ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಕಣ್ಮನ ಸೆಳೆಯುತ್ತಿದೆ ದಸರಾ ಫಲಪುಷ್ಪ ಪ್ರದರ್ಶನ

1 min read

ಕಣ್ಮನ ಸೆಳೆಯುತ್ತಿದೆ ದಸರಾ ಫಲಪುಷ್ಪ ಪ್ರದರ್ಶನ
ಪುಷ್ಪದಲ್ಲಿ ಅರಳಿದ ಸರ್ಕಾರದ ಪಂಚ ಗ್ಯಾರೆಂಟಿಗಳು
ಅಕ್ಷರದವ್ವ ಸಾವಿತ್ರಿ ಬಾಪುಲೆ ಚಿತ್ರವೂ ಆಕರ್ಷಣೆ

ವಿಶ್ವ ಪ್ರಸಿದ್ಧ ಮೈಸೂರು ದಸರಾ ಆರಂಭವಾಗಿದೆ. ನವರಾತ್ರಿಗಳು ಈಗಾಗಲೇ ಅದ್ಧೂರಿಯಾಗಿ ಆರಂಭವಾಗಿದ್ದು, ದಸರಾ ವಿಶೇಷಗಳಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫÀಲ ಪುಷ್ಪ ಪ್ರದರ್ಶನ ಆಕರ್ಷಣೀಯವಾಗಿದೆ. ಕುಪ್ಪಣ್ಣ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಕರ್ನಾಟಕದ ಅಷ್ಟೂ ವಿಭಿನ್ನತೆಗಳು ಅನಾವರಣವಾಗಿರುವುದು ವಿಶೇಷ.

ಮೈಸೂರು ನಗರದ ಕುಪ್ಪಣ್ಣ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ವೀಕ್ಷಕರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಗಾಜಿನ ಮನೆಯೊಳಗೆ ನಿರ್ಮಿಸಿರುವ ಶಾಕ್ಯ ರಾಜಮನೆತನ ಬೌದ್ಧ ಬೋಧನೆಗಳು, ಬಸವಣ್ಣನವರ ಶ್ರೇಷ್ಠತೆ ಸಾರುವ ಅನುಭವ ಮಂಟಪ, ಪ್ರಜಾಪ್ರಭತ್ವದ ನೆಲೆಯಲ್ಲಿ ರೂಪಿಸಿರುವ ಸಂಸತ್ `ಭವನ ಪ್ರಮುಖ ಆಕರ್ಷಣೆಯಾಗಿದೆ.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ, ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಗಳ ವಿಷಯಾಧರಿತವಾದ ಪುಷ್ಪ ಕಲಾಕೃತಿ ಮಾದರಿಗಳನ್ನು ನಿರ್ಮಿಸಲಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರಿನಲ್ಲಾದ ಭದ್ರಾವತಿ ಕಾರ್ಖಾನೆ, ಶಿವನಸಮುದ್ರ ವಿದ್ಯುತ್ ಉತ್ಪಾದನೆ, ಮೈಸೂರು ವಿಶ್ವವಿದ್ಯಾಲಯ ಹಾಗೂ ಮೈಸೂರು ಆಕಾಶವಾಣಿ ಸೇರಿದಂತೆ ಅಭಿವೃದ್ಧಿ ಸಾಧನೆಗಳ ಕುರಿತ ಪುಷ್ಪಗಳ ಮದ್ಯೆ ಇದ್ದ ಚಿತ್ರ ಪ್ರದರ್ಶನ ನೋಡುಗರನ್ನು ಆಕರ್ಷಿಸಲಿದೆ.

ಕುಪ್ಪಳ್ಳಿ ಪಾರ್ಕ್ ಮುಖ್ಯದ್ವಾರದಲ್ಲಿ ಇತ್ತೀಚಿಗೆ ಸಂಭ್ರಮಿಸಿದ ಕನ್ನಡಿಗರ ಹೆಮ್ಮೆಯ ಕರ್ನಾಟಕ ಸಂಭ್ರಮ 50 ರ ಕುರಿತು ಹಳದಿ ಮತ್ತು ಕೆಂಪು ಬಣ್ಣದ ಗುಲಾಬಿ ಹೂವಿನಿಂದ ನಿರ್ಮಿಸಲಾದ ಕರ್ನಾಟಕ ಭೂಪಟ, ಎಡ ಬಲದಲ್ಲಿ ಆನೆಯ ಮಾದರಿ, ಅಲ್ಲದೆ ಹೂವಿನಿಂದ ಅರಳಿದ ಟೀಮ್ ಇಂಡಿಯಾ ವಿಶ್ವಕಪ್ ಮಾದರಿ ಜನರ ಗಮನ ಸೆಳೆಯುತ್ತಿದೆ.

ಭಾರತದ ಮೊದಲ ಮಹಿಳಾ ಶಿಕ್ಷಕಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕ್ರಾಂತಿಯ ಬಗ್ಗೆ ಬೆಳಕು ಚೆಲ್ಲಿದ ಅಕ್ಷರದವ್ವ ಸಾವಿತ್ರಿಬಾಯಿ ಬಾಪುಲೆ, ಒಂದೇ ಮಾನವನ ದೇಹದಲ್ಲಿ ಅರ್ಧಭ0ಗ ರೈತ ಇನ್ನರ್ಧ ಭ0ಗ ಗಡಿ ಕಾಯುವ ಸೈನಿಕನ ಮಾದರಿಯೂ ವಿಶೇಷವಾಗಿದೆ. ಹುಲಿಯನ್ನೇರಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ಹಾಗೂ ಒಂದೇ ಗೋಪುರದಲ್ಲಿ ಅರಳಿದ ಕರ್ನಾಟಕದ ಅತೀ ದೊಡ್ಡ ದೇವಾಲಯ ನಂಜನಗೂಡಿನ ಶ್ರೀಕಂಠೇಶ್ವರ ಹಾಗೂ ಶ್ರೀ ಚಾಮುಂಡೇಶ್ವರಿ ದೇವಾಲಯವನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿರುವುದು ಭಕ್ತಿಭವ ಮೂಡಿಸುತ್ತಿವೆ.

ವಿಭಿನ್ನ ಕಲ್ಪನೆಗಳೊಂದಿಗೆ ಈ ಬಾರಿಯ ಫಲಪುಷ್ಪ ಪ್ರದರ್ಶನ ಸಜ್ಜಾಗಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಬರುವ ಪ್ರೇಕ್ಷಕರಿಗೆ ವಿವಿಧ  ರೀತಿಯ ತಿಂಡಿ ತಿನಿಸುಗಳು, ಆಟಿಕೆಗಳ ವ್ಯವಸ್ಥೆ ಮಾಡಲು ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಮಳಿಗೆಗಳನ್ನು ತೆರೆಯಲಾಗಿದೆ.

About The Author

Leave a Reply

Your email address will not be published. Required fields are marked *