ಶಿಕ್ಷಣದಿಂದ ಮಾತ್ರ ಸಮುದಾಯ ಅಭಿವೃದ್ಧಿಗೆ ಸಾಧ್ಯ
1 min readಶಿಕ್ಷಣದಿಂದ ಮಾತ್ರ ಸಮುದಾಯ ಅಭಿವೃದ್ಧಿಗೆ ಸಾಧ್ಯ
ಗೌರಿಬಿದನೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಸಮುದಾಯದವರು ಶಿಕ್ಷಣ ಮತ್ತು ಸಂಘಟನೆಯಿ0ದ ಸಮಾಜಟ ಮುಖ್ಯವಾಹಿನಿಗೆ ಬರಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಗೌರಿಬಿದನೂರು ತಾಲೂಕಿನ ಹೊಸೂರು ಹೋಬಳಿ ಕೇಂದ್ರದಲ್ಲಿ ಮಹರ್ಷಿ ವಾಲ್ಮೀಕಿ ನಾಯಕರ ಸಂಘದಿ0ದ ಹಮ್ಮಿಕೊಂಡಿದ್ದ ವಾಲ್ಮೀಕಿ ಅದ್ದೂರಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಜಯಂತೋತ್ಸವ ಸಮಾಜದ ಎಲ್ಲಾ ವರ್ಗಗಳಿಗೆ ಸೀಮಿತವಾಗಿದೆ, ವಾಲ್ಮೀಕಿ ರಚಿಸಿದ ರಾಮಾಯಣ ಮಹಾನ್ ಗ್ರಂಥ ಪ್ರತಿಯೊಬ್ಬರ ಜೀವನದಲ್ಲಿ ಹಾಸು ಹೊಕ್ಕಾಗಿದೆ, ರಾಮಾಯಣದ ಆದರ್ಶ, ರಾಮರಾಜ್ಯದ ಕಲ್ಪನೆಯನ್ನು ವಾಲ್ಮೀಕಿ ಮಹರ್ಷಿಗಳು ತಿಳಿಸಿದ್ದರು, ಮಹಾತ್ಮ ಗಾಂಧೀಜಿ ಅವರೂ ರಾಮರಾಜ್ಯದ ಕಲ್ಪನೆಯನ್ನು ಹೊಂದಿದ್ದರು, ಸಮಾಜದಲ್ಲಿ ಸಮಾನತೆಯ ಬದುಕು, ಆರ್ಥಿಕ , ಶಿಕ್ಷಣ ಅಭಿವೃದ್ಧಿಯ ಕಲ್ಪನೆಯನ್ನು ಮರುಹುಟ್ಟು ಹಾಕಲು ಈ ಜಯಂತೋತ್ಸವಗಳು ಹೆಚ್ಚು ಸಹಕಾರಿಯಾಗುತ್ತದೆ ಎಂದರು.
ಗೌರಿಬಿದನೂರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅಪಾರ ಕಾಳಜಿ ವಹಿಸುತ್ತಿದ್ದಾರೆ. ಅವರ ಅಭಿವೃದ್ಧಿ ಚಿಂತನೆಗಳ ಬಗ್ಗೆ ಮೆಚ್ಚುಗೆ ಇದೆ ಎಂದರು. ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಮಾತನಾಡಿ, ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರುವ ಜೊತೆಗೆ ನಿಮ್ಮ ಬದುಕು ಹಸನಾಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ, ತಾಲೂಕಿನಲ್ಲಿ ವಾಲ್ಮೀಕಿ ಸಮುದಾಯದ ಅಭಿವೃದ್ದಿ ದೃಷ್ಟಿಯಿಂದ ಅವಶ್ಯಕತೆಯಿರುವ ಕಡೆಗಳಲ್ಲಿ ವಾಲ್ಮೀಕಿ ಭವನಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ವಾಲ್ಮೀಕಿ ಗುರುಕುಲ ಪೀಠದ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಸಮುದಾಯದವರು ಸಂಘಟನೆ ಹಾಗು ಶಿಕ್ಷಣವನ್ನು ಮೈಗೂಡಿಸಿಕೊಂಡಾಗ ಮಾತ್ರ ಜೀವದಲ್ಲಿ ಉಜ್ವಲ ವಿಷ್ಯತ್ತನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ವಾಲ್ಮೀಕಿ ಸಮುದಾಯದ ಮುಖಂಡ ಆರ್. ಆಶೋಕ್ ಕುಮಾರ್, ಜಿ.ಪಂ. ಮಾಜಿ ಅಧ್ಯಕ್ಷ ಹೆಚ್.ವಿ.ಮಂಜುನಾಥ್ , ಡಾ.ಹೆಚ್.ಎಸ್.ಶಶಿಧರ್, ತಹಸೀಲ್ದಾರ್ ಮಹೇಶ್ ಎಸ್.ಪತ್ರಿ, ಇಒ ಹೊನ್ನಯ್ಯ ಲೋಕೇಶ್ ಇದ್ದರು.