ಮೃತ ವಿದ್ಯಾರ್ಥಿಗಳ ನಿವಾಸಕ್ಕೆ ಸಂಸದ, ಶಾಸಕರ ಭೇಟಿ
1 min readಮೃತ ವಿದ್ಯಾರ್ಥಿಗಳ ನಿವಾಸಕ್ಕೆ ಸಂಸದ, ಶಾಸಕರ ಭೇಟಿ
ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಂಸದ ಸುಧಾಕರ್
ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಿನ್ನೆ ಸಂಜೆ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಅವಲಗುರ್ಕಿ ಗ್ರಾಮದ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಿನ್ನೆಲೆ ಇಂದು ಸಂಸದ ಡಾ.ಕೆ.ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿ ಧೆೆÊರ್ಯ ತುಂಬಿದರು.
ಮೃತ ವಿದ್ಯಾರ್ಥಿಗಳ ನಿವಾಸಕ್ಕೆ ಭೇಟಿ ನೀಡಿದ ಸಂಸದ ಡಾ.ಕೆ. ಸುಧಾಕರ್ ಹಾಗೂ ಶಾಸಕಪ್ರದೀಪ್ ಈಶ್ವರ್ ಕುಟುಂಬಸ್ಥರಿಗೆ ಸಾಂತ್ವಾನಹೇಳಿದರು. ನಂತರ ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಿನ್ನೆ ಸಂಜೆ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಅವಲಗುರ್ಕಿ ಗ್ರಾಮದ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೀವ್ರ ನೋವುಂಟು ಮಾಡಿದ್ದು, ಮೃತ ದುರ್ದೈವಿಗಳ ಹೆತ್ತವರ ನೋವಿನಲ್ಲಿ ನಾನೂ ಭಾಗಿಯಾಗಿದ್ದಾನೆ ಎಂದರು.
ಅಪ್ರಾಪ್ತ ವಯಸ್ಸಿನ ಯುವಕರು ವಾಹನಗಳನ್ನು ಓಡಿಸುವುದಾಗಲಿ, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪೋಷಕರು ಬೈಕ್‌ಕೊಡಿಸುವುದಾಗಲಿ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದರು. ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸುವುದು, ಟ್ರಿಬಲ್ ರೈಡಿಂಗ್‌ಹೋಗುವುದು, ಅತಿಯಾದ ವೇಗದಲ್ಲಿ ವಾಹನ ಚಲಾಯಿಸುವುದು, ಟ್ರಾಫಿಕ್ ನಿಯಮ ಪಾಲಿಸದಿರುವುದು ಇಂತಹ ದುಸ್ಸಾಹಸಗಳು ಕ್ಷಣಮಾತ್ರದಲ್ಲಿ ಜೀವಕ್ಕೇ ಕುತ್ತು ತರಬಹುದು. ಆದ್ದರಿಂದ ಯುವಕರು ವಾಹನ ಚಲಾಯಿಸುವಾಗ ಅತ್ಯಂತ ಜಾಗರೂಕತೆಯಿಂದ ಇರಬೇಕು ಮತ್ತು ಪೋಷಕರು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಮುನ್ನಚ್ಚರಿಕೆ ನೀಡಬೇಕು ಎಂದು ಮನವಿ ಮಾಡುವುದಾಗಿ ಸಂಸದರು ಹೇಳಿದರು.