ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ
1 min readವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ
ಕರ್ನಾಟಕ ವಿಕಲಚೇತನರ ಒಕ್ಕೂಟದಿಂದ ಭರಣಿ
ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರೋ ಕೃತ್ಯ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಕರ್ನಾಟಕ ವಿಕಲಚೇತನರ ಒಕ್ಕೂಟದಿಂದ ಇಂದು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊಲ್ಕತ್ತಾದಲ್ಲಿ ವೈದ್ಯೆಯನ್ನು ಅತ್ಯಾಚಾರ ಎಸಗಿ, ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ, ದೇಶಾದ್ಯಂತ ಈಗಾಗಲೇ ವೈದ್ಯರು ಪ್ರತಿಭಟನೆ ಮಾಡುತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕ ವಿಕಲಚೇತನರ ಒಕ್ಕೂಟದಿಂದ ಅಂಗವಿಕಲರು ಶಿಡ್ಲಘಟ್ಟ ವೃತ್ತದಲ್ಲಿ ಮೇಣದ ದೀಪ ಹಿಡಿದು ಕೊಲ್ಕತ್ತಾ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಈ ವೇಳೆ ಕರ್ನಾಟಕ ವಿಕಲಚೇತನರ ಒಕ್ಕೂಟ ಸದಸ್ಯ ಕಿರಣ್ ನಾಯಕ್ ಮಾತಾನಾಡಿ, ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಮಾತ್ತು ಕೊಲೆ ವಿಚಾರ ಘೋರವಾಗಿದ್ದು, ಈ ಹತ್ಯೆಯನ್ನು ಅಲ್ಲಿನ ಸರ್ಕಾರ ಹತ್ಯೆಯಲ್ಲ ಆತ್ಮಹತ್ಯೆ ಎಂದು ರಿಪೋರ್ಟ್ ವರದಿ ಮಾಡುತ್ತಿದ್ದಾರೆ. ಇದು ಸರಿಯಲ್ಲ, ಈ ವಿಚಾರ ಅಲ್ಲಿನ ಸರ್ಕಾರ ತೀವ್ರವಾಗಿ ತೆಗೆದುಕೊಂಡು ಇದರ ಇಂದೆ ಇರುವ ಯಾವೊಬ್ಬ ಆರೋಪಿಯನ್ನು ಬಿಡದೆ ಬಂಧಿಸಿ ತಕ್ಕ ಶಿಕ್ಷೆ ಕೊಡಬೇಕೆಂದು ಆಗ್ರಹ ಮಾಡಿದರು.
ಈ ವೇಳೆ ಮರಣ ಹೊಂದಿರುವ ವೈದ್ಯೆಗೆ ಆತ್ಮಕ್ಕೆ ಶಾಂತಿ ಸಿಗಲೆಂದು ಕ್ಯಾಂಡಲ್ ದೀಪ ಬೆಳಗಿದರು. ಈ ವೇಳೆ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಮಂಜುಳಾ, ಕರ್ನಾಟಕ ವಿಕಲಚೇತನರ ಒಕ್ಕೂಟ ಸದಸ್ಯರು ಭಾಗಿಯಾಗಿದ್ದರು.