ಅಧ್ಯಕ್ಷರಾಗಿ ಕಾಂಗ್ರೆಸ್‌ನ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷರಾಗಿ ಜೆಡಿಎಸ್‌ನ ರಿಹಾನ ಬಾನು
1 min readನಂಜನಗೂಡು ನಗರಸಭೆಯಲ್ಲಿ ಮುದುಡಿದ ಕಮಲ
ಅಧ್ಯಕ್ಷರಾಗಿ ಕಾಂಗ್ರೆಸ್‌ನ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷರಾಗಿ ಜೆಡಿಎಸ್‌ನ ರಿಹಾನ ಬಾನು
ನಂಜನಗೂಡು ನಗರ ಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಸಂಸದ ಸುನಿಲ್ ಬೋಸ್ ತಂತ್ರದಿ0ದ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಂಜನಗೂಡು ನಗರಸಭೆಯಲ್ಲಿ ಒಟ್ಟು 31 ಸದಸ್ಯರ ಸಂಖ್ಯಾಬಲ ಹೊಂದಿದ್ದು, ಬಿಜೆಪಿ 15, ಕಾಂಗ್ರೆಸ್ 3 ಸದಸ್ಯರಿದ್ದಾರೆ.
ನಂಜನಗೂಡು ನಗರ ಸಭ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಸಂಸದ ಸುನಿಲ್ ಬೋಸ್ ತಂತ್ರದಿ0ದ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ನಂಜನಗೂಡಿನಲ್ಲಿ ವಿಫಲವಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಎರಡು ಪಕ್ಷಗಳ ಸದಸ್ಯರ ಒಟ್ಟು ಬಲ 18 ಸದಸ್ಯರು ಇದ್ದರೂ ನಂಜನಗೂಡು ನಗರಸಭೆ ಆಡಳಿತ ಹಿಡಿಯಲು ಸಾಧ್ಯವಾಗಿಲ್ಲ. ಬಿಜೆಪಿಯ ನಾಲ್ಕು ಮಂದಿ ಸದಸ್ಯರು ಕೈಕೊಟ್ಟ ಕಾರಣ ನಂಜನಗೂಡಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಗಾದೆಯ ಅಭ್ಯರ್ಥಿಯಾಗಿದ್ದ ಶ್ರೀಕಂಠ ಸ್ವಾಮಿ 16 ಮತ ಪಡೆದು ಅಧ್ಯಕ್ಷರಾದರೆ, ಜೆಡಿಎಸ್ ಪಕ್ಷದ ರಿಹಾನ ಬಾನು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯ ಕ್ಷೇತ್ರವಾಗಿರುವ ದಕ್ಷಿಣ ಕಾಶಿ ನಂಜನಗೂಡಿನ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಸಂಸದ ಸುನಿಲ್ ಬೋಸ್ ತಂತ್ರಗಳಿಗೆ ಕಮಲ ಮುದುಡಿದೆ. ನಂತರ ಮಾತನಾಡಿದ ಸಂಸದರು ಮತ್ತು ಶಾಸಕರು, ರಾಜ್ಯದಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿವೆ, ಮುಂಬರುವ ದಿನಗಳಲ್ಲಿ ನಂಜನಗೂಡು ಧಾರ್ಮಿಕ ಪುಣ್ಯಕ್ಷೇತ್ರ ವಾಗಿರುವ ದೆಸೆಯಿಂದ ಹೆಚ್ಚು ಅಭಿವೃದ್ಧಿಪಡಿಸಲು ನೂತನ ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮುಂದಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೊತೆಗೆ ಶಾಸಕರು ಮತ್ತು ಸಂಸದರಾಗಿ ಸದಾ ಅವರ ಜೊತೆಗೂಡಿ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗುತ್ತೇವೆ, ಇಂದಿನ ಅಧಿಕಾರದ ಅವಧಿಯಲ್ಲಿ ನಡೆದಿರುವ ಲೋಪದೋಷಗಳ ಬಗ್ಗೆ ಪರಿಶೀಲಿಸಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಶಾಸಕ ಮತ್ತು ಸಂಸದರು ಹೇಳಿದರು. ನೂತನ ಅಧ್ಯಕ್ಷ ಶ್ರೀಕಂಠ ಸ್ವಾಮಿ ಮತ್ತು ಉಪಾಧ್ಯಕ್ಷ ರಿಹಾನ ಬಾನು ಅವರಿಗೆ ಭಾರೀ ಹೂವಿನ ಹಾರ ಹಾಕಿ ಹರ್ಷ ವ್ಯಕ್ತಪಡಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಇದ್ದರು.