ಡೇರಿ ಕಾರ್ಯದರ್ಶಿಯಿಂದ 10 ಲಕ್ಷಕ್ಕೂ ಹೆಚ್ಚು ಅವ್ಯವಹಾರ
1 min readಹುಲ್ಲಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಅವ್ಯವಹಾರ
ಡೇರಿ ಕಾರ್ಯದರ್ಶಿಯಿಂದ 10 ಲಕ್ಷಕ್ಕೂ ಹೆಚ್ಚು ಅವ್ಯವಹಾರ
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಡೇರಿ ಕಾರ್ಯದರ್ಶಿ ಕಾರ್ಯವೈಖರಿ ತಡವಾಗಿ ಬೆಳಕಿಗೆ ಬಂದಿದ್ದು, ಬರೋಬ್ಬರಿ 10 ಲಕ್ಷಕ್ಕೂ ಹೆಚ್ಚು ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ.
ಕಳೆದ 30 ವರ್ಷಗಳಿಂದ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಯದರ್ಶಿ ಪ್ರಕಾಶ್, ಕಾರ್ಯವೈಖರಿ ಗಮನಿಸಿ, ಅವರ ಕಳ್ಳಾಟವನ್ನು ಬೆಳಕಿಗೆ ತಂದಿರುವ ಹಾಲು ಉತ್ಪಾದಕರ ಸಂಘಕರ ಸಂಘದ ನಿರ್ದೇಶಕರು, ಬರೋಬರಿ 10 ಲಕ್ಷಕ್ಕೂ ಅಧಿಕ ಹಣವನ್ನು ದುರ್ಬಳಕೆ ಮಾಡಿರುವುದಾಗಿ ಆರೋಪ ಮಾಡಿದ್ದಾರೆ.
ಹಾಲು ಉತ್ಪಾದಕರ ಹಣ ತಿಂದು ತೇಗಿರುವ ಕಾರ್ಯದರ್ಶಿಯನ್ನು ಪ್ರಸ್ತುತ ಅಮಾನತು ಮಾಡಲಾಗಿದೆ. ಒಂದು ದಿನಕ್ಕೆ ರಾತ್ರಿ ಹಗಲು 2,800 ಲೀಟರ್ ಹಾಲು ಉತ್ಪಾದನೆಯಾಗುತ್ತಿರುವ ಅತಿ ದೊಡ್ಡ ಹಾಲು ಉತ್ಪಾದಕರ ಸಹಕಾರ ಸಂಘ ಇದಾಗಿದ್ದು, ಕಳೆದ 45ವರ್ಷಗಳಿಂದ ಉತ್ತಮವಾಗಿ ನಡೆಯುತ್ತಿದ್ದ ಹುಲ್ಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘ ಉತ್ಪಾದಕರಿಗೆ ಪಂಗನಾಮ ಹಾಕಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಹಕಾರ ಸಂಘದಿ0ದ ಅಮಾನತು ಗೊಂಡಿರುವ ಕಾರ್ಯದರ್ಶಿ ಪ್ರಕಾಶ್
ನಂಜನಗೂಡು ಮತ್ತು ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದ್ದು, ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆ ಹುಲ್ಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೆ ಒಂದು ವಾರದ ಒಳಗಾಗಿ ಸ್ಪಷ್ಟ ಮಾಹಿತಿ ಪರಿಶೀಲಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗುವುದಾಗಿ ಅಧ್ಯಕ್ಷ ಮಂಜುನಾಥ್ ಭರವಸೆ ನೀಡಿದ್ದಾರೆ.