ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಜಿಪಂ ಸಿಇಒ ಕಟ್ಟು ನಿಟ್ಟಿನ ಸೂಚನೆ
1 min readಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆ ಲೋಪದೋಷವಾಗದಂತೆ ನಡೆಸಲು
ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಜಿಪಂ ಸಿಇಒ ಕಟ್ಟು ನಿಟ್ಟಿನ ಸೂಚನೆ
ಚಿಕ್ಕಬಳ್ಳಾಪುರ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 27 ರಂದು ನಡೆಯಲಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಾಗದಂತೆ ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ ಅವರು ನೇಮಿಸಲ್ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಗುರುವಾರ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿ ಪರೀಕ್ಷೆ ಪೂರ್ವ ಸಿದ್ದತಾ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಚಿಕ್ಕಬಳ್ಳಾಪುರ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 6056 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಕೊಠಡಿಗಳ ಸ್ವಚ್ಚತೆ, ಗಾಳಿಯ ವ್ಯವಸ್ಥೆ, ಶೌಚಾಲಯ, ಸುಸ್ಥಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆಯಾಗಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನೇಮಿಸಲ್ಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಪರೀಕ್ಷಾ ದಿನದಂದು ಸಂವೀಕ್ಷೆಕರಿಗೆ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಹಾಳೆಗಳು ವಿತರಣೆಯಾಗಿರುವುದನ್ನು ಖಾತರಿ ಪಡಿಸಿಕೊಳ್ಳವುದು, ಆಯೋಗ ನೀಡಲಾದ ಪರೀಕ್ಷೆಗೆ ಸಂಬ0ಧಿಸಿದ ವೇಳೆ ಹಾಗೂ ನಿರ್ದೇಶನಗಳನ್ನು ನಿಖರವಾಗಿ ಪಾಲಿಸಬೇಕು. ಪರೀಕ್ಷೆಯನ್ನು ಗೌಪ್ಯತೆಯಿಂದಲೂ, ನಿಯಮಬದ್ಧವಾದ ನಿರ್ವಹಣೆಯಿಂದಲೂ ಕೈಗೊಂಡು ಪರೀಕ್ಷಾ ದಕ್ಷೆತೆಯನ್ನು ಕಾಪಾಡಬೇಕು ಎಂದರು.
ಪರೀಕ್ಷಾ ದಿನ ಮಾರ್ಗಾಧಿಕಾರಿಗಳ ತಂಡದ ಬೆಂಗಾವಲಿಗೆ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು, ಪರೀಕ್ಷಾ ಕೇಂದ್ರ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತವಾಗಬೇಕು. ಪರೀಕ್ಷಾ ಕೇಂದ್ರ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮವಹಿಸಬೇಕು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತç ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಫ್ರಿಸ್ಕಿಂಗ್ ಮಾಡಿಸತಕ್ಕದ್ದು, ಪರೀಕ್ಷಾರ್ಥಿಗಳು ಕೊಠಡಿಯೊಳಗೆ ಮೊಬೈಲ್ ಪೋನ್ ತೆಗೆದುಕೊಂಡು ಹೋಗದಂತೆ ಸೂಚಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ವಿಷಯ ಪರೀವಿಕ್ಷಕರಾದ ಜಮೀರ್ ಪಾಷ, ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.