ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ ಒಂದು ದಿನದ ಉಪವಾಸ
1 min readವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ ಒಂದು ದಿನದ ಉಪವಾಸ
ನಂದಿ ವೈದ್ಯಕೀಯಯ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಸಾಂಕೇತಿಕ ಧರಣಿ ನಡೆಸಿದ ವೈದ್ಯ ವಿದ್ಯಾರ್ಥಿಗಳು
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ, ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಚಿಕ್ಕಬಳ್ಳಾಪುರದಲ್ಲಿ ಇಂದು ನಂದಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಒಂದು ದಿನ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ದೇಶದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ರಾತ್ರಿ ಹಗಲು ಎನ್ನದೆ ದುಡಿಯುತ್ತಿರುವ ವೈದ್ಯರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಅತ್ಯಂತ ಗಂಭೀರ ಸ್ವರೂಪವಾಗಿದೆ. ಘಟನೆ ನಡೆದು ೭೫ ದಿನಗಳೇ ಕಳೆದರೂ ಅಲ್ಲಿನ ಸರ್ಕಾರ ಪ್ರಕರಣದ ಸಮರ್ಪಕ ತನಿಖೆ ನಡೆಸುವಲ್ಲಿಯೂ ವಿಫಲವಾಗಿದೆ. ಇಂತಹ ಸಂರ್ಭದಲ್ಲಿ ಮಹಿಳಾ ವೈದ್ಯರು ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಗಿಸುವುದಾದರೂ ಹೇಗೆ ಎಂದು ವೈದ್ಯ ವಿದ್ಯಾರ್ಥಿಗಳು ಪ್ರಶ್ನಿಸಿದರು.
ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆ ಮುಂಭಾಗ ನಂದಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಇಂದು ಸಾಂಕೇತಿಕವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡಿದ್ದು, ಕೋಲ್ಕತ್ತಾ ಘಟನೆಯಲ್ಲಿ ಮೃತ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ. ಪ್ರಸ್ತುತ ಘಟನೆಯ ಸಾಕ್ಷನಾಶವಾಗಿದೆ. ಸರ್ಕಾರ ಸಮರ್ಪಕ ತನಿಖೆ ನಡೆಸಲು ಮುಂದಾಗುತ್ತಿಲ್ಲ. ಇದು ಹೀಗೆ ಮುಂದುವರಿದರೆ ವೈದ್ಯರು ಕರ್ತವ್ಯ ನಿರ್ವಹಿಸಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ವೈದ್ಯ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾ ನಿರತ ವೈದ್ಯ ವಿದ್ಯಾರ್ಥಿನಿ ಅಕ್ಷತಾ ಮಾತನಾಡಿ, ಒಬ್ಬ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದು ಕೊಲೆ ಮಾಡಿ ೭೫ ದಿನಗಳೇ ಕಳೆದಿದೆ. ಆದರೆ ಮೃತ ವಿದ್ಯಾರ್ಥಿನಿಗೆ ಈವರೆಗೂ ನ್ಯಾಯ ಕೊಡಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಳೆದ 75 ದಿನಗಳಿಂದ ದೇಶದ ಇಡೀ ವೈದ್ಯ ಸಮೂಹ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಈವರೆಗೂ ಅಲ್ಲಿನ ಸರ್ಕಾರ ಮುಂದಾಗಿಲ್ಲ. ಹಾಗಾಗಿ ಐಎಂಎ ಕರೆಯ ಮೇರೆಗೆ ಇಂದು ಒಂದು ದಿನದ ಉಪಾವಾಸ ಮಾಡುತ್ತಿದ್ದು, ಅಲ್ಲಿನ ಸರ್ಕಾರದ ನಿರ್ಲಕ್ಷಹೀಗೇ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಗೊಳಿಸುವುದಾಗಿ ಹೇಳಿದರು.
ಇಂದು ನಡೆಯುತ್ತಿರುವ ಪ್ರತಿಭಟನೆ ರಾಷ್ಟ ಮಟ್ಟದಲ್ಲಿ ಐಎಂಎ ನೇತೃತ್ವದಲ್ಲಿ ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದ್ದು, ಬೆಳಗ್ಗೆ 6 ಗಂಟೆಯಿ0ದ ಸಂಜೆ 6 ಗಂಟೆಯವರೆಗೂ ಉಪವಾಸ ನಡೆಯಲಿದೆ ಎಂದು ವೈದ್ಯ ವಿದ್ಯಾರ್ಥಿನಿ ಅಕ್ಷತಾ ಹೇಳಿದರು. ಮತ್ತೊಬ್ಬ ವೈದ್ಯ ವಿದ್ಯಾರ್ಥಿ ಮೋಹಿತ್ ಮಾತನಾಡಿ, ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಾಕ್ಷ ನಾಶ ಮಾಡಲಾಗಿದೆ ಎಂದು ಆರೋಪಿಸಿದರು.
ವೈದ್ಯ ವಿದ್ಯಾರ್ಥಿನಿ ಸಾವು ಸಂಭವಿಸಿ 75 ದಿನ ಕಳೆದರೂ ಅಲ್ಲಿನ ಸರ್ಕಾರ ಸಮರ್ಪಕ ತನಿಖೆ ನಡೆಸುತ್ತಿಲ್ಲ. ಹಾಗಾಗಿಯೇ ಐಎಂಎ ಘಟನೆ ಖಂಡಿಸಿ ಇಂದು ಒಂದು ದಿನದ ಸಾಂಕೇತಿಕ ಪ್ರತಿಭಟನೆಗೆ ಕರೆ ನೀಡಿದೆ. ಅಲ್ಲದೆ ಕೋಲ್ಕತ್ತಾದಲ್ಲಿ ಉಪವಾಸ ಮಾಡುತ್ತಿರುವ ವೈದ್ಯರ ಆರೋಗ್ಯದಲ್ಲಿ ಏರುಪೇರಾಗಿದೆ. ಈವರೆಗೂ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ ಎಂದರೆ ಅಲ್ಲಿನ ಪರಿಸ್ಥಿತಿಯ ಗಂಭೀರತೆ ಅರಿಯಬಹುದಾಗಿದೆ. ಆರೋಪಿಗಳನ್ನು ಗಲ್ಲಿಗೇರಿಸಬೇಕು ಮತ್ತು ಮೃತ ವಿದ್ಯಾರ್ಥಿಗನಿಗೆ ನ್ಯಾಯ ಸಿಗುವವರೆಗೂ ವೈದ್ಯರ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.