ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಪೌರ ಕಾರ್ಮಿಕರಿಗಾಗಿ ಚಿಕ್ಕಬಳ್ಳಾಪುರದಲ್ಲಿ ಕ್ರೀಡಾಕೂಟ

1 min read

ಪೌರ ಕಾರ್ಮಿಕರಿಗಾಗಿ ಚಿಕ್ಕಬಳ್ಳಾಪುರದಲ್ಲಿ ಕ್ರೀಡಾಕೂಟ

23ಕ್ಕೆ ಪೌರ ಕಾರ್ಮಿಕರ ದಿನಾಚರಣೆ ಕಾರಣ ಕ್ರೀಡೆ ಆಯೋಜನೆ

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರು ಕ್ರೀಡಾಕೂಟದಲ್ಲಿ ಭಾಗಿ

ಸೆಪ್ಟೆಂಬರ್ 23ಕ್ಕೆ ಪೌರ ಕಾರ್ಮಿಕರ ದಿನಾಚರಣೆ ಇದೆ. ಪೌರ ಕಾರ್ಮಿಕರೆಂದರೆ ನಗರವನ್ನು ಸ್ವಚ್ಛಗೊಳಿಸಿ, ರೋಗಗಳಿಂದ ದೂರ ಇಡುವ ಮಹಾನ್ ಕೆಲಸದಲ್ಲಿ ತೊಡಗಿರುವ ಸಿಬ್ಬಂದಿ. ಇಂತಹ ಸಿಬ್ಬಂದಿ ಅನಾರೋಗ್ಯ ಪೀಡಿತರಾಗಿ ಅಕಾಲ ಮರಣಕ್ಕೆ ತುತ್ತಾಗುವವರೇ ಹೆಚ್ಚು. ಇದಕ್ಕೆ ಕಾರಣ ಅವರು ಮಾಡುವ ವೃತ್ತಿ. ಇಂತಹ ಪೌರ ಕಾರ್ಮಿಕರಿಗಾಗಿ ಇಂದು ಚಿಕ್ಕಬಳ್ಳಾಪುರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಡೀ ಕೂಡ ಏರ್ಪಡಿಸಲಾಗಿತ್ತು.

ಚಿಕ್ಕಬಳ್ಳಾಪುರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಪೌರ ಕಾರ್ಮಿಕರಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ವಯಸ್ಸಿನ ಅಂತರವಿಲ್ಲದೆ ಎಲ್ಲ ಪೌರ ಕಾರ್ಮಿಕರು ಕ್ರೀಡೆಗಳಲ್ಲಿ ಭಾಗವಹಿಸಿ ಖುಷಿಪಟ್ಟರು. ಇನ್ನು ಕ್ರೀಡಾಕೂಟಕ್ಕೆ ನಗರಸಭೆ ಅಧ್ಯಕ್ಷ ಗಜೇಂದ್ರ ಮತ್ತು ಉಪಾಧ್ಯಕ್ಷ ನಾಗರಾಜ್ ಚಾಲನೆ ನೀಡಿದರು. ಪೌರ ಕಾರ್ಮಿಕರಿಗಾಗಿ ಮ್ಯೂಸಿಕಲ್ ಚೇರ್, ಶಾಟ್‌ಪುಟ್, ರನ್ನಿಂಗ್ ಸೇರಿದಂತೆ ಹಲವು ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಎಲ್ಲ ಕ್ರೀಡೆಗಳಲ್ಲಿಯೂ ಪೌರ ಕಾರ್ಮಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ನಗರಸಭೆ ಅಧ್ಯಕ್ಷ ಗಜೆಂದ್ರ 23ರ ಸೋಮವಾರ ಪೌರ ಕಾರ್ಮಿಕರ ದಿನಾಚರಣೆ ಇದ್ದು, ಇದರ ಪ್ರಯುಕ್ತ ಪೌರಕಾರ್ಮಿಕರಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಹೇಳಿದರು. ಪೌರ ಕಾರ್ಮಿಕರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಖುಷಿ ಪಟ್ಟಿದ್ದು, ಈ ಕ್ರೀಡಾಕೂಡಟದಲ್ಲಿ ಜಯಗಳಿಸಿದ ಪೌರ ಕಾರ್ಮಿಕರಿಗೆ ಬಹುಮಾನಗಳನ್ನು ಪೌರಕಾರ್ಮಿಕ ದಿನಾಚರಣೆಯ ದಿನ ವಿತರಿಸಲಾಗುವುದು. ವರ್ಷ ಪೂರ್ತಿ ದುಡಿಯುತ್ತಲೇ ಇರುವ ಪೌರ ಕಾರ್ಮಿಕರು ಕ್ರೀಡೆಗಳಲ್ಲಿ ಭಾಗವಹಿಸಿದರೆ ಉತ್ಸಾಹದಿಂದ ಅವರು ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷ ನಾಗರಾಜ್ ಜೆ ಮಾತನಾಡಿ, ಸೆಪ್ಟೆಂಬರ್ ೨೩ಕ್ಕೆ ಪೌರ ಕಾರ್ಮಿಕರ ದಿನಾಚರಣೆ ಇದ್ದು, ಪೌರಕಾರ್ಮಿಕ ದಿನಾಚರಣೆ ಎಂದರೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಿರುವುದಲ್ಲ. ಪೌರ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಗಮನ ಹರಿಸುವುದು. ಅದರ ಭಾಗವಾಗಿಯೇ ಇಂದು ಪೌರ ಕಾರ್ಮಿಕರಿಗೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಹೇಳಿದರು.

