ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಯುವ ಸಂಸತ್

1 min read

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಯುವ ಸಂಸತ್

ಸಾರ್ವಜನಿಕ ಚುನಾವಣೆಯಂತೆಯೇ ನಡೆದ ಶಾಲಾ ಸಂಸತ್

ಬಾಗೇಪಲ್ಲಿ ಪಟ್ಟಣದ ತಾಲೂಕು ಪಂಚಾಯತಿ ಸಭಗಣದಲ್ಲಿ ತಾಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಕಾರ್ಯಮ ಉದ್ಘಾಟಿಸಿ ಮಾತನಾಡಿದ ಬಿಇಒ ಎನ್. ವೆಂಕಟೇಶಪ್ಪ, ವಿದ್ಯಾರ್ಥಿಗಳಲ್ಲಿ ಜನಪ್ರತಿನಿಧಿಗಳ ಕರ್ತವ್ಯಗಳು ಮತ್ತು ಅವರನ್ನು ಆಯ್ಕೆ ಮಾಡುವ ಕುರಿತು ಅರಿವು ಮೂಡಿಸಲು ಯುವ ಸಂಸತ್ ಸ್ಪರ್ದೆ ಉತ್ತಮ ವೇದಿಕೆಯಾಗಿದೆ ಎಂದರು.

ಬಾಗೇಪಲ್ಲಿ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಕಾರ್ಯಮ ಉದ್ಘಾಟಿಸಿ ಮಾತನಾಡಿದ ಬಿಇಒ ಎನ್. ವೆಂಕಟೇಶಪ್ಪ ಮಾತನಾಡಿ, ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಹಾಗೂ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಕೌಶಲ್ಯ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ವಿಧಾನಸಭೆೆ ಕಾರ್ಯ ಕಲಾಪಗಳ ಬಗ್ಗೆ ತಿಳುವಳಿಕೆ ಮೂಡಿಸುವುದು. ವಿದ್ಯಾರ್ಥಿ ದೆಸೆಯಿಂದಲೇ ವಾಕ್ ಚಾತುರ್ಯ, ಸಮಯ ಪ್ರಜ್ಞೆ, ಸೂಕ್ಷತೆ, ಧೈರ್ಯ ಮನೋಭಾವ, ಉತ್ತಮ ವಿಷಯ ಮಂಡನೆ ಸೇರಿದಂತೆ ನಾಯಕತ್ವ ಗುಣಗಳನ್ನು ಬೆಳೆಸುವುದು ಯುವ ಸಂಸತ್ ಸ್ಪರ್ಧೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಬಾಗೇಪಲ್ಲಿ ತಾಲೂಕಿನ 8 ಪ್ರೌಢಶಾಲೆಗಳಿಂದ 32 ವಿದ್ಯಾರ್ಥಿಗಳು ಈ ಸಂಸತ್ ಕಲಾಪದಲ್ಲಿ ಭಾಗವಹಿಸಿದ್ದರು. ಇವರಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದರು. ಸರಕಾರಿ ಪ್ರೌಢಶಾಲೆಗಳಾದ ಪಾತಪಾಳ್ಯ, ಗೂಳೂರು, ಘಂಟಮವಾರಪಲ್ಲಿ, ಆದರ್ಶ ವಿದ್ಯಾಲಯ, ಕಾನಗಮಾಕಲಪಲ್ಲಿ, ಪರಗೋಡು, ಪಟ್ಟಣದ ಬಾಲಕರ ಮತ್ತು ಬಾಲಕಿಯರ ಪ್ರೌಢಶಾಲೆಗಳಿಂದ ಒಟ್ಟು 32, 21 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

ಈ ಕಲಾಪದಲ್ಲಿ ವಿರೋಧ ಪಕ್ಷದ ಜನಪ್ರತಿನಿಧಿಗಳು ಆಡಳಿತ ಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಚುನಾವಣೆ ಸಮಯದಲ್ಲಿ ಹಲವಾರು ಭರವಸೆ ನೀಡಿದ್ದೀರಿ. ಗೆದ್ದು ಗದ್ದುಗೆಗೆ ಕೂತಿದ್ದೀರಿ. ಆದರೆ, ಪ್ರಣಾಳಿಕೆಯಲ್ಲಿ ಘೋಷಿಸಿದ ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆ ಸಮರ್ಪಕವಾಗಿ ಹೆಚ್ಚುವರಿ ಬಸ್ ಗಳನ್ನು ನೀಡಿಲ್ಲ, ಸರಕಾರ ಜನರಿಗೆ ಕಲ್ಪಿಸಿರುವ ಗ್ಯಾರಂಟಿಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ ಗ್ಯಾರಂಟಿಗಳ ಹೆಸರಿನಲ್ಲಿ ಮೋಸ, ವಂಚನೆ, ದೋಖಾ ಮಾಡುವುದನ್ನು ನಾಗರೀಕರು ಎಂದಿಗೂ ಸಹಿಸುವುದಿಲ್ಲ ಎಂದರು.

ಯಾವುದೇ ಗ್ಯಾರಂಟಿಗಳನ್ನ ಕೊಡಬೇಕಾದರೆ ಮೊದಲು ಅದರ ಸಾಧಕ ಬಾಧಕಗಳನ್ನು ನೋಡಿಕೊಡಬೇಕು. ಅನಂತರ ತಜ್ಞರ ವರದಿ ಆಧರಿಸಿ ಅನುಷ್ಟಾನಗೊಳಿಸಬೇಕು. . ಮತಬ್ಯಾಂಕ್ ರಾಜಕಾರಣದ ಉದ್ದೇಶದಿಂದ ಗ್ಯಾರೆಂಟಿಗಳನ್ನು ಘೋಷಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಇಒ ರಮೇಶ, ಸಮನ್ವಯಾಧಿಕಾರಿ ವೆಂಕಟರಾಮ್, ಬಿಆರ್‌ಸಿ. ರಮೇಶ, ಪದ್ಮಾವತಿ, ಶಿಕ್ಷಕರಾದ ಶಿವಪ್ಪ, ರವಿಚಂದ್ರನ್ .ಎನ್ ,ಸಾಕ್ಷರತೆ ಶಿವಪ್ಪ, ಸಿ.ನಾರಾಯಣ ಸ್ವಾಮಿ ಇದ್ದರು.

 

About The Author

Leave a Reply

Your email address will not be published. Required fields are marked *