ಶಿಡ್ಲಘಟ್ಟದಲ್ಲಿ ಬಿಜೆಪಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ
1 min readಶಿಡ್ಲಘಟ್ಟದಲ್ಲಿ ಬಿಜೆಪಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ
ಎಮ್ಮೆಲ್ಸಿ ಛಲವಾದಿ ನಾರಾಯಣಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿ
ಬಿಜೆಪಿ ಸಂವಿಧಾನ ವಿರೋಧಿ, ಮೀಸಲಾತಿ ವಿರೋಧಿ ಹಾಗೂ ದಲಿತರ ವಿರೋಧಿ ಎಂದು ಕಾಂಗ್ರೆಸ್ಸಿಗರು ಅಪ ಪ್ರಚಾರ ಮಾಡುತ್ತಿದ್ದು, ಅದು ಶುದ್ಧ ಸುಳ್ಳು ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಶಿಡ್ಲಘಟ್ಟದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಶಿಡ್ಲಘಟ್ಟ ಬಿಜೆಪಿ ಕಚೇರಿಗೆ `ಭೇಟಿ ನೀಡಿ ಪದಾಧಿಕಾರಿಗಳ ಜತೆ ಅಭಿಯಾನದ ಪರಮಾರ್ಶೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಮಾಡುತ್ತಿರುವ ಎಲ್ಲ ಆರೋಪಗಳು ರಾಜಕೀಯವಾಗಿ ಸುಳ್ಳು ಆರೋಪಗಳು ಎಂಬುದು ಎಲ್ಲರಿಗೂ ಅರ್ಥವಾಗಿದೆ ಎಂದರು.
ಬಿಜೆಪಿಯೊ0ದಿಗೆ ದಲಿತರು, ಅಲ್ಪ ಸಂಖ್ಯಾತರು ಸೇರಿ ಎಲ್ಲ ವರ್ಗದವರೂ ಬೆಂಬಲಿಸುತ್ತಿದ್ದಾರೆ. ಇದರಿಂದಾಗಿಯೆ ದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದರು. ಇದೀಗ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿಯನ್ನು ಬೆಂಬಲಿಸುವ ಮತ್ತು ಬಿಜೆಪಿಯ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟವರು ಮಾತ್ರ ಪಕ್ಷದ ಸದಸ್ಯತ್ವವನ್ನು ಮಾಡಿಕೊಳ್ಳುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಾಯಿಸಬೇಕೆ0ದರು.
ಶಿಡ್ಲಘಟ್ಟದಲ್ಲಿ ಸುಮಾರು 23 ಸಾವಿರ ಸದಸ್ಯತ್ವ ಮಾಡಿಸಿದ್ದು ಇನ್ನುಳಿದ 17 ದಿನಗಳಲ್ಲಿ 27 ಸಾವಿರ ಸದಸ್ಯತ್ವವನ್ನು ಮಾಡಿಸಬೇಕೆಂದು ಸೂಚಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಮುಖಂಡ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ, ಆನಂದಗೌಡ, ಕಂಬದಹಳ್ಳಿ ಸುರೇಂದ್ರಗೌಡ, ಡಾ. ಸತ್ಯನಾರಾಯಣರಾವ್, ಕನಕಪ್ರಸಾದ್, ನಾರಾಯಣಸ್ವಾಮಿ, ಆಂಜನೇಯಗೌಡ, ನರ್ಮದಾರೆಡ್ಡಿ, ನರೇಶ್, ರಜನೀಕಾಂತ್ ಇದ್ದರು.