ಕ್ರೀಡೆ ಎಂಬುದು ವಯಸ್ಸಿಗೆ ಸಂಬ0ಧಿಸಿಲ್ಲ. ಒಂದು ವೃತ್ತಿಗೆ ಸಂಬ0ಧಿಸಿಲ್ಲ. ಎಲ್ಲರೂ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಲಿದೆ. ಪೌರಕಾರ್ಮಿಕರಿಗೆ ಮುಖ್ಯವಾಗಿ ಬೇಕಿರುವುದೇ ಆರೋಗ್ಯ. ಯಾಕೆಂದರೆ ಈ ವರ್ಷದಲ್ಲಿ ಬರೋಬ್ಬರಿ ಎಂಟು ಮಂದಿ ಪೌರಕಾರ್ಮಿಕರು ಅನಾರೋಗ್ಯದಿಂದ ನಮ್ಮ ಸನಗರಸಭೆಯಲ್ಲಿ ಮೃತಪಟ್ಟಿದ್ದಾರೆ ಎಂಬುದು ನೋವಿನ ವಿಚಾರವಾಗಿದೆ ಎಂದರು.

ಅ0ದರೆ ನಗರದ ನಾಗರಿಕರ ಆರೋಗ್ಯ ಕಾಪಾಡಲು ಶ್ರಮಿಸುತ್ತಿರುವ ಪೌರಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗಿತ್ತಿರುವುದು ನೋವಿನ ಸಂಗತಿ. ಹಾಗಾಗಿ ಪೌರಕಾರ್ಮಿಕರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗುವ ಜೊತೆಗೆ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ಅವರ ಆರೋಗ್ಯ ಸುದಾರಣೆಗೆ ಸಹಕಾರಿಯಾಗಲಿದೆ. ನಗರಸಭೆಯಿಂದಲೂ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಬಗ್ಗೆ ಅಧ್ಯಕ್ಷ ರೊಂದಿಗೆ ಚರ್ಚೆ ನಡೆಸಲಾಗುವುದು. ಪೌರಕಾರ್ಮಿಕರು ವಯಸ್ಸಿನ ಬಗ್ಗೆ ಚಿಂತೆ ಬಿಟ್ಟು ಕ್ರೀಡೆಗಳಲ್ಲಿ ಭಾಗವಹಿಸುವಂತೆ ಕೋರುತ್ತೇನೆ ಎಂದು ಹೇಳಿದರು.

 

About The Author

Leave a Reply

Your email address will not be published. Required fields are marked *