ಸರ್ಕಾರಿ ಆಸ್ಪತ್ರೆಗೆ ವೈದ್ಯರನ್ನು ನೇಮಿಸಿ, ಇಲ್ಲವೇ ಆಸ್ಪತ್ರೆ ಮುಚ್ಚಿ
1 min readಸರ್ಕಾರಿ ಆಸ್ಪತ್ರೆಗೆ ವೈದ್ಯರನ್ನು ನೇಮಿಸಿ, ಇಲ್ಲವೇ ಆಸ್ಪತ್ರೆ ಮುಚ್ಚಿ
ಸಂಸದ ಗೋವಿಂದ ಕಾರಜೋಳ ಸರ್ಕಾರಕ್ಕೆ ಎಚ್ಚರಿಕೆ
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿದ್ದು, ರಾಜ್ಯ ಸರ್ಕಾರ ಶೀಘ್ರ ವೈದ್ಯರನ್