ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಕಡೇ ಶ್ರಾವಣ ಶನಿವಾದ ಪ್ರಯುಕ್ತ ಶ್ರೀಕೃಷ್ಣ ರೂಪದಲ್ಲಿ ಶ್ರೀನಿವಾಸ

1 min read

ಕಡೇ ಶ್ರಾವಣ ಶನಿವಾದ ಪ್ರಯುಕ್ತ ಶ್ರೀಕೃಷ್ಣ ರೂಪದಲ್ಲಿ ಶ್ರೀನಿವಾಸ

ವಿವಿಧ ದೇವಾಲಯಗಳಿಗೆ ದೀಪಾಲಂಕಾರ

ಸಹಸ್ರಾರು ಭಕ್ತರು ಸಾಲಿನಲ್ಲಿ ನಿಂತು ದೇವರ ದರ್ಶನ

ಇಂದು ಶ್ರಾವಣ ಮಾಸದ ಕೊನೆಯ ಶನಿವಾರ, ಹಾಗಾಗಿ ಬಾಗೇಪಲ್ಲಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ವಿಶೇಷವಾಗಿ ಶ್ರೀ ಲಕ್ಷ್ಮಿ ವೆಂಕಟೇಶ್ವರ, ಶನೈಶ್ಚರ, ಆಂಜನೇಯ ದೇಗುಲಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು.

ಬಾಗೇಪಲ್ಲಿ ತಾಲ್ಲೂಕಿನ ಹೊರವಲಯದ ದೇವರಗುಡಿಪಲ್ಲಿ ಇತಿಹಾಸ ಪ್ರಸಿದ್ಧ ಭೂನೀಲ ಸಮೇತ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಗೆ
ಮುಂಜಾನೆಯಿ0ದಲೇ ಭಕ್ತರು ವೆಂಕಟರಮಣ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಜನ ಸಾಗರವೇ ಸಾಲುಗಟ್ಟಿ ನಿಂತಿತ್ತು. ಮುಂಜಾನೆ ಮೂರು ಗಂಟೆಯಿ0ದ ದೇವಾಲಯದಲ್ಲಿ ವಿಶೇಷ ಅಭಿಷೇಕ, ದೇವರಿಗೆ ಅಲಂಕಾರ, ಹಾಗೂ ಪೂಜೆಗಳು ನಡೆದವು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಕೆ.ಪ್ರಕಾಶ್ ರಾವ್ ಮಾತನಾಡಿ, ಶ್ರಾವಣ ಮಾಸದ ಕೊನೆಯ ಶನಿವಾರ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯನ್ನು ಸ್ಮರಿಸಿದ್ರೆ, ಭೂಲೋಕದಲ್ಲಿ ಭಕ್ತರ ಬೇಡಿಕೆಗಳು ಈಡೇರುತ್ತವೆ ಅನ್ನೋ ನಂಬಿಕೆ ಇದೆ. ಭಕ್ತರ ಇಷ್ಟಾರ್ಥಗಳು ಈಡೇರಲಿ, ಕಷ್ಟಗಳು ದೂರವಾಗಲಿ, ನಾಡಿಗೆ ಉತ್ತಮ ಮಳೆ ಬೆಳೆಯಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಭಕ್ತರು ವಿಶೇಷವಾಗಿ ವೆಂಕಟೇಶ್ವರಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿದ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಕೊಂಡರು. ಭಕ್ತರಿಗಾಗಿ ಬಹುತೇಕ ಎಲ್ಲಾ ದೇವಾಲಯಗಳಲ್ಲಿಯೂ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಲಕ್ಷ್ಮಿವೆಂಕಟೇಶ್ವರ ಸ್ವಾಮಿ ದೇವಾಲಯದ ಮುಂಭಾಗದಿ0ದ ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಅತಿ ಉದ್ದನೆಯ ಸಾಲಿನಲ್ಲಿ ನಿಂತು ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು.

ವಿಶೇಷ ಅಲಂಕಾರ: ಕೊನೆಯ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದ ವಿವಿಧ ಪುಷ್ಪಗಳಿಂದ ಮತ್ತು ತಳಿರು ತೋರಣಗಳಿಂದ ಸಿಂಗಾರಗೊಳಿಸಲಾಗಿತ್ತು. ಪ್ರಧಾನ ಅರ್ಚಕ ಕೆ.ಪ್ರಕಾಶ್‌ರಾವ್ ನೇತೃತ್ವದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಗೆ ದ್ವಾಪರ ಯುಗದ ಶ್ರೀಕೃಷ್ಣ ರೂಪದಲ್ಲಿ ಕಂಗೊಳಿಸಿದ್ದು ವಿಶೇಷವಾಗಿತ್ತು.

About The Author

Leave a Reply

Your email address will not be published. Required fields are marked *