ಸಂಸ್ಕೃತ ಪಾಠಶಾಲೆಯಲ್ಲಿ ಅಸ್ಮಾಕಂ ಸಂಸ್ಕೃತ0 ಕಾರ್ಯಕ್ರಮ
1 min readಸಂಸ್ಕೃತ ಪಾಠಶಾಲೆಯಲ್ಲಿ ಅಸ್ಮಾಕಂ ಸಂಸ್ಕೃತ0 ಕಾರ್ಯಕ್ರಮ
ಮಕ್ಕಳಿಗೆ ಸಂಸ್ಕೃತದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ
ಚಿಕ್ಕಬಳ್ಳಾಪುರದ ಭಾರತಿ ನಗರದ ಭಾರತಿ ವಿದ್ಯಾ ಸಂಸ್ಥೆ ಆವರಣದ ಸಂಸ್ಕೃತ ಪಾಠಶಾಲೆಯಲ್ಲಿ ಅಸ್ಮಾಕಂ ಸಂಸ್ಕೃತ0 ಎಂಬ ಸಂಸ್ಕೃತ ಕಾರ್ಯಕ್ರಮ ನಡೆಸಲಾಯಿತು. ಅತ್ಯಂತ ಪ್ರಾಚೀನ ಭಾರತೀಯ ಭಾಷೆಯಾದ ಸಂಸ್ಕೃತ ಭಾಷೆಯ ಮಹತ್ವವನ್ನು ತಿಳಿಸಲು ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಸಿ ಅರಿವು ಮೂಡಿಸಲಾಯಿತು.
ಈ ವೇಳೆ ಮಾತನಾಡಿದ ಭಾರತಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಅಶ್ವತ್ಥ್ನಾರಾಯಣ್, ಭಾರತಿ ವಿದ್ಯಾಸಂಸ್ಥೆಯ ಸಂಸ್ಕೃತ ಪಾಠಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಸಂಸ್ಕೃತ ಭಾಷೆಯ ಮಹತ್ವ ಕುರಿತು ಅರಿವು ಮೂಡಿಸುವ ಕಾರ್ಯ ನಡೆಸಲಾಯಿತು ಎಂದರು. ಸಂಸ್ಕೃತ ಭಾಷೆಯ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಭಾಷಣ, ಗೀತೆ ಗಾಯನಗಳನ್ನ ಸಂಸ್ಕೃತ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿತ್ತು.
ಶಾಲಾ ಶಿಕ್ಷಕರು ಈ ಕಾರ್ಯಕ್ರಮಕ್ಕೆ ಭಾರತಿ ವಿದ್ಯಾಸಂಸ್ಥೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಅಶ್ವತ್ ನಾರಾಯಣ್, ಭಾರತಿ ವಿದ್ಯಾ ಸಂಸ್ಥೆಯ ಮಾಧ್ಯಮಿಕ ವಿಭಾಗದ ಮುಖ್ಯೋಪಾಧ್ಯಾಯರು ಸೇರಿದಂತೆ ಎಲ್ಲಾ ಸಹ ಶಿಕ್ಷಕರು ಪಾಲ್ಗೊಂಡು ಸಂಸ್ಕೃತ ಭಾಷೆಯ ವಿಶೇಷ ಮಹತ್ವ ತಿಳಿಸಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಸಂಸಕೃತದ ಕುರಿತು ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಸಂಸ್ಕೃತ ಪಾಠ ಶಾಲೆಯ ಮುಖ್ಯೋಪಾಧ್ಯಾಯರಾದ ರಂಗನಾಥ್ ಹಾಗೂ ಸಹ ಶಿಕ್ಷಕ ಪುಟ್ಟಸ್ವಾಮಿ ಭಾಗವಹಿಸಿದ್ದರು.