ಚಿಕ್ಕಬಳ್ಳಾಪುರಕ್ಕೆ ಮತ್ತೆ ದೊರೆತ ಪ್ರತ್ಯೇಕ ಹಾಲು ಒಕ್ಕೂಟ
1 min readಚಿಕ್ಕಬಳ್ಳಾಪುರಕ್ಕೆ ಮತ್ತೆ ದೊರೆತ ಪ್ರತ್ಯೇಕ ಹಾಲು ಒಕ್ಕೂಟ
ಇದು ಸತ್ಯಕ್ಕೆ ಸಂದ ಜಯ ಎಂದ ಸಂಸದ ಡಾ.ಕೆ. ಸುಧಾಕರ್
ಕೂಡಲೇ ಹಾಲು ಒಕ್ಕೂಟದ ವಿಭಜನೆ ಪ್ರಕ್ರಿಯೆ ಆರಂಭಿಸಿ ಚುನಾವಣೆ ನಡೆಸಲಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಹಾಲು ಒಕ್ಕೂಟ ತಂದಿದ್ದ ಡಾ.ಕೆ. ಸುಧಾಕರ್
ಹಿ0ದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಚಿಮುಲ್ ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ತೀರ್ಪನ್ನು ಸ್ವಾಗತಿಸಿರುವ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್, ಇದು ಕೋಲಾರ ಮತ್ತು ಚಿಕ್ಕಳ್ಳಾಪುರ ಜಿಲ್ಲೆಯ ರೈತರ ಹೋರಾಟಕ್ಕೆ ಸಂದ ಜಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಡಾ.ಕೆ.ಸುಧಾಕರ್, ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರಲು ಶ್ರಮಿಸಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಈ ಆದೇಶವನ್ನು ರದ್ದು ಮಾಡಿತ್ತು. ಇದರಿಂದಾಗಿ ಜಿಲ್ಲೆಯ ರೈತರಿಗೆ ಅನ್ಯಾಯವಾಗಿತ್ತು. ಈ ಆದೇಶ ರದ್ದನ್ನು ಹಿಂಪಡೆಯುವ0ತೆ ಡಾ.ಕೆ.ಸುಧಾಕರ್ ನಿರಂತರವಾಗಿ ಆಗ್ರಹಿಸುತ್ತಿದ್ದರು. ಈಗ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಈ ಕ್ರಮವನ್ನು ಎತ್ತಿ ಹಿಡಿದಿದ್ದು, ಆದೇಶವನ್ನು ಮರುಸ್ಥಾಪನೆ ಮಾಡುವಂತೆ ತೀರ್ಪಿನಲ್ಲಿ ಹೇಳಿದೆ.
ಈ ಕುರಿತು ಸಂಸದ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಮತ್ತು ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿದ್ದೇ. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರ ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೇ. ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ದ್ವೇಷದ ರಾಜಕಾರಣ ಮಾಡಿ, ನನ್ನ ಮೇಲಿನ ಸೇಡಿಗಾಗಿ ಆದೇಶವನ್ನು ಏಕಾಏಕಿ ರದ್ದು ಮಾಡಿತ್ತು. ಈ ಮೂಲಕ ಜಿ¯್ಲÉಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸ ಮಾಡಿತ್ತು ಎಂದು ಅವರು ಸ್ಮರಿಸಿದ್ದಾರೆ.