ಅಲ್ಪಸಂಖ್ಯಾತರ ಅನುದಾನ ಬಹುಸಂಖ್ಯಾತರ ಪಾಲಾದ ಆರೋಪ
1 min readಅಲ್ಪಸಂಖ್ಯಾತರ ಅನುದಾನ ಬಹುಸಂಖ್ಯಾತರ ಪಾಲಾದ ಆರೋಪ
ದೊಡ್ಡಬಳ್ಳಾಪುರ ನಗರಸಭೆ ಮುಂದೆ ಕಾಂಗ್ರೆಸ್‌ನಿ0ದ ಪ್ರತಿಭಟನೆ
ದೊಡ್ಡಬಳ್ಳಾಪುರ ನಗರ¸ಭಾ ವ್ಯಾಪ್ತಿಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ಅಲ್ಪಸಂಖ್ಯಾತರು ವಾಸವಿಲ್ಲದ ಕಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ನಿ0ದ ನಗರ¸ಭೆ ಮುಂಭಾಗ ಇಂದು ಪ್ರತಿಭಟನೆ ನೆಡೆಸಲಾಯಿತು.
ದೊಡ್ಡಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ನಗರ¸ಭಸದಸ್ಯ ಶಿವಶಂಕರ್ ಮಾತನಾಡಿ, ತಾಲ್ಲೂಕಿನ ನಗರಸಭ ವ್ಯಾಪ್ತಿಯಲ್ಲಿ ಕೆ.ಆರ್.ಐ.ಡಿ.ಎಲ್. ಸಂಸ್ಥೆಯಿ0ದ ಅಲ್ಪಸಂಖ್ಯಾತರಿಗೆ ಮೂರು ಕೋಟಿ ಅನುದಾನ ಮಂಜೂರು ಮಾಡಿದ್ದು, ಕಾಮಗಾರಿಗಳು ಮಾತ್ರ ಅಲ್ಪಸಂಖ್ಯಾತ ಜನ ವಾಸ ಮಾಡದ ಸ್ಥಳಗಳಲ್ಲಿ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಈ ಕಾಮಗಾರಿಗಳಿಗೆ ನಗರಸಭೆಯಿಂದ ಸಂಬ0ಧಪಟ್ಟ ಗುತ್ತಿಗೆದಾರರು ಯಾವುದೇ ಎನ್.ಓ.ಸಿ ಪಡೆದಿಲ್ಲ. ಅಲ್ಲದೇ ಈ ಅನುದಾನದಲ್ಲಿ ಮಂಜೂರು ಆಗಿರುವ ಆಂದಾಜು ಪಟ್ಟಿಯಂತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ಈ ಬಗ್ಗೆ ಸಂಬ0ಧಪಟ್ಟ ಸಂಸ್ಥೆಯೊದಿಗೆ ಚರ್ಚಿಸಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು. ಯಾವುದೇ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಬೇಕಾದರೇ ಶಿಷ್ಟಾಚಾರ ಪಾಲಿಸಬೇಕು. ಆದರೆ, ಇದು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರು ಗೂಂಡಾ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.