ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್. ಅಧಿಕಾರಿಗಳಿಂದ ಪ್ರತಿಭಟನೆ
1 min readವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್. ಅಧಿಕಾರಿಗಳಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆರ್ ಡಿ ಪಿ ಆರ್ ಕುಟುಂಬ ಅನಿರ್ಧಿಷ್ಠಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ಚಿಕ್ಕಬಳ್ಳಾಪುರ :ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರರೊಂದಿಗೆ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದಿಂದ ವಿವಿಧ ಬೇಡಿಕೆಗಳ ಈಡೇರಿಕೆ ಅಗ್ರಹಿಸಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಪ್ರತಿಭಟನೆ ಮಾಡಿದರೂ ಈವರೆಗೂ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ನೌಕರರ ಬೇಡಿಕೆಗಳು ಇಲಾಖೆ ಮತ್ತು ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಲಿಖಿತ ರೂಪದಲ್ಲಿ ಸ್ಪಂದನೆ ಸಿಗೋವರೆಗೂ ಪ್ರತಿಭಟನೆಯನ್ನು ರಾಜ್ಯದ್ಯಂತ ಏಕಕಾಲದಲ್ಲಿ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಂದೆ ಮುಂದುವರಿಸಲು ರಾಜ್ಯ ಒಕ್ಕೂಟದ ನಿರ್ಧರಿಸಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಮುಂಭಾಗದಲ್ಲಿ ಧರಣಿ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಓ ಸೇರಿದಂತೆ ಸ್ವಚ್ಛತಾಗಾರರ ತನಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೂ ಈ ಅನಿರ್ದಿಷ್ಟ ಹೋರಾಟ ಕೈ ಬಿಡುವುದಿಲ್ಲ. ರಾಜ್ಯ ಸಮಿತಿಯ ಆದೇಶದವರಿಗೂ ಈ ಪ್ರತಿಭಟನೆ ಹೀಗೆ ಮುಂದುವರೆಯುತ್ತದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು ಮತ್ತು ನೌಕರರ ಎಲ್ಲಾ ಅವೃಂದದ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಮಾತನಾಡಿ, ಪ್ರತಿಭಟನೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.