ಶಿಡ್ಲಘಟ್ಟ ಸಂತೆ ನಡೆಯುವ ಸ್ಥಳಕ್ಕೆ ನಗರಸಭೆ ಅಧ್ಯಕ್ಷರ ಭೇಟಿ
1 min readಶಿಡ್ಲಘಟ್ಟ ಸಂತೆ ನಡೆಯುವ ಸ್ಥಳಕ್ಕೆ ನಗರಸಭೆ ಅಧ್ಯಕ್ಷರ ಭೇಟಿ
ಸಂತೆಯಲ್ಲಿನ ಸಮಸ್ಯೆಗಳ ಪರಿಹರಿಸುವ ಭರವಸೆ
ಸೆಪ್ಟೆ0ಬರ್ 24 ರಂದು ಸಂತೆಯಲ್ಲಿ ಸಾವಿರ ಸಮಸ್ಯೆಗಳು ಎಂಬ ತಲೆಬರಹದಡಿ ಸುದ್ದಿ ಪ್ರಸಾರವಾಗಿತ್ತು. ಈ ಬಗ್ಗೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆದಿತ್ತು. ಈ ಸಂಬ0ಧ ಸೋಮವಾರ ನಗರಸಭೆ ಅಧ್ಯಕ್ಷ ಎಂ.ವಿ. ವೆಂಕಟಸ್ವಾಮಿ, ಸದಸ್ಯರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿಡ್ಲಘಟ್ಟ ನಗರದ ಸಂತೆಗೆ ಆಗಮಿಸಿರುವ ವ್ಯಾಪಾರಿಗಳು ಹಾಗೂ ಗ್ರಾಹಕರ ಸಮಸ್ಯೆಗಳನ್ನು ಆಲಿಸಿದ ನಂತರ ಮಾತನಾಡಿದ ನಗರಸಭೆ ಅಧ್ಯಕ್ಷ ಎಂ.ವಿ.ವೆ0ಕಟಸ್ವಾಮಿ, ತಿನ್ನುವ ಪದಾರ್ಥ ಮಾರುವ ಸ್ಥಳ ಸ್ವಚ್ಛವಾಗಿರಬೇಕು. ಮಾರುವವರಿಗೆ ಮತ್ತು ಕೊಳ್ಳುವವರಿಗೆ ಅನುಕೂಲವಾಗಿರಬೇಕು. ಈ ಬಗ್ಗೆ ಶಾಸಕರಿಗೂ ವಿಚಾರ ತಿಳಿಸುತ್ತೇವೆ. ಸಾಧ್ಯವಾದಷ್ಟೂ ಬೇಗ ಎಲ್ಲಾ ಸಮಸ್ಯೆಗಳನ್ನೂ ಬಗೆ ಹರಿಸಲಾಗುವುದು ಎಂದರು.
ಅಖಿಗಿನಗರಸಭೆ ಸದಸ್ಯ ಎಲ್.ಅನಿಲ್ ಕುಮಾರ್ ಮಾತನಾಡಿ, ಸಂತೆಯಲ್ಲಿ ಸಮಸ್ಯೆಗಳ ಆಗರವೇ ಇದೆ. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಲವಾಗಿದ್ದಾವೆ. ಬೀದಿ ದೀಪಗಳಿಲ್ಲ, ಶೀಟುಗಳು ಒಡೆದುಹೋಗಿವೆ. ಎಲ್ಲಕ್ಕಿಂತ ಮುಖ್ಯವಾಗಿ ಹೆಂಗಸರಿಗೆ ಶೌಚಾಲಯದ ವ್ಯವಸ್ಥೆ ಮಾಡಬೇಕಿದೆ. ಕುಡಿಯುವ ನೀರಿನ ಸಮಸ್ಯೆ ಇದೆ. ಇಲ್ಲಿನ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.