ಶಾಸಕರಿಂದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
1 min readಶಾಸಕರಿಂದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ತಂದೆಯ ಹಾದಿಯಲ್ಲಿ ರಾಜಕಾರಣ ಮಾಡುವು ಇಚ್ಛೆ
ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್
ಕಳೆದ ಒಂದು ವರ್ಷದಿಂದ ಹುಲ್ಲಹಳ್ಳಿ ಹುರ ಮುಖ್ಯ ರಸ್ತೆಯಲ್ಲಿ ವಾಹನ ಸವಾರರು ಮತ್ತು ಸಾರ್ವಜನಿಕರು ಸಂಚರಿಸಲು ಸಾಕಷ್ಟು ಸಮಸ್ಯೆ ಎದುರಾಗಿತ್ತು. ಶಾಸಕ ದರ್ಶನ್ ಧ್ರುವ ನಾರಾಯಣ್ ಅವರಿಗೆ ಸಾಕಷ್ಟು ಬಾರಿ ಸಾರ್ವಜನಿಕರು ರಸ್ತೆ ಕಾಮಗಾರಿ ವಿಚಾರವಾಗಿ ದೂರು ಹೇಳಿದ್ದರು. ಈ ಸಮಸ್ಯೆಗೆ ಪರಿಹಾರವಾಗಿ ಇಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.
ಹುಲ್ಲಹಳ್ಳಿ ಹುರ ಮುಖ್ಯ ರಸ್ತೆಯಲ್ಲಿ ವಾಹನ ಸವಾರರು ಮತ್ತು ಸಾರ್ವಜನಿಕರು ಸಂಚರಿಸಲು ಸಾಕಷ್ಟು ಸಮಸ್ಯೆ ಎದುರಾಗಿತ್ತು. ಇದನ್ನು ಅರಿತ ಶಾಸಕ ದರ್ಶನ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೋಳಿ ಅವರನ್ನು ಖುದ್ದಾಗಿ ಭೇಟಿ ಮಾಡಿ, 20 ಕೋಟಿ ಹಣವನ್ನು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಜೂರು ಮಾಡಿಸಿದ್ದು, ಇಂದು ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಹುಲ್ಲಹಳ್ಳಿ ಮತ್ತು ಹುರಕ್ಕೆ ತೆರಳುವ ಮುಖ್ಯ ರಸ್ತೆ ಪರಿಸ್ಥಿತಿ ನೋಡಿ ಅಭಿವೃದ್ಧಿಪಡಿಸಲು ಕಳೆದ ವಾರ ಲೋಕೋಪಯೋಗ ಸಚಿವ ಸತೀಶ್ ಜಾರಕಿಹೊಳಿ ಜೊತೆ ಖುದ್ದಾಗಿ ಮಾತುಕತೆ ನಡೆಸಿ, ೨೦ಕೋಟಿ ಮಂಜೂರು ಮಾಡಿಸಲಾಗಿದೆ. ಈಗ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಮಾಡಲಾಗಿದೆ. ಗುಣಮಟ್ಟದಲ್ಲಿ ಮತ್ತು ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.
ಮುಖ್ಯಮ0ತ್ರಿ ಸಿದ್ದರಾಮಯ್ಯನವರ ಆಶೀರ್ವಾದದಿಂದ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಪಣತೊಟ್ಟಿದ್ದೇನೆ. ಈಗಾಗಲೇಅನುದಾನವನ್ನು ನಂಜನಗೂಡು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮಂಜೂರು ಮಾಡಲಾಗಿದೆ. ತಮ್ಮ ತಂದೆ ಆರ್. ಧ್ರುವನಾರಾಯಣ್ ಅವರ ಹಾದಿಯಲ್ಲಿ ರಾಜಕಾರಣ ಮಾಡುತ್ತೇನೆ, ಅದಕ್ಕೆ ಎಲ್ಲರ ಆಶೀರ್ವಾದ ಮುಖ್ಯ ಎಂದು ಶಾಸಕರು ಕೋರಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಇತರರು ಮಾತನಾಡಿದರು. ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಮ್ಮ, ಕೆಪಿಸಿಸಿ ಸದಸ್ಯ ಬಸವರಾಜು, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಕುರಹಟ್ಟಿ ಮಹೇಶ್, ಶಂಕರ್, ಕೆ ಮಾರುತಿ ಇದ್ದರು.