ಆರೋಗ್ಯ ಇಲಾಖೆಯಿಂದ ತಂಬಾಕು ನಿಯಂತ್ರಣ ಅರಿವು
1 min readಆರೋಗ್ಯ ಇಲಾಖೆಯಿಂದ ತಂಬಾಕು ನಿಯಂತ್ರಣ ಅರಿವು
ನಿಷೇಧಿತ ಪ್ರದೇಶದಲ್ಲಿ ತಂಬಾಕು ಉತ್ಪನ್ನ ಮಾರದಂತೆ ಜಾಗೃತಿ
ಅರೋಗ್ಯ ಇಲಾಖೆಯಿಂದ ತಂಬಾಕು ನಿಯಂತ್ರಣದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಾವನ್ನು ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಅರೋಗ್ಯಾಧಿಕಾರಿ ಎಸ್ ಎಸ್ ಮಹೇಶ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಮಂಜುಳಾ ಮತ್ತು ನಗರಸಭೆೆ ಸಿಬ್ಬಂದಿ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಅಂಗಡಿ ಮಾಲೀಕರಿಗೆ ತಂಬಾಕು ನಿಯಂತ್ರಣ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಇಲಾಖೆ ಮತ್ತು ನಗರ¸ಭೆಯಿಂದ ಇಂದು ನಡೆಸಲಾಯಿತು. ಈ ವೇಳೆ ಅಂಗಡಿಗಳಿಗೆ `ಭೇಟಿ ನೀಡಿ ಪರಿಶೀಲನೆ ಮಾಡಿ ಬೀಡಿ, ಸಿಗರೆಟ್,ತಂಬಾಕು ಉತ್ಪನ್ನಗಳನ್ನು ಪರಿಶೀಲಿಸಿದ ಅಧಿಕಾರಿಗಳು, ತಂಬಾಕು ಉಥ್ಪನ್ನಗಳನ್ನು ಮಾರಾಟ ಮಾಡದಂತೆ ಅರಿವು ಮೂಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಅರೋಗ್ಯಾಧಿಕಾರಿ ಎಸ್ ಎಸ್ ಮಹೇಶ್ ಕುಮಾರ್, ಚಿಕ್ಕಬಳ್ಳಾಪುರ ನಗರ ಪ್ರದೇಶದಲ್ಲಿ ತಂಬಾಕು ಮುಕ್ತ ಪ್ರದೇಶವನ್ನಾಗಿ ಮಾಡಲು ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸೇರಿ ಈಗಾಗಲೇ ಅಂಗಡಿ ಮಾಲೀಕರಿಗೂ ಸಾರ್ವಜನಿಕರಿಗೂ ತಂಬಾಕು ಮಾರಾಟ ಮಾಡಬಾರದೆಂದು ಜಾಗೃತಿ ಮೂಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇರಿದಂತೆ ತಂಬಾಕು ಸೇವನೆ ಮಾಡಬಾರದು ಎಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಅಂಗಡಿ ಮಾರಾಟಗಾರರು ವರ್ತನೆ ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ತಂಬಾಕು ಅರವಿನ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು, ಮುಂದಿನ ಜನಾಂಗಕ್ಕಾಗಿ ಆರೋಗ್ಯ ಕಾಪಾಡಿಕೊಳ್ಳಬೇಕಾಗಿದೆ. ತಂಬಾಕಿನಿ0ದ 300 ಕ್ಕೂ ಹೆಚ್ಚು ಕ್ಯಾನ್ಸರ್‌ಗೆ ಸಂಬ0ಧಪಟ್ಟ ಪೌಷ್ಠಿಕಾಂಶಗಳು ತಂಬಾಕಿನಲ್ಲಿ ಇದೆ ಎಂದು ತಿಳಿಸಿದರು.