ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಿಂಚಿನ ಸಂಚಾರ

1 min read

ಜಿಲ್ಲೆಯಲ್ಲಿ 14 ಕಾಮಗಾರಿಗಳ ಉದ್ಘಾಟನೆ
ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಿಂಚಿನ ಸಂಚಾರ

ಜಿಲ್ಲೆಯಲ್ಲಿ ಇಂದು ಒಟ್ಟು 14 ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿದೆ. ಎಲ್ಲಾ ಕಾಮಗಾರಿಗಳ ಚಾಲನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದು, ಜಿಲ್ಲಾಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.

ಇಂದು ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಗುಡಿಬಂಡೆಯಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಒಂದೂವರೆ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಶಿಡ್ಲಘಟ್ಟದಲ್ಲಿಯೂ ವಸತಿಗೃಹ ನಿರ್ಮಾಣಕ್ಕೆ ಎರಡೂವರೆ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆ ಅಭಿವೃದ್ದಿಗೆ 1.80 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಮತ್ತು ನಾಯನಹಳ್ಳಿ ಗ್ರಾಮಗಳಲ್ಲಿ ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ  ಕೇಂದ್ರಗಳ ಕಟ್ಟಡಗಳನ್ನು ಉದ್ಘಾಟಿಸಿ, ಜಿಲ್ಲಾಡಳಿತ `ಭವನದ ಜಿಲ್ಲಾ ಪಂಚಾಯತ್ ನ ಹೆಚ್. ನರಸಿಂಹಯ್ಯ ಸಭÁಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಶಿಡ್ಲಘಟ್ಟ ತಾಲ್ಲೂಕು ಮತ್ತು ಬಾಗೇಪಲ್ಲಿ ತಾಲ್ಲೂಕಿನಲ್ಲಿ ತಲಾ ಒಂದು ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿಸಿದ್ದು, ಚಿಂತಾಮಣಿ ತಾಲ್ಲೂಕು ಮುರುಗಮಲ್ಲಾದಲ್ಲಿ ನಿರ್ಮಿಸಿರುವ ಮಾನಸಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿರುವುದಾಗಿ ತಿಳಿಸಿದರು.

ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಜಾರಿ ಮಾಡಿರುವ ಹೃದಯ ಜ್ಯೋತಿ ಯೋಜನೆಯಡಿ ಈವರೆಗೆ 75 ಜನರ ಪ್ರಾಣ ಉಳಿದಿವೆ. ಈವರೆಗೆ 1,200 ಮಂದಿ ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣದಲ್ಲಿದ್ದು, ನಗರ ಮತ್ತು ಗ್ರಾಮೀಣ ಸ್ಥಳಿಯ ಸಂಸ್ಥೆಗಳ ಸಹಕಾರದೊಂದಿಗೆ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಡೆಂಗ್ಯೂ ಹರಡುವಿಕೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿಧÀðರಿಸಲಾಗಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾಯಲ್ಲಿ 28 ಉಪ ಕೇಂದ್ರಗಳನ್ನು ಹೊಸದಾಗಿ ಆರಂಭಿಸುವ0ತೆ ಕೋರಿ ಜಿಲ್ಲಾಡಳಿತ ಬೇಡಿಕೆ ಸಲ್ಲಿಸಿದೆ. ಸದ್ಯ 12 ಉಪ ಕೇಂದ್ರಗಳಿಗೆ ನಿವೇಶನ ಸಿದ್ದವಿದೆ. ಮೊದಲ ಹಂತದಲ್ಲಿ 6 ಮತ್ತು 2 ನೇ ಹಂತದಲ್ಲಿ ೬ ಉಪಕೇಂದ್ರಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರತಿ ಉಪಕೇಂದ್ರ 65 ಲಕ್ಷ ರೂಗಳಲ್ಲಿ ನಿರ್ಮಾಣವಾಗಲಿದ್ದು, ೧೨ ಉಪಕೇಂದ್ರಗಳನ್ನೂ ೩.೫೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಜಿಲ್ಲೆಯಲ್ಲಿ ೪ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಬೇಡಿಕೆ ಬಂದಿದ್ದು, ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ನಕಲಿ ವೈದ್ಯರ ಹಾವಳಿ ತಡೆಯಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿಯೂ ಡೇ ಕೇರ್ ಕಿಮೋ ಥೆರಫಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು. ವೈದ್ಯರ ಮೇಲೆ ಹಲ್ಲೆ ನಡೆಸುವವರಿಗೆ ೭ ವರ್ಷ ಕಾರಾಗೃಹ ಶಿಕ್ಷೆಯ ಜೊತೆಗೆ 1.5 ಲಕ್ಷ ರೂಪಾಯಿ ದಂಡ ವಿಧಿಸುವುದಕ್ಕೂ ಕಾನೂನು ತಿದ್ದುಪಡಿ ಮಾಡಲಾಗಿದೆ. ಅಲ್ಲದೇ ವೈದ್ಯರು, ದಾದಿಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊAಡು ಅನುಚಿತವಾಗಿ ವರ್ತಿಸುವವರ ವಿರುದ್ಧವೂ ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಅಂತವರಿಗೆ 3 ತಿಂಗಳ ಕಾರಾಗೃಹ ಶಿಕ್ಷೆ ಇರುತ್ತದೆ ಎಂದರು.

ಈ ಸಂಧರ್ಭದಲ್ಲಿ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಕರ್, ಶಾಸಕ ಪ್ರದೀಪ್ ಈಶ್ವರ್, ಗೌರಿಬಿದನೂರು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್ ಮಹೇಶ್ ಕುಮಾರ್, ಜಿಲ್ಲೆ ಶಸ್ತ ಚಿಕಿತ್ಸಕಿ ಮಂಜುಳಾ ದೇವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

About The Author

Leave a Reply

Your email address will not be published. Required fields are marked *