ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಸುಧಾಕರ್

1 min read

ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಸರ್ಕಾರಿ ಶಾಲೆಗೆ ಸೌಲಭ್ಯ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಸುಧಾಕರ್
ಉತ್ತಮ ಶಿಕ್ಷಕರಿಗೆ ಸನ್ಮಾನ, ರಾಧಾಕೃಷ್ಣನ್‌ಗೆ ಗೌರವ ಸಮರ್ಪಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಡಿಜಿಟಲ್ ಬೋರ್ಡ್, ಸ್ಮಾರ್ಟ್ ಟಿವಿ ಮತ್ತಿತರ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳು ಮತ್ತು ವಿವಿಧ ಕಂಪನಿಗಳು ಹೊಣೆಗಾರಿಕೆ ನಿಧಿ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಶಿಕ್ಷಣ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್, ರಾಜ್ಯದ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಮೂಲಸೌಕರ್ಯ ಒದಗಿಸಲು ರಾಜ್ಯ ಸರ್ಕಾರ ವಿವಿಧ ಕಂಪನಿಗಳು, ಕೈಗಾರಿಕೆಗಳು ಮತ್ತು ಸ್ವಯಂಸೇವಾ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ 2 ಸಾವಿರ ಕೋಟಿ ರೂಪಾಯಿ ಒಡಂಬಡಿಕೆ ಮಾಡಿಕೊಂಡಿದೆ ಎಂದರು.

ಪ್ರೌಢಶಾಲಾ ಹಂತದಿ0ದಲೇ ಭವಿಷ್ಯದಲ್ಲಿ ಉತ್ತಮ ಉದ್ಯೋಗವಕಾಶಗಳಿಗೆ ಪೂರಕವಾಗುವಂತೆ ಪ್ರತ್ಯೇಕ ಪಠ್ಯ ಕ್ರಮವನ್ನು ಪರಿಚಯಿಸಲು ಸಿದ್ದತೆಗಳು ನಡೆಯುತ್ತಿದ್ದು, ಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆ. ಚಿಕ್ಕಬಳ್ಳಾಪುರ ಜಿ¯್ಲೆ 26 ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳನ್ನು ಸ್ಮಾರ್ಟ್ ಆಗಿಸಲು ಬೆಂಗಳೂರಿನ ರೋಟರಿ ಸಂಸ್ಥೆ ಮುಂದಾಗಿದೆ. ಇತ್ತೀಗಷ್ಟೇ ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ್ದು, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಬೋಧಕೇತರ ಸಿಬ್ಬಂದಿ ನೇರ ನೇಮಕಾತಿಗೂ ಆದೇಶ ಹೊರಡಿಸಿದೆ ಎಂದರು.

ರಾಜ್ಯದ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಇದ್ದು, ಬೇಡಿಕೆಯೂ ಹೆಚ್ಚಾಗಿರುವುದರಿಂದ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಸರ್ಕಾರಕ್ಕಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗಗಳ ಶೈಕ್ಷಣಿಕ ಪ್ರಗತಿಗೆ ಮತ್ತು ಸಬಲೀಕರಣಕ್ಕೆ ಹೆಚ್ಚು ಸಹಕಾರಿಯಾಗಲಿದೆ ಎಂದರು. ಸುಸ್ಥಿರ ದೇಶ, ಸಮಾಜ ಕಟ್ಟುವ ಮುಖ್ಯ ಕೆಲಸ ಶಿಕ್ಷಕರ ಮೇಲಿದೆ. ಎಲ್ಲಾ ವೃತ್ತಿಗಿಂತ ಶಿಕ್ಷಕಕರ ವೃತ್ತಿಗೆ ಸಮಾಜದಲ್ಲಿ ಅಪಾರವಾದ ಗೌರವವಿದೆ. ಆ ಗೌರವ, ವೃತ್ತಿ ಧರ್ಮ, ಗುರು ಸಂಹಿತೆಯನ್ನು ಎಲ್ಲರೂ ಪಾಲಿಸುವ ಶಿಕ್ಷಕರು, ಉಪನ್ಯಾಸಕರು ನೀವಾಗಬೇಕು ಎಂದು ಕರೆ ನೀಡಿದರು.

ಮಕ್ಕಳಿಗೆ ತಂದೆ ತಾಯಿಯ ನಂತರ ಶಿಕ್ಷಕರೇ ಹೆಚ್ಚು ಸಂಪರ್ಕಿತರಾಗಿರುತ್ತಾರೆ. ಜಿಲ್ಲೆಯಲ್ಲಿ 2023-24ನೇ ಸಾಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಕಳೆಪೆಯಾಗುತ್ತಿದೆ. ಅದ್ದದರಿಂದ ಶಿಕ್ಷಕರು ಗುಣ ಮಟ್ಟದ ಫಲಿತಾಂಶವನ್ನು ಉತ್ತಮ ಪಡಿಸಲು ಹೆಚ್ಚು ಶ್ರಮವಹಿಸಬೇಕು, ಜೊತೆಗೆ ಮೌಲ್ಯಯುತ ಶಿಕ್ಷಣ ನೀಡಬೇಕು.ತಮ್ಮ ವೃತ್ತಿ ಧರ್ಮ ಪಾಲಿಸಿ ತಮ್ಮ ವೃತ್ತಿಯ ಬಗ್ಗೆ ಹೆಮ್ಮೆ ಪಡಬೇಕು. ಸುಸ್ಥಿರ ದೇಶ, ಸಮಾಜ ಕಟ್ಟುವ ಕೆಲಸ ಮಾಡಬೇಕು. ಸಮಾಜದಲ್ಲಿ ಎಲ್ಲರಿಗೆ ಶಿಕ್ಷಣ ದೊರೆತರೆ ಇತರೆ ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

ಈ ವೇಳೆ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರನ್ನು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಾಜಿ ರಾಷ್ಟ್ರಪತಿ ಹಾಗೂ ತತ್ವಶಾಸ್ತಜ್ಞ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರ ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಅಪರ ಜಿಲ್ಲಾಧಿಕಾರಿಡಾ.ಎನ್.ಭಾಸ್ಕರ್, ಬೈಲಾಂಜಿನಪ್ಪ, ಉಪನಿರ್ದೇಶಕ ಮುನಿಕೆಂಪೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್ ಇದ್ದರು.

 

About The Author

Leave a Reply

Your email address will not be published. Required fields are marked *