ಪ್ರಧಾನಿ ನರೇದಂ್ರ ಮೋದಿ 74ನೇ ಹುಟ್ಟುಹಬ್ಬ ಆಚರಣೆ
1 min readಪ್ರಧಾನಿ ನರೇದಂ್ರ ಮೋದಿ 74ನೇ ಹುಟ್ಟುಹಬ್ಬ ಆಚರಣೆ
ಚಿಕ್ಕಬಳ್ಳಾಪುರದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ ಕಾರ್ಯಕರ್ತರು
ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಹುಟ್ಟುಹಬ್ಬವನ್ನು ಇಂದು ಚಿಕ್ಕಬಳ್ಳಾಪುರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಇಂದು ಬಿಜೆಪಿ ಸದಸ್ಯತ್ವ ಅಭಿಯಾನ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆ ವೇದಿಕೆಯಲ್ಲಿಯೇ ಪ್ರಧಾನಿ ಹುಟ್ಟುಹಬ್ಬ ಆಚರಿಸಲಾಯಿತು.
ಹೌದು, ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬಿಜೆಪಿ ಬೆಳೆದು ನಿಂತಿದೆ. ಅಷ್ಟೇ ಮೂರನೇ ಬಾರಿಗೆ ಪ್ರಧಾನಿಯಾಗುವ ಮೂಲಕ ಜವಾಹರ್ ಲಾಲ್ ನೆಹರು ಅವರ ದಾಖಲೆಯನ್ನು ಪ್ರಧಾನಿ ನರೇದಂ್ರ ಮೋದಿ ಅವರು ಸರಿಗಟ್ಟಿದ್ದಾರೆ. ಇಂತಹ ಮಹಾನ್ ನಾಯಕರ ಹುಟ್ಟುಹಬ್ಬ ಇಂದು. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಸಂಸದ ಡಾ.ಕೆ. ಸುಧಾಕರ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದೊ0ದಿಗೆ ಆಚರಿಸಲಾಯಿತು.
ಚಿಕ್ಕಬಳ್ಳಾಪುರದಲ್ಲಿ ಇಂದು ಬಿಜೆಪಿ ಸದಸ್ಯತ್ವ ಅಭಿಯಾನದ ಸಬೆಯನ್ನು ಬಿಬಿ ರಸ್ತೆಯಲ್ಲಿರುವ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಅದೇ ವೇದಿಕೆಯಲ್ಲಿಯೇ ಕೇಕ್ ಕತ್ತರಿಸುವ ಮೂಲಕ ಪ್ರಧಾನಿಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಯಿತು. ಅಲ್ಲದೆ ಜಗ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಯುಷ್ಯ ಮತ್ತು ಆರೋಗ್ಯವನ್ನು ದೇವರ ದಯೆಪಾಲಿಸಲಿ ಎಂದು ಸಂಸ ಡಾ.ಕೆ. ಸುಧಾಕರ್ ಪ್ರಾರ್ಥಿಸಿದರು.
ಇನ್ನು ಸದಸ್ತ÷್ವ ಅಭಿಯಾನದಲ್ಲಿ ಕೇಕ್ ಕತ್ತರಿಸುವ ವೇಳೆ ಬಿಜೆಪಿ ವಿವಿಧ ಮೋರ್ಚಾಗಳ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿಜಯ ರಾಹಟ್ಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಸದಸ್ಯತ್ವ ಅಭಿಯಾನದ ಸಂಚಾಲಕ ಪಿ.ಸಿ.ಮೋಹನ್ ಸೇರಿದಂತೆ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಇತರರು ಭಾಗವಹಿಸಿದ್ದರು.