ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ರಾಜ್ಯ ಮಾನವ ಹಕ್ಕುಗಳ ಆಯೋಗ ದ ಅಧ್ಯಕ್ಷರ ಜಿಲ್ಲಾ ಪ್ರವಾಸ

1 min read

ರಾಜ್ಯ ಮಾನವ ಹಕ್ಕುಗಳ ಆಯೋಗ ದ ಅಧ್ಯಕ್ಷರ ಜಿಲ್ಲಾ ಪ್ರವಾಸ
ಜಿಲ್ಲಾ ಕಾರಾಗೃಹ, ಜಿಲ್ಲಾಸ್ಪತ್ರೆ, ಬಸ್ ನಿಲ್ದಾಣಕ್ಕೆ ಭೇಟಿ, ಪರಿಶೀಲನೆ
ಅವಧಿ ಮೀರಿದ ತಂಪು ಪಾನೀಯ ಮಾರುತ್ತಿದ್ದವರ ವಿರುದ್ಧ ಕ್ರಮ

ದೇಶದಲ್ಲಿ ಮಾನವ ಹಕ್ಕುಗಳ ಆಯೋಗದಲ್ಲಿ 8,054 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ೫,೪೫೬ ಪ್ರಕರಣಗಳು ಇತ್ಯರ್ಥವಾಗಿವೆ, 2,600 ಬಾಕಿ ಪ್ರಕರಣಗಳು ಇತ್ಯರ್ಥ ಮಾಡಲಾಗುತ್ತದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ. ಶ್ಯಾಮ್ ಭಟ್ ತಿಳಿಸಿದರು.

ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಅಧ್ಯಕ್ಷತೆಯಲ್ಲಿ ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತ್‌ನ ಹೆಚ್ ನರಸಿಂಹಯ್ಯ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ. ಶ್ಯಾಮ್‌ಭಟ್, ಸಮಾಜದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘನೆಯಾದಲ್ಲಿ ಅಂತಹ ಪ್ರಕರಣಗಳನ್ನು ದೂರುಗಳ ಮೂಲಕ ದಾಖಲಿಸಿಕೊಂಡು ಸಾಮಾಜಿಕ ಬಹಿಷ್ಕಾರದಂತಹ ಕ್ರಮಗಳು ಆಗಿದ್ದರೆ `ಭೇಟಿ ಮಾಡಿ ಪರಿಹಾರ ನೀಡಲಾಗುವುದು ಎಂದರು.

ಆಯೋಗದ ಕಾರ್ಯ ವ್ಯಾಪ್ತಿಯಲ್ಲಿ ಸರ್ಕಾರದ ಅಧಿಕಾರಿಗಳಿಂದ, ಯಾವುದೇ ಇಲಾಖೆಯಿಂದ ಲೋಪವಾಗಿದ್ದರೆ ಅದರ ಬಗ್ಗೆ ವಿಚಾರಿಸಿ ದೂರು ದಾಖಲಿಸಿ ಅವರ ಮೇಲೆ ಮಾನವ ಹಕ್ಕುಗಳ ಆಯೋಗ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತದೆ. ಆಯೋಗಕ್ಕೆ ನೇರವಾಗಿ ದೂರು ನೀಡಬಹುದು. ಸ್ವಯಂ ಪ್ರೇರಿತ ದೂರನ್ನು ದಾಖಲಿಸಬಹುವುದು. ದಿನ ಪತ್ರಿಕೆಗಳಲ್ಲಿ ಪ್ರಕಟಣೆಯಾದರೂ ದೂರನ್ನು ದಾಖಲಿಸುವುದಾಗಿ ಅವರು ಹೇಳಿದರು.

ಈ ಸಂಬ0ಧ ಮಾನವ ಹಕ್ಕುಗಳ ಆಯೋಗ ಅರಿವು ಮೂಡಿಸಲು ಉಲ್ಲಂಘನೆಗೆ ಒಳಪಟ್ಟವರನ್ನು ಗುರುತಿಸಲು ಜಿಲ್ಲೆಗಳಿಗೆ `ಭಟಿ ನೀಡಿ ಪ್ರಕರಣಗಳನ್ನು ದಾಖಲಿಸಿಕೊಂಡು ಇತ್ಯರ್ಥಪಡಿಸಲಾಗುತ್ತಿದೆ ಎಂದರು. ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಆಸ್ಪತ್ರೆ, ಹಾಸ್ಟೆಲ್‌ಗಳು, ಜೈಲು, ಪೊಲೀಸ್ ಠಾಣೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಆಪತ್ತು ತಡೆಯುವುದಕ್ಕೆ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಾನವನ ಹಕ್ಕುಗಳ ಆಯೋಗದ ಉಲ್ಲಂಘನೆ ತಡೆಯುವುದು ಮುಖ್ಯ ಉದ್ದೇಶವಾಗಿದೆ ಎಂದರು.

ಮಾನವನ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲು ಇ ಮೇಲ್, ಪೋಸ್ಟ್, ದಿನಪತ್ರಿಕೆಗಳ ಮೂಲಕ ಹಾಗೂ ನೇರವಾಗಿ ದೂರು ನೀಡಬಹುದು. ಸರ್ಕಾರದ ಮೂಲ ಸೌಕರ್ಯಗಳು ವಂಚಿತರಾದವರು ಆಯೋಗಕ್ಕೆ ದೂರು ಸಲ್ಲಿಸಿ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು. ನಂತರ ಜಿಲ್ಲಾ ಕಾರಾಗೃಹಕ್ಕೆ `ಭಟಿ ನೀಡಿದ ಹಂಗಾಮಿ ಅಧ್ಯಕ್ಷರು, ಅಲ್ಲಿನ ಮೂಲ ಸೌಕರ್ಯಗಳು ಹಾಗೂ ಸ್ವಚ್ಚತೆ ಬಗ್ಗೆ ವೀಕ್ಷಣೆ ಮಾಡಿ. ಸಿಸಿ ಕ್ಯಾಮೆರಾಗಳು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ `ಭಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ,ಬಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ತಿಳಿಸಿದರು. ಚಿಕ್ಕಬಳ್ಳಾಪುರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ `ಭಟಿ ನೀಡಿ ತಿನಿಸು ಮಳಿಗೆಗಳಲ್ಲಿ ಮಾರಟ ಮಾಡುವ ತಂಪು ಪಾನೀಯಗಳ ಅವಧಿ ಮುಕ್ತಾಯದ ಬಗ್ಗೆ ಪರಿಶೀಲಿಸಿ, ಅವಧಿ ಮುಗಿದ ಪಾನೀಯಗಳನ್ನು ಮಾರುತ್ತಿದ್ದ ಮಳಿಗೆಯ ಮಾರಟಗಾರರ ಮೇಲೆ ಕ್ರಮ ವಹಿಸಲಾಯಿತು. ಪ್ರಯಾಣಿಕರೊಂದಿಗೆ ಸಂವಾದ ನಡೆಸಿ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿ ಸಂಬ0ಧಪಟ್ಟ ಅಧಿಕಾರಿಗಳಿಗೆ ಇತ್ಯರ್ಥಪಡಿಸಲು ಸೂಚನೆ ನೀಡಿದರು. ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ `ಭೇಟಿ ನೀಡಿ ಅಲ್ಲಿನ ರೋಗಿಗಳೊಂದಿಗೆ ಅವರ ಸಮಸ್ಯೆ, ಅಲ್ಲಿನ ಸ್ವಚ್ಚತೆ ಹಾಗೂ ಸೌಕರ್ಯಗಳನ್ನು ಪರಿಶೀಲಿಸಿದರು.

 

About The Author

Leave a Reply

Your email address will not be published. Required fields are marked *