ಪ್ರತಿ ಕಲೆಯಲ್ಲೂ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರ
1 min readಪ್ರತಿ ಕಲೆಯಲ್ಲೂ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರ
ಶಿಡ್ಲಘಟ್ಟದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
ಪ್ರತಿಯೊ0ದು ಕಲೆಯಲ್ಲೂ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆಯಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತಯಾರಿ ಮಾಡಿಕೊಳ್ಳಲು ಅನುವು ಮಾಡಿಕೊಡಿ. ವಿದ್ಯೆಯೇ ಆಸ್ತಿ ಎಂದು ಹೇಳಿದರು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಶ್ರೀ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ಕುಲ ಬಾಂಧವರಿ0ದ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಅಮರನಾರಾಯಣಚಾರಿ, ಕಾಳಿಕಾಂಬ ಕಮ್ಮಟೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಮುನಿರತ್ನಾಚಾರಿ, ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಜನಾರ್ಧನ ಮೂರ್ತಿ, ಜಿಲ್ಲ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ಇದ್ದರು.