ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ದಲಿತ ಸಂಘಟನೆಗಳ ಒಕ್ಕೂಟ
1 min readಒಳ ಮೀಸಲಾತಿ ಜಾರಿಗೊಳಿಸದಿದ್ದರೆ ಬೃಹತ್ ಪ್ರತಿಭಟನೆ
ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ದಲಿತ ಸಂಘಟನೆಗಳ ಒಕ್ಕೂಟ
ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವ ಪ್ರಕಾರ ಆಯಾ ರಾಜ್ಯಗಳು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿ, ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ನಿರ್ದೇಶನ ಮಾಡಿತ್ತು. ಆದರೆ ಈವರೆಗೂ ಮೀನಾ ಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಇಂದು ಚಿಕ್ಕಬಳ್ಳಾಪುರದ ಅಂಬೇಡ್ಕರ್ ಭವನದಲ್ಲಿ ಎಚ್ಚರಿಸುವ ಸಭೆ ನಡೆಸಿತು.
ಚಿಕ್ಕಬಳ್ಳಾಪುರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ಎಚ್ಚರಿಕೆ ಸಭೆಯಲ್ಲಿ ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಬಿ.ಎಂ ಗಂಗಾಧರ್ ಮಾತನಾಡಿ, ಸುಪ್ರೀಂ ಕೋರ್ಟ್ ಒಳಮೀಸಲಾತಿ ಆದೇಶವನ್ನು ರಾಜ್ಯ ಸರ್ಕಾರ ಯಾಕೆ ಜಾರಿ ಮಾಡುವಲ್ಲಿ ವಿಳಂಬ ಮಾಡುತ್ತಿದೆ, ಸಮುದಾಯಗಳು ಒಗ್ಗಟ್ಟಾಗಿ ಪ್ರತಿಭಟನೆ ಮೂಲಕ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದರೆ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ ಎಂದರು.
ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಎ ಗಂಗಾಧರಪ್ಪ ಮಾತನಾಡಿ, ಮುಂದಕೃಷ್ಣ ಮಾದಿಗ ಮತ್ತು ಮಾದಿಗ ದಂಡೋರ ರಾಜ್ಯಾಧ್ಯಕ್ಷ ಶಂಕರಪ್ಪನವರ ಹೋರಾಟಗಳ ಪ್ರತಿಫಲವೇ ಸುಪ್ರೀಂ ಕೋರ್ಟ್ ಕೊಟ್ಟಿರುವ ಆದೇಶ, ಆದರೆ ಈ ಆದೇಶವನ್ನು ರಾಜ್ಯ ಸರ್ಕಾರಗಳ ಇಚ್ಛೆಗೆ ಬಿಟ್ಟಿರುವುದರಿಂದಾಗಿ ರಾಜ್ಯ ಸರ್ಕಾರಗಳು ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಆದರೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವುದರಿಂದ ಸಂಘಟಿತರಾಗಿ ಹೋರಾಟ ರೂಪಿಸಿ, ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ ಎಂದರು.
ಯುವಕರು ಹೋರಾಟಗಳಲ್ಲಿ ಭಗಿಯಾಗಿ ಸಮುದಾಯದ ಅನೇಕ ಜನರಿಗೆ ಕಾನೂನು ಮತ್ತು ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ ಹೋರಾಟಗಳನ್ನ ರೂಪಿಸುವ ಶಕ್ತಿಯನ್ನು ಹಿರಿಯ ನಾಯಕರು ಮಾಡಬೇಕು ಎಂದು ತಿಳಿಸಿದರು ಸಭೆಯಲ್ಲಿ ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಎ.ಗಂಗಾಧರಪ್ಪ, ಕೃಷ್ಣಪ್ಪ, ರಾಮಪ್ಪ, ದೇವು, ನಾರಾಯಣಸ್ವಾಮಿ ಇದ್ದರು