ಮಿಶ್ರ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಭೂಪ
1 min readಮಿಶ್ರ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಭೂಪ
92 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು
ಗಾಂಜಾ ಬೆಳೆದಿದ್ದ ಒಬ್ಬ ವ್ಯಕ್ತಿಯ ಬಂಧನ
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎಂಬುವರು ಗ್ರಾಮದ ಸ.ನಂ ೫೯ರ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂದು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಅಧೀಕ್ಷಕ ಸಿಕೆ ಬಾಬಾ ಅವರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರ ಪೊಲೀಸರು ದಾಳಿ ನಡೆಸಿ, ಗಾಂಜಾ ವಶಕ್ಕೆ ಪಡೆಯುವ ಜೊತೆಗೆ ಒಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ ಉಪ ವಿಭಾಗದ ಉಪಾದೀಕ್ಷಕರು ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಸುಮಾರು 92 ಸಾವಿರ ರೂ. ಮೌಲ್ಯದ ೮ ಕೆಜಿ 700 ಗ್ರಾಂ ತೂಕದ, ಒಟ್ಟು ೫೬೮ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಿಶ್ರ ಬೆಳೆಗಳ ಮಧ್ಯೆ ಗಾಂಜಾ ಬೆಳೆದಿದ್ದ ದುಷ್ಕರ್ಮಿಯ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಗಿ ಹೊಲದಲ್ಲಿ ತೊಗರಿ, ಅವರೆ, ಅಲಸಂದೆ ಸಾಲುಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಸಿ, ಅವುಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಿ ಬೆಳೆಸಿರುವುದನ್ನು ಪತ್ತೆ ಹಚ್ಚಿದ ಗ್ರಾಮಾಂತರ ಠಾಣಾ ಪೊಲೀಸರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ನಾರಾಯಣಸ್ವಾಮಿ ಎಂಬಾತನನ್ನು ಬಂಧಿಸಿದ್ದಾರೆ.