ಕೊಲೆ ಮಾಡಿ ಶವ ಸುಟ್ಟಿರುವ ಶಂಕೆ
1 min readಕೊಲೆ ಮಾಡಿ ಶವ ಸುಟ್ಟಿರುವ ಶಂಕೆ
ಪುರುಷನೋ, ಮಹಿಳೆಯೋ ತಿಳಿಯದ ಸ್ಥಿತಿ
ಅಪರಿಚಿತ ಶವವೊಂದನ್ನು ಸಂಪೂರ್ಣ ಸುಟ್ಟ ರೀತಿಯಲ್ಲಿ ಪತ್ತೆಯಾಗಿದ್ದು, ಮೂಳೆಗಳು ಮಾತ್ರ ದೊರೆತಿರುವ ಹಿನ್ನೆಲೆಯಲ್ಲಿ ಮೃತಪಟ್ಟಿರುವುದು ಪುರಷನೋ, ಮಹಿಳೆಯೋ ತಿಳಿಯದ ಸ್ಥಿತಿ ಇದೆ. ಯಾರು, ಯಾವಾಗ ಮತ್ತು ಯಾಕೆ ಕೊಲೆ ಮಾಡಿರಬಹುದು ಎಂಬ ಪ್ರಶ್ನೆಗಳಿಗೆ ಇನ್ನಷ್ಟೇ ಪೊಲೀಸರು ಉತ್ತರ ಹುಡುಕಬೇಕಿದೆ.
ಚಿಕ್ಕಬಳ್ಳಾಪುರ, ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದ ಈರದಿಮ್ಮಮ್ಮ ಕಣಿವೆ ಪ್ರದೇಶದ ಕೇತಭೆರವೇಶ್ವರ ಸ್ವಾಮಿ ದೇವಾಲಯದ ಸಮೀಪದ ಅರಣ್ಯ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂಳೆಗಳು ಮಾತ್ರ ಲಭ್ಯವಾಗಿವೆ. ಇದರಿಂದ ಮೃತಪಟ್ಟಿರುವುದು ಪುರುಷನೋ ಅಥವಾ ಮಹಿಳೆಯೋ ತಿಳಿಯದ ಸ್ಥಿತಿ ಇದ್ದು, ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಇನ್ನು ಸುಟ್ಟಿರುವ ಹಿನ್ನೆಲೆಯಲ್ಲಿ ಇದು ಕೊಲೆ ಮಾಡಿ ಸುಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳದಲ್ಲಿ ಸುಟ್ಟ ರೀತಿಯಲ್ಲಿ ಮೂಳೆಗಳು ಮಾತ್ರ ಲಭ್ಯವಾಗಿವೆ. ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಬೇರೆಲ್ಲೋ ಕೊಲೆ ಮಾಡಿ ಇಲ್ಲಿ ತಂದು ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಪರಿಚಿತ ವ್ಯಕ್ತಿ ಯಾರು, ಪುರಷನೇ ಅಥವಾ ಮಹಿಳೆಯ ಎಂಬಿತ್ಯಾದಿ ವಿಚಾರಗಳ ಬಗ್ಗೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ಪೊಲೀಸರ ತನಿಖೆಯಿಂದಷ್ಟೇ ಮಾಹಿತಿ ಹೊರಬರಬೇಕಿದೆ.