ಬಾಗೇಪಲ್ಲಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ
1 min readಗ್ರಾಮೀಣ ರೋಗಿಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ
ಬಾಗೇಪಲ್ಲಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ
ಬಾಗೇಪಲ್ಲಿ ತಾಲೂಕಿನ ನಾಗರೀಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಐಸೋಲೇಷನ್ ವಾರ್ಡ್, ಪ್ರಯೋಗಾಲಯಗಳ ಉದ್ಘಾಟನೆ ಮಾಡಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆಯ ಕೆಳ ಮಹಡಿಯು ಅವೈನಿಕವಾಗಿ ನಿರ್ಮಾಣ ಮಾಡಲಾಗಿದೆ. ರೋಗಿಗಳಿಗೆ ಗೊಂದಲವನ್ನು0ಟು ಮಾಡುವಂತಿದ್ದು, ಆಧನಿಕ ರೀತಿಯಲ್ಲಿ ನವೀಕರಿಸಲು ಶಾಸಕರು ಹೆಚ್ಚಿನ ಅನುದಾನ ಕೇಳಿದ್ದಾರೆ. ಹಾಗಾಗಿ ರೋಗಿಗಳಿಗೆ ಸುಸಜ್ಜಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಮು0ದಿನ ತಿಂಗಳಿನಲ್ಲಿ ಕೌನ್ಸಿಲಿಂಗ್ ಮೂಲಕ ಹಾಗೂ ಗುತ್ತಿಗೆ ಆಧಾರ ಸೇರಿದಂತೆ ಮತ್ತಿತರ ಪ್ರಕ್ರಿಯೆಗಳ ಮೂಲಕ ವೈಧರ ಕೊರತೆ ನೀಗಿಸಲಾಗುತ್ತದೆ. ಗುತ್ತಿಗೆ ಆಧಾರದಲ್ಲಿ ವೈಧರಿಗೆ ನೀಡುವ ವೇತನ ಕಡಿಮೆ ಇದ್ದು, ಆ ಬಗ್ಗೆ ಶೀಘ್ರದಲ್ಲೆ ತೀರ್ಮಾನಿಸಲಾಗುತ್ತದೆ. ಹಾಗಾಗಿ ರೋಗಿಗಳ ಹಿತದೃಷ್ಟಿಯಿಂದ, ಉತ್ತಮ ಆರೋಗ್ಯ ಸೇವೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಬಾಗೇಪಲ್ಲಿ ತಾಲೂಕಿನ ಜಿ.ಮದ್ದೇಪಲ್ಲಿಯಲ್ಲಿ ಸುಮಾರು ೫ ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಾಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ಶಾಸಕ ಎಸ್.ಎನ್ ಸುಬ್ಬಾರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ಗುಡಿಬಂಡೆ ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಡಾ.ಅರ್ಚನ, ಗುಡಿಬಂಡೆ ಆಸ್ಪತ್ರೆ ವೈಧಕೀಯ ಸಿಬ್ಬಂದಿ ನಾಗರಾಜ ಇದ್ದರು.