂತರ ತಪ್ಪಿತಸ್ಥರ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಪಿಎಂ ಮುಖಂಡರಾದ ಡಾ.ಅನಿಲ್ ಕುರ್ಮಾ, ರಘುರಾಮರೆಡ್ಡಿ, ಮುಸ್ತಾನ, ಮುನಿಯಪ್ಪ, ವಾಲ್ಮೀಕಿ ಅಶ್ವತ್ಥಪ್ಪ, ದೇವಿಕುಂಟೆ ಶ್ರೀನಿವಾಸ್, ಬಿಳ್ಳೂರು ನಾಗರಾಜ್, ರಾಮಂಜಿ, ಚಲಪತಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *