ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಶಾಸಕ ಸುಬ್ಬಾರೆಡ್ಡಿ ಶಿಕ್ಷ್ಷಕರ ದಿನಾಚರಣೆಯಲ್ಲಿ ಭಾಗಿ

1 min read

ಗುಡಿಬಂಡೆಯಲ್ಲಿ ಶಿಕ್ಷಕರ ದಿನಾಚರಣೆ

ಶಾಸಕ ಸುಬ್ಬಾರೆಡ್ಡಿ ಶಿಕ್ಷ್ಷಕರ ದಿನಾಚರಣೆಯಲ್ಲಿ ಭಾಗಿ

ಸರ್ಕಾರಿ ಶಾಲೆಗಳಿಗೆ ಬಹುತೇಕ ಬಡಮಕ್ಕಳು ಬರುವುದರಿಂದ ಶಿಕ್ಷಕರು ಉತ್ತಮ ಶಿಕ್ಷಣ ನೀಡಿ ಉತ್ತಮ ಪ್ರಜೆಗಳನ್ನಾಗಿ ಮಾಡುವಂತೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು. ಇಂದು ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಶಾಸಕ ಸುಬ್ಬಾರೆಡ್ಡಿ ಮಾತನಾಡಿ, ಶಿಕ್ಷಕರಿಗೆ ಸಮಾಜದಲ್ಲಿ ಉತ್ತಮ ಸ್ಥಾನಮಾನಗಳಿದ್ದು, ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಿ, ಈ ಭಾಗದಲ್ಲಿ ಹೆಚ್ಚು ಬಡವರಿದ್ದು ವಿದ್ಯಾರ್ಥಿಗಳಿಗೆ ಉತ್ತಮ ಪಾಠ ಪ್ರವಚನ ನೀಡುವ ಕೆಲಸ ತಾವು ಮಾಡಬೇಕೆಂದರು.

ಶಿಕ್ಷಕರು ಕೇವಲ ರ್ಯಾಂಕ್ ನೀಡದೇ ಇದ್ದರು ಪಾಠದ ಜತೆಗೆ ಶಿಸ್ತು, ಸಂಸ್ಕಾರ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕುವಂತೆ ಮಾಡಬೇಕು, ನಾನು ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಈ ಭಾಗದಲ್ಲಿ ನೀರಾವರಿ ಸೌಕರ್ಯ ಇಲ್ಲದೇ ಇರುವುದರಿಂದ ಕೃಷಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿಲ್ಲ ಆದ್ದರಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲು ತೀರ್ಮಾನಿಸಲಾಗಿದೆ. ಇತ್ತಿಚಿಗೆ ವಿದ್ಯಾರ್ಥಿಗಳು ಅನೇಕ ದುಷ್ಚಟಗಳಿಗೆ ಬಳಿ ಆಗುತ್ತಿದ್ದರೆ ಆದ್ದರಿಂದ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಕೊಠಡಿಗಳಲ್ಲಿ ಸಿಸಿ ಟಿವಿ ಅಳವಡಿಸಲು ನನ್ನ ಅನುದಾನ ನೀಡುತ್ತಿದ್ದೇನೆ ಅದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನಹರಿಸುತ್ತಿರಬೇಕೆಂದರು.

ಈ ಹಿಂದೆ ನೀಡಿದ ಭರವಸೆಯಂತೆ ಗುರುಭವನ ನಿರ್ಮಾಣಕ್ಕಾಗಿ ೨೦ ಗುಂಟೆ ಜಮೀನು ಗುರ್ತಿಸಿದ್ದು, ಇಂದು ತಮಗೆ ವರ್ಗಾವಣೆ ಮಾಡಿನೆ ಮುಂದಿನ ಶಿಕ್ಷಕರ ದಿನಾಷರಣೆ ಒಳಗೆ ಸುಮಾರು ೧ ಕೋಟಿ ಅನುದಾನದಲ್ಲಿ ಭವ್ಯವಾದ ಭವನ ನಿರ್ಮಾಣ ಮಾಡಿ ಮುಂದಿನ ದಿನಗಳಲ್ಲಿ ಗುರುಭವನದ ಕಾರ್ಯಕ್ರಮ ಆಯೋಜನೆ ಮಾಡೋಣ ಎಂದು ತಿಳಿಸಿದರು. ಕಾರಕೂರಪ್ಪ ಮಾತನಾಡಿ, ಬಡ ಕುಟುಂಬದಲ್ಲಿ ಜನಿಸಿ ಶಿಕ್ಷಕರಾಗಿ ಅನೇಕ ವಿದ್ಯಾರ್ಥಿಗಳಿಗೆ ದಾರಿದೀಪ ಆಗಿರುವ ಡಾ.ಸರ್ವೆಪಲ್ಲಿ ರಾಧಕೃಷ್ಣನ್ ಸ್ಮರನಾರ್ಥ ಶಿಕ್ಷಕರ ದಿನಾಚರಣೆ ಆಚರಣೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.

ರಾಜ್ಯ ಮತ್ತು ಜಿ¯್ಲÁ ಅತ್ಯತ್ತಮ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಹಾಗೂ ಇತ್ತಿಚಿಗೆ ನಿವೃತ್ತಿಹೊಂದಿದ ಶಾಲಾ ಶಿಕ್ಷಕರಿಗೆ ಸನ್ಮಾನಿಸಿದರು. ಶಿಕ್ಷಕರ ಕ್ರೀಡಾಕೂಟದಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ಮತ್ತು ಅಭಿನಂದಾನ ಪತ್ರ ನೀಡಿದರು. ತಹಶೀಲ್ದಾರ್ ಸಿಗ್ಬತ್ವುಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಕೃಷ್ಣಪ್ಪ, ಹೇಮಾವತಿ, ಆರಕ್ಷಕ ವೃತ್ತ ನಿರೀಕ್ಷಕ ನಯಾಜ್‌ಬೇಗ್, ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಇದ್ದರು.

 

About The Author

Leave a Reply

Your email address will not be published. Required fields are marked *