ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಅವಿರೋಧ ಆಯ್ಕೆ
1 min readರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಅವಿರೋಧ ಆಯ್ಕೆ
ನೌಕರರ ಸಂಘದ ನಿರ್ದೇಶಕರ ಅವಿರೋಧ ನೇಮಕ
28 ರಂದು ನಂಜನಗೂಡಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾಧಿಕಾರಿ ಕೆ.ಎಸ್ ಬಾಲಸುಬ್ರಮಣ್ಯಂ ಹೇಳಿದರು.
ನಂಜನಗೂಡು ನಗರದ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಮಾತನಾಡಿದ ಚುನಾವಣಾಧಿಕಾರಿ ಕೆ.ಎಸ್ ಬಾಲಸುಬ್ರಮಣ್ಯಂ, ಅಕ್ಟೋಬರ್ 28 ರಂದು ನಂಜನಗೂಡು ಪಟ್ಟಣದ ಜೂನಿಯರ್ ಕಾಲೇಜಿನ ಪ್ರೌಢಶಾಲೆಯಲ್ಲಿ ೩೧ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತಿದ್ದು, 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 31 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಕೃಷಿ ಇಲಾಖೆಯ ಎಸ್.ನಾಗೇಶ್, ಕಂದಾಯ ಇಲಾಖೆಯ ಹೆನ್ರಿ ಡಿ ಡಿಸೋಜಾ, ನೀರಾವರಿ ಇಲಾಖೆಯ ಶಿವಣ್ಣ, ಪಂಚಾಯತ್ ರಾಜ್ ಎಂಜಿನಿಯರಿ0ಗ್ ಕುಡಿಯುವ ನೀರು ಹಾಗೂ ನೈರ್ಮಲೀಕರಣ ಇಲಾಖೆಯ ಅಂಕನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಮಹಾಲಕ್ಷ್ಮಿ, ಶಿಕ್ಷಣ ಇಲಾಖೆಯ ರವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಮೇಶ್, ಸಮಾಜ ಕಲ್ಯಾಣ ಇಲಾಖೆಯ ಯಶೋಧರ, ಅರಣ್ಯ ಇಲಾಖೆಯ ಕೆ.ಬಿ ಸತೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿದ್ದರಾಜು, ಖಜಾನೆ ಇಲಾಖೆಯ ಕುಮಾರ್, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹದೇವ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನೀಲಪ್ಪ, ಕೃಷಿ ಮಾರಾಟ ಇಲಾಖೆಯ ಧ್ರುವ ಕುಮಾರ್, ಅಬಕಾರಿ ಇಲಾಖೆಯ ರೇವಣ್ಣ, ಆಯುಷ್ ಇಲಾಖೆಯ ಡಾ. ಅಶೋಕ್ ಕುಮಾರ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.