ನಂಜನಗೂಡಿನಲ್ಲಿ ಅರ್ಥಪೂರ್ಣ ವಿಶ್ವಕರ್ಮ ಜಯಂತಿ
1 min readನಂಜನಗೂಡಿನಲ್ಲಿ ಅರ್ಥಪೂರ್ಣ ವಿಶ್ವಕರ್ಮ ಜಯಂತಿ
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ದರ್ಶನ್
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯಯ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ಶಾಸಕ ದರ್ಶನ್ ಧ್ರುವನಾರಾಯಣ್ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್, ಪ್ರತಿ ಸಮುದಾಯದ ವೃತ್ತಿಗೆ ಬೇಕಾದ ಪರಿಕರಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಉಖನೀಯ. ವಿಶ್ವಕರ್ಮ ಸಮಯದಾಯದ ಹೆಗ್ಗಳಿಕೆಯನ್ನು ಹೇಳದೆ ಎಲ್ಲಾ ಸಮುದಾಯದ ಹೆಗ್ಗಳಿಕಯೊಂದಿಗೆ ನಾವು ಹೇಗೆ ಬೆರೆತಿವೆ ಎಂಬುದನ್ನು ಹೇಳಿದಾಗ ಮಾತ್ರ ವಿಶ್ವಕರ್ಮ ಜಯಂತಿ ಆಚರಣೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದರು.
ವಿಶ್ವಕರ್ಮ ಅವರ ಕೊಡುಗೆ ಅಪಾರವಾಗಿದೆ. ಅವರು ನೀಡಿದ ಕೊಡುಗೆಗಳು ಇನ್ನು ಜೀವಂತವಾಗಿದೆ, ಅದಕ್ಕೆ ಸಾವಿಲ್ಲ. ಈ ಸಮುದಾಯ ರಾಜಕೀಯವಾಗಿ ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ. ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು. ಇನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಯನಾ ಬಾನು, ನಗರಸಭಾ ಆಯುಕ್ತ ನಂಜು0ಡಸ್ವಾಮಿ, ತಾಪಂ ಇಒ ಜೆರಾಲ್ಡ್ ರಾಜೇಶ್, ನಗರಸಭಾ ಸದಸ್ಯೆ ಗಾಯತ್ರಿ, ವಿಶ್ವಕರ್ಮ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಚಂದ್ರು, ಉಪಾಧ್ಯಕ್ಷ ಶ್ರೀಕಂಠ, ನಂದಕುಮಾರ್ ಇದ್ದರು.