ಪರಿಸರ ರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ನಿಲ್ಲಬೇಕು
1 min readಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ಮಾರಕ ಹೆಚ್ಚು
ಮಾನವ ಮಾತ್ರವಲ್ಲದೆ ನೀರು, ಗಿಡಗಳ ಮೇಲೂ ದುಷ್ಪರಿಣಾಮ
ಪರಿಸರ ರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ನಿಲ್ಲಬೇಕು
ಪ್ಲಾಸ್ಟಿಕ್ ಇಂದು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಕಡಿಮೆ ವೆಚ್ಚದಲ್ಲಿ ತಯಾರಿಕೆ ಹಾಗೂ ಕೈಗೆಟಕುವ ದರದಲ್ಲಿ ಈ ಪ್ಲಾಸ್ಟಿಕ್ ಉತ್ಪನ್ನಗಳು ದೊರೆಯುವುದರಿಂದ ಮಾನವ ಈ ವಸ್ತುವಿಗೆ ಅವಲಂಬಿತನಾಗಿದ್ದಾನೆ ಎಂದು ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಜಿ.ಆರ್. ಸಂತೋಷ್ ಹೇಳಿದರು.
ವಿಜಯಪುರ ಶಿವ ಗಣೇಶ ಸರ್ಕಲ್‌ನಲ್ಲಿ ವಿಜಯಪುರ ಪುರಸಭೆ ಮತ್ತು ವಿಜಯಪುರ ಕೋಟೆ ಮಹೇಂದ್ರ ಬ್ಯಾಂಕ್‌ನಿ0ದ ಸಾರ್ವಜನಿಕರಿಗೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸಿ, ಬ್ಯಾಗ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಜಿ.ಆರ್. ಸಂತೋಷ್, ಪ್ಲಾಸ್ಟಿಕ್‌ನಿಂದ ಉಂಟಾಗುವ ಮಾಲಿನ್ಯದಲ್ಲಿ ಏಷ್ಯಾ ಅಗ್ರಸ್ಥಾನದಲ್ಲಿದೆ. ಅಭಿವೃದ್ಧಿ ಹೊಂದುತ್ತಿರುವ ದೇಶಕ್ಕೆ ಈ ಪ್ಲಾಸ್ಟಿಕ್ ತ್ಯಾಜ್ಯ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದರು.
ಪ್ಲಾಸ್ಟಿಕ್ ತ್ಯಾಜ್ಯ ಪರಿಸರ, ಮನುಷ್ಯ, ಪ್ರಾಣಿಗಳು, ಸಸ್ಯಗಳ ಮೇಲೆ ದುಷ್ಪರಿಣಾಮ ಬೀರಿದೆ. ಪ್ಲಾಸ್ಟಿಕ್‌ನಿಂದ ತಯಾರಿಸಿದ ಅನೇಕ ಉತ್ಪನ್ನಗಳು ಮಾನವನ ಆರೋಗ್ಯ ಮತ್ತು ಪರಿಸರಕ್ಕೆ ಅಪಾಯವನ್ನುಂಟು ಮಾಡುತ್ತಿವೆ. ಇದೇ ಸಂದರ್ಭದಲ್ಲಿ ಕೊಟಕ್ ಮಹೇಂದ್ರ ಬ್ಯಾಂಕ್ ರಿವಿಜನ ಮೆನೇಜರ್ ಸಂದೀಸ್ ಮಾತನಾಡಿ, ರಾಸಾಯನಿಕ ಮತ್ತು ಅಪಾಯಕಾರಿ ಪದಾರ್ಥಗಳಿವೆ. ಅವು ಮಾನವನ ಆರೋಗ್ಯ, ಪ್ರಾಣಿಗಳ ಆರೋಗ್ಯ ಮತ್ತು ಪರಿಸರಕ್ಕೆ ಅಪಾಯ ಉಂಟು ಮಾಡುವ ಅಂಶಗಳಾಗಿವೆ ಎಂದರು.
ಪ್ಲಾಸ್ಟಿಕ್ ಹುಟ್ಟು ಹಾಕುವ ಅಪಾಯಗಳು ಒಂದೆರಡಲ್ಲ. ಅದು ನಾನಾ ವಿಧವಾದ ಅಡ್ಡಿ ಆತಂಕಗಳನ್ನೂ ದುಷ್ಪರಿಣಾಮಗಳನ್ನೂ ಉಂಟುಮಾಡುತ್ತದೆ. ಪ್ಲಾಸ್ಟಿಕ್ ತಯಾರಿಕಾ ಹಂತದಲ್ಲಿಯೇ ದೊಡ್ಡ ಮಟ್ಟದ ಮಾಲಿನ್ಯವನ್ನು ಉಂಟುಮಾಡುತ್ತದೆ. ಇದು ನೇರವಾಗಿ ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುತ್ತದೆ. ಆದ್ದರಿಂದ ಕೊಟಕ್ ಮಹೀಂದ್ರಾ ಬ್ಯಾಂಕ್‌ನಿ0ದ 2 ಸಾವಿರ ಬ್ಯಾಗ್ ಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ತಮಿಳುನಾಡು ರವಿಶನಲ್ ಹೇಡ್ ಕಾರ್ತಿಕ್, ಸಂದೀಸ್, ಕೊಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ಶಿವಶಾಂತಿ ಬಾಬು, ಭಾಸ್ಕರ್, ರಘುನಾಥ್ ರಾವ್, ಪುರಸಭೆ ಸದಸ್ಯ ರಾಜಣ್ಣ, ಪರಿಸರ ಅಭಿಯಂತರ ಶೇಖರ್, ಪೃಥ್ವಿ, ಜನಾರ್ಧನ್ ಇದ್ದರು.