ವಯನಾಡ್ಗೆ ನರೇಂದ್ರ ಮೋದಿ ಆಗಮನ, ಪ್ರಧಾನಿಯನ್ನು ಸ್ವಾಗತಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್
1 min readಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (10 ಆಗಸ್ಟ್ 2024) ಕೇರಳಕ್ಕೆ ಆಗಮಿಸಿದರು. ಬೆಳಗ್ಗೆ 11:20ರ ಸುಮಾರಿಗೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಾಗತಿಸಿದರು.
ಇಲ್ಲಿಂದ ಪ್ರಧಾನಿ ವಯನಾಡ್ಗೆ ಆಗಮಿಸಿ ಭೂಕುಸಿತ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಮತ್ತು ಆ ಪ್ರದೇಶದಲ್ಲಿ ನಡೆಯುತ್ತಿರುವ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ಕುರಿತ ಕೆಲಸ ಕಾರ್ಯಗಳ ಬಗ್ಗೆ ಮೌಲ್ಯಮಾಪನ ಮಾಡಲಿದ್ದಾರೆ. ನಂತರ ಭೂಕುಸಿತದಿಂದ ಸಮಸ್ಯೆಗೊಳಗಾದ ಸಂತ್ರಸ್ತರನ್ನು, ಗಾಯಗೊಂಡು ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಇರುವ ಸಂತ್ರಸ್ತರನ್ನು ಸಹ ಪ್ರಧಾನಿ ಭೇಟಿ ಮಾಡಲಿದ್ದಾರೆ.
ಈತನ್ಮಧ್ಯೆ, ವಯನಾಡ್ಗೆ ಭೇಟಿ ನೀಡಲು ನಿರ್ಧರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಯನಾಡ್ ಮಾಜಿ ಸಂಸದ, ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದ್ದಾರೆ. ಈ ಭೇಟಿಯ ನಂತರ ಪ್ರಧಾನಿ ಮೋದಿ ಅವರು ವಯನಾಡ್ ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುತ್ತಾರೆ ಎಂದು ನನಗೆ ನಂಬಿಕೆ ಇದೆ ಎಂದು ರಾಹುಲ್ ಗಾಂಧಿ ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ಭೀಕರ ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡಿಗೆ ಬಂದಿದ್ದಕ್ಕಾಗಿ ಧನ್ಯವಾದಗಳು ಮೋದಿ ಜೀ. ಇದು ಉತ್ತಮ ನಿರ್ಧಾರ. ಪ್ರಧಾನಿಯವರು ವಿನಾಶದ ತೀವ್ರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ, ಅವರು ದುರಂತ ಸ್ಥಳವನ್ನು ಮೊದಲ ಬಾರಿಗೆ ನೋಡಿದರೆ, ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ’ ಎಂದು ನಂಬಿಕೆ ಇದೆ ಎಂದು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ಮೋದಿಯ ಸಂಪೂರ್ಣ ವೇಳಾಪಟ್ಟಿ
- ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರ ಶನಿವಾರ ಬೆಳಗ್ಗೆ 11 ಗಂಟೆಗೆ ಕೇರಳದ ಕಣ್ಣೂರಿಗೆ ತಲುಪಿ ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ
- ಇದಾದ ಬಳಿಕ ಮೋದಿ ಮಧ್ಯಾಹ್ನ 12.15ಕ್ಕೆ ಭೂಕುಸಿತದಿಂದ ಹಾನಿಗೊಳಗಾದ ನೆಲದ ಪ್ರದೇಶಗಳಿಗೆ ಭೇಟಿ, ಅಲ್ಲಿ ಅವರು ನಡೆಯುತ್ತಿರುವ ತೆರವು ಕಾರ್ಯಾಚರಣೆಗಳ ಬಗ್ಗೆ ರಕ್ಷಣಾ ತಂಡಗಳಿಂದ ಮಾಹಿತಿಯನ್ನು ತೆಗೆದುಕೊಳ್ಳುತ್ತಾರೆ.
- ಇದಾದ ನಂತರ ಪ್ರಧಾನಿಯವರು ಭೂಕುಸಿತದಿಂದ ಬದುಕುಳಿದಿರುವ ಪ್ರಸ್ತುತ ಪುನರ್ವಸತಿ ಕೇಂದ್ರದಲ್ಲಿ ಇರುವ ಶಿಬಿರ ಮತ್ತು ಆಸ್ಪತ್ರೆಗೆ ಹೋಗುತ್ತಾರೆ. ಅಲ್ಲಿ ಮೋದಿ ಸಂತ್ರಸ್ತ ಜನರೊಂದಿಗೆ ಮಾತನಾಡಿ ಅವರ ದೂರುಗಳನ್ನು ಆಲಿಸಲಿದ್ದಾರೆ.
- ಇದಾದ ನಂತರ ಪ್ರಧಾನಿಯವರು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಅಲ್ಲಿ ಅವರು ಘಟನೆ ಮತ್ತು ನಡೆಯುತ್ತಿರುವ ಪರಿಹಾರ ಪ್ರಯತ್ನಗಳ ಬಗ್ಗೆ ವಿವರವಾಗಿ ಮಾಹಿತಿ ಪಡೆಯಲಿದ್ದಾರೆ.
ಈ ವಾರದ ಆರಂಭದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿಯವರ ವಯನಾಡ್ ಭೇಟಿಯನ್ನು ಘೋಷಿಸಿದ್ದರು. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಮತ್ತು ಗಂಭೀರ ವಿಪತ್ತು ಎಂದು ಘೋಷಿಸುವ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.
ಜುಲೈ 30 ರಂದು, ವಯನಾಡಿನ ಚುರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಭಾರಿ ಭೂಕುಸಿತ ಸಂಭವಿಸಿ ವ್ಯಾಪಕ ವಿನಾಶವನ್ನು ಉಂಟುಮಾಡಿತ್ತು, ಈ ಭೂಕುಸಿತದಲ್ಲಿ 400ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, 150 ಮಂದಿ ನಾಪತ್ತೆಯಾಗಿದ್ದಾರೆ.
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #ctv -news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #rtodaybreakingnews #chikkaballapuranews #flashnews #liveupdatenews @ctv-news