ತೀವ್ರ ಹದಗೆಟ್ಟ ದ್ವಾರಪಲ್ಲಿ ರಸ್ತೆ, ಪ್ರಯಾಣಿಕರ ನಿತ್ಯ ಪರದಾಟ
1 min readತೀವ್ರ ಹದಗೆಟ್ಟ ದ್ವಾರಪಲ್ಲಿ ರಸ್ತೆ, ಪ್ರಯಾಣಿಕರ ನಿತ್ಯ ಪರದಾಟ
ರಸ್ತೆ ಹದಗೆಟ್ಟು ವರ್ಷಗಳೇ ಕಳೆದರೂ ದುರಸ್ತಿ ಮಾಡದ ವ್ಯವಸ್ಥೆ
ಪ್ರತಿನಿತ್ಯ ಜನಪ್ರತಿನಿಧಿಗಳಿಗೆ ಶಾಪ ಹಾಕುತ್ತಿರುವ ಪ್ರಯಾಣಿಕರು
ಚೇಳೂರು ತಾಲೂಕಿನ ಚೀಲಕಲನೇರ್ಪು ಗ್ರಾಮ ಪಂಚಾಯತಿ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ಗುಂಡಿಗಳು ಬಿದ್ದು ವಾಹನ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ತಲುಪಿದೆ. ಈ ಮಾರ್ಗದಲ್ಲಿ ಸಂಚರಿಸುವ ಗ್ರಾಮಸ್ಥರು ನಿತ್ಯ ಪರದಾಡುವಂತಾಗಿದೆ.
ಚೇಳೂರು ತಾಲೂಕಿನ ಚೀಲಕಲನೇರ್ಪು ಗ್ರಾಮ ಪಂಚಾಯತಿ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದೆ. ರಸ್ತೆಯ ತುಂಬಾ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಚಾಲಕರಿಗೆ ಸಮಸ್ಯೆ ಉಂಟಾಗಿದೆ. ಈ ಗ್ರಾಮದಿಂದ ಪ್ರತಿ ನಿತ್ಯ ಪಟ್ಟಣಗಳಿಗೆ ವ್ಯವಹಾರಕ್ಕಾಗಿ ಸಂಚರಿಸುವ ಗ್ರಾಮಸ್ಥರಿಗೆ ಬೆಳಗ್ಗೆ ಒಂದು ಸಮಸ್ಯೆಯಾದರೆ, ರಾತ್ರಿ ಸಮಯದಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ರಸ್ತೆ ಹದಗೆಟ್ಟಿರುವುದರಿಂದ ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿ ರಸ್ತೆ ಯಾವುದು ಗುಂಡಿ ಯಾವುದು ಎಂಬುದನ್ನು ಅರಿಯಲು ಸಾಧ್ಯವಾಗದ ಸ್ಥಿತಿ ಇದ್ದು, ಬೈಕ್‌ಗಳಲ್ಲಿ ಸಂಚರಿಸುವ ಸವಾರರು ಹಲವಾರು ಬಾರಿ ಗುಂಡಿಗಳಲ್ಲಿ ಬಿದ್ದು ಗಾಯಗೊಂಡಿರುವ ಘಟನೆಗಳೂ ನಡೆದಿವೆ. ರಸ್ತೆ ದುರಸ್ತಿ ಮಾಡುವ ಗೋಜಿಗೆ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಇನ್ನಾದರೂ ಸಂಬ0ಧಪಟ್ಟ ಅಧಿಕಾರಿಗಳು ಮತ್ತು ಸಂಬ0ಧಿಸಿದ ಜನಪ್ರತಿನಿಧಿಗಳು ಈ ರಸ್ತೆಯ ದುಸ್ಥಿತಿಯನ್ನು ಕಂಡು ಅನುದಾನ ತಂದು ಗುಣಮಟ್ಟದ ರಸ್ತೆ ನಿರ್ಮಿಸುವ ಮೂಲಕ ಗ್ರಾಮಸ್ಥರು ನಿತ್ಯ ಅನುಭವಿಸುತ್ತಿರುವ ಸಮಸ್ಯೆಯಿಂದ ಮುಕ್ತಿ ನೀಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.