ಕಸಾಯಿಖಾನೆಗೆ ಸಾಗಿಸುತ್ತಿದ್ದ ಎಮ್ಮೆಗಳ ರಕ್ಷಣೆ
1 min readಕಸಾಯಿಖಾನೆಗೆ ಸಾಗಿಸುತ್ತಿದ್ದ ಎಮ್ಮೆಗಳ ರಕ್ಷಣೆ
ವಾಹನ ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು
ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡ್ತಿದ್ದ ಎಮ್ಮೆಗಳನ್ನ ಹಿಂದೂಪರ ಸಂಘಟನೆ ಕಾರ್ಯಕರ್ತರು ರಕ್ಷಣೆ ಮಾಡಿರುವ ಘಟನೆ ಬೆಂಗಳೂರು ಹೈದರಾಬಾದ್ ರಾಷ್ಟಿಯ ಹೆದ್ದಾರಿ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಇಂದು ನಡೆದಿದೆ.
ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡ್ತಿದ್ದ ಎಮ್ಮೆಗಳನ್ನ ಹಿಂದೂಪರ ಸಂಘಟನೆ ಕಾರ್ಯಕರ್ತರು ರಕ್ಷಣೆ ಮಾಡಿರುವ ಘಟನೆ ಬೆಂಗಳೂರು ಹೈದರಾಬಾದ್ ರಾಷ್ಟಿಯ ಹೆದ್ದಾರಿ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಇಂದು ನಡೆದಿದೆ. ಅಶೋಕ ಮಿನಿ ಲೈಲ್ಯಾಂಡ್ ವಾಹನವೊಂದರಲ್ಲಿ 17 ಎಮ್ಮೆಗಳನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಹೆದ್ದಾರಿಯಲ್ಲಿ ವಾಹನ ಅಡ್ಡಾದಿಡ್ಡಿ ಅಲುಗಾಡುತ್ತಿರುವುದನ್ನ ಕಂಡಿರುವ ಹಿಂದೂಪರ ಸಂಘಟನೆ ಕಾರ್ಯಕರ್ತರು ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ.
ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ವಾಹನ ಪರಿಶೀಲನೆ ನಡೆಸಿದ ವೇಳೆ ಒಂದರ ಮೇಲೆ ಒಂದು ಎಮ್ಮೆಗಳನ್ನ ಹಾಕಿ ಅಮಾನವೀಯವಾಗಿ ಸಾಗಾಟ ಮಾಡ್ತಿರೋದು ಕಂಡುಬAದಿದೆ. ಕೂಡಲೇ ವಾಹನವನ್ನ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರ ವಶಕ್ಕೆ ನೀಡಿದ್ದು, ಜಾನುವಾರುಗಳ ಅಕ್ರಮ ಸಾಗಾಟ ಸಂಬ0ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ.