ಆರೋಗ್ಯಕರ ಸಮಾಜಕ್ಕೆ ಪೌರ ಕಾರ್ಮಿಕರ ಸೇವೆ ಅನನ್ಯ
1 min readಆರೋಗ್ಯಕರ ಸಮಾಜಕ್ಕೆ ಪೌರ ಕಾರ್ಮಿಕರ ಸೇವೆ ಅನನ್ಯ
ಗೌರಿಬಿದನೂರು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಪ್ರಶಂಸೆ
ಆರೋಗ್ಯಕರ ಸಮಾಜಕ್ಕೆ ಪೌರ ಕಾರ್ಮಿಕರ ಸೇವೆ ಅನನ್ಯ, ಪೌರ ಕಾರ್ಮಿಕರು ತಮ್ಮಕರ್ತವ್ಯದ ಜೊತೆಗೆ ನಿಮ್ಮ ಆರೋಗ್ಯದಕಡೆಗೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಹೇಳಿದರು.
ಗೌರಿಬಿದನೂರು ನಗರದ ಸುಮಂಗಲಿ ಕಲ್ಯಾಣಮಂಟಪದಲ್ಲಿ ನಗರಸಭೆಯಿಂದ ಹಮ್ಮಿಕೊಂಡಿದ್ದಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದಶಾಸಕ ಪುಟ್ಟಸ್ವಾಮಿಗೌಡ, ಪೌರ ಕಾರ್ಮಿಕರುತಮ್ಮ ಕರ್ತವ್ಯ ನಿರತ ವೇಳೆ ಸುರಕ್ಷಾಕವಚಗಳನ್ನು ಕಡ್ಡಾಯವಾಗಿ ಧರಿಸಬೇಕು,ಗಾಳಿ, ಮಳೆ, ಬಿಸಿಲು ಎನ್ನದೆ ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಚತಾ ಕಾರ್ಯ ಕೈಗೊಳ್ಳುವಪೌರ ಕಾರ್ಮಿಕರು ನೈಜಕಾಯಕಯೋಗಿಗಳು, ಕೊರೊನಾದಂತಹಸದಿಗ್ಧ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗನ್ನುತೊರೆದು ಕರ್ತವ್ಯ ನಿರ್ವಹಿಸಿದ್ದು ನಿಜಕ್ಕೂ ಶ್ಲಾಘನೀಯ ಎಂದು ಪ್ರಸಂಶಿಸಿದರು.
ಪೌರ ಕಾರ್ಮಿಕರು ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು, ಸರಕಾರದಿಂದ ಸಿಗುವ ಸೌವಲತ್ತುಗಳನ್ನು ಬಳಸಿಕೊಂಡು ನಿಮ್ಮ ಮಕ್ಕಳ ಉಜ್ವಲ ಭವಿಷ್ಯತನ್ನು ರೂಪಿಸಿ, ನಿಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನಾನು ವೈಯಕ್ತಿಯವಾಗಿ ಸಹಾಯ ಹಸ್ತವನ್ನು ಚಾಚುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.ನಗರಸಭೆೆ ಪೌರಾಯುಕ್ತೆ ಡಿ.ಎಂ.ಗೀತಾ ಮಾತನಾಡಿ, ಪೌರ ಕಾರ್ಮಿಕರು ನಗರದ ಸಾರ್ವಜನಿಕರ ಸದೃಡ ಆರೋಗ್ಯಕ್ಕಾಗಿ ಶ್ರಮಿಸುತ್ತಿದ್ದಾರೆ. ನಿಮ್ಮ ಸದೃಡ ಆರೋಗ್ಯದ ಹಿತದೃಷ್ಟಿಯಿಂದ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ, ಇದರ ಜೊತೆಗೆ ಪ್ರತಿನಿತ್ಯ ಬೆಳಗಿನ ವೇಳೆ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ ಎಂದರು.
ಪೌರ ಕಾರ್ಮಿಕರು ತಮ್ಮ ಕರ್ತವ್ಯ ಬದ್ಧತೆಯ ಜೊತೆಗೆ ತಮ್ಮ ಆರೋಗ್ಯ ಮತ್ತು ತಮ್ಮಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನಒತ್ತು ನೀಡಿ ನಿಮ್ಮ ಮಕ್ಕಳನ್ನು ಸಮಾಜದಮುಖ್ಯವಾಹಿನಿಗೆ ತರಬೇಕು ಎಂದು ತಿಳಿಸಿದರು. ತಹಸೀಲ್ದಾರ್ ಮಹೇಶ್ ಎಸ್.ಪತ್ರಿ, ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮುರಳಿ, ಜಿಲ್ಲಾ ಯೋಜನಾ ನಿರ್ದೇಶಕಿ ಮಾದವಿ, ನಗರಸಭಾಧ್ಯಕ್ಷ ಲಕ್ಷಿನಾರಾಯಣ್, ಉಪಾಧ್ಯಕ್ಷ ಫರೀದ್, ಸದಸ್ಯರಾದ ವಿ.ರಮೇಶ್, ಗಾಯಿತ್ರಿ ಬಸವರಾಜು , ಸಾಯಿ ಕರ್ಮಚಾರಿ ಸದಸ್ಯ ರತ್ನಮ್ಮ
ಮಾತನಾಡಿದರು. ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸಮವಸ್ತç ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸಿದರು.