ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

ಗಾಂಧೀಜಿ ಜಗತ್ತಿನ ಮಹಾನ್ ಅಹಿಂಸಾ ನಾಯಕ

1 min read

ಗಾಂಧೀಜಿ ಜಗತ್ತಿನ ಮಹಾನ್ ಅಹಿಂಸಾ ನಾಯಕ
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬಣ್ಣನೆ
ಚಿಕ್ಕಬಳ್ಳಾಪುರದಲ್ಲಿ ಗಾಂಧಿಭವನ ಉದ್ಘಾಟನೆ

ಹಿ0ಸಾ ಮಾರ್ಗದಿಂದ ಸ್ವಾತಂತ್ರ ಪಡೆಯಲು ಹೆಚ್ಚಿನ ಪ್ರಾಣ ತ್ಯಾಗ ಆಗುವುದನ್ನು ಮನಗಂಡ ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ ತಂದುಕೊಟ್ಟರು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರದ ಜಿಲ್ಲಾ ಗ್ರಂಥಾಲಯ ಪಕ್ಕ ನೂತನವಾಗಿ ನಿರ್ಮಾಣವಾಗಿರುವ ಗಾಂಧಿಭವನ ಕಟ್ಟಡವನ್ನು ಲೋಕಾರ್ಪಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್, ಅದೇ ಜಾಗದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತಿ ಜಯಂತಿ ಉದ್ಘಾಟಿಸಿ ಮಾತನಾಡಿ, ದೇಶದ ಸ್ವಾತಂತ್ರಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ, ಅಹಿಂಸೆಯನ್ನು ಜೀವನದ ವಿಧಾನವನ್ನಾಗಿಸಿಕೊಂಡಿದ್ದ ಗಾಂಧೀಜಿಯವರು ಜಗತ್ತಿನ ಮಹಾನ್ ಅಹಿಂಸಾ ನಾಯಕರೆಂಬ ಗೌರವಕ್ಕೆ ಪಾತ್ರರಾಗಿz್ದÁರೆ ಎಂದರು.

ಅವರ ಜನ್ಮದಿನವಾದ ಅಕ್ಟೋಬರ್ ೨ನ್ನು ಜಗತ್ತಿನಾದ್ಯಂತ ವಿಶ್ವ ಅಹಿಂಸಾ ದಿನ’ವನ್ನಾಗಿ ಆಚರಿಸಲು ವಿಶ್ವಸಂಸ್ಥೆ ಕರೆ ನೀಡಿರುವುದು ಭರತೀಯೆಲ್ಲರೂ ಹೆಮ್ಮೆಪಡುವ ವಿಚಾರವಾಗಿದೆ. ಇಂತಹ ಮಹಾನ್ ನಾಯಕರಿಂದ ಇಂದಿನ ಮತ್ತು ಮುಂದಿನ ಪೀಳಿಗೆಗಳು ಪ್ರೆರೇಪಣೆಗೊಂಡು ದೇಶದ ಅಭಿವೃದ್ಧಿಯಲ್ಲಿ ಗಿಗಳಾಗುವಂತೆ ಮಾಡುವ ಉರ್ಧೆಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಗಾಂಧಿಭವನ ನಿರ್ಮಾಣ ಮಾಡಲು ನಿರ್ಧೆರಿಸಿ, ಮೊದಲ ಕಂತಿನಲ್ಲಿ 2016ರ ಜೂನ್ 28 ರಂದು 20 ಲಕ್ಷ ಅನುದಾನ ನೀಡಿದ್ದು, ಈಗ ಅದು ಲೋಕಾರ್ಪಣೆಯಾಗಿರುವುದು ಸಂತಸ ತಂದಿದೆ ಎಂದರು.

ಈ  ಜಿಲ್ಲಾ ಕೇಂದ್ರ ಗ್ರಂಥಾಲಯ ಪಕ್ಕದಲ್ಲೆ ಇರುವುದರಿಂದ ಅಲ್ಲಿಗೆ ಭೇಟಿ ನೀಡುವ ವಿದ್ಯಾರ್ಥಿಗಳು, ಸಾರ್ವಜನಿಕರು ಗಾಂಧಿಭವನಕ್ಕೆ ಭೇಟಿ ನೀಡಿ, ಹೆಚ್ಚಿನ ವಿಷಯಗಳನ್ನು ತಿಳಿಯಲು ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭೇಟಿ ನೀಡಬೇಕು. ಜೊತೆಗೆ ಗಾಂಧೀಜಿಯವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿರಂತರ ಪ್ರಕ್ರಿಯೆಯಲ್ಲಿ ಎಲ್ಲರೂ ಗಿಗಳಾಗಬೇಕು ಎಂದು ಕರೆ ನೀಡಿದರು.

ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ನಂದಿ ಗಿರಿಧಾಮದಲ್ಲಿ ಎರಡನೇ ಬಾರಿಗೆ 20 ದಿನ ವಿಶ್ರಾಂತಿ ಪಡೆದ ಗಾಂಧೀಜಿಯವರು 31ನೇ ಮೇ 1936 ರಂದು ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಇಳಿದು, ಅಲ್ಲಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದರು, ನಗರದ ಸಬ್ ಡಿವಿಜನಲ್ ಆಫೀಸರ್ ಇಸ್ಮಾಯಿಲ್ ಶರೀï ಹಾಗೂ ಹಲವಾರು ಪ್ರಮುಖರು ಗಾಂಧೀಜಿಯವರನ್ನು ಸ್ವಾಗತಿಸಿದರು ಎಂದು ಸ್ಮರಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ ಮಾತನಾಡಿ, ಭರತ ದೇಶ ಕಂಡ ಮಹಾ ಪುರುಷ, ಶ್ರೇಷ್ಠ ಸಂತ, ಮಹಾತ್ಮ ಗಾಂಧಿ ಶಾಂತಿ ಮತ್ತು ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ್ ಮಾನವತಾವದಿ. ಪ್ರತಿಯೊಬ್ಬರಿಗೂ ಗಾಂಧಿಯನ್ನು ಅನುಸರಿಸಲು ಸಕಾರಣವಿದೆ. ಸರಳ, ಸಜ್ಜನ ನಾಯಕರಾಗಿದ್ದ ಗಾಂಧೀಜಿಯವರ ಜೀವನವನ್ನು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಾದ ಗುರುತರ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಸರ್ವಧರ್ಮಗಳ ಪ್ರತಿನಿಧಿಗಳು ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ೯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗಾಂಧಿ ಕಾಲ್ನಡಿಗೆ ಜಾಥಾ ವನ್ನು ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಉನ್ನತ ಶಿಕ್ಷಣ ಸಚಿವರು ಚಾಲನೆ ನೀಡಿ, ಶಿಡ್ಲಘಟ್ಟ ವೃತ್ತದವರೆಗೆ ನಡೆದರು. ಈ ವೇಳೆ ನೂರಾರು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಜಾಥಾದಲ್ಲಿ ಹೆಜ್ಜೆಹಾಕಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಸ್ಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಐ. ಕಾಸಿಂ ಉಪಸ್ಥಿತರಿದ್ದರು.

 

About The Author

Leave a Reply

Your email address will not be published. Required fields are marked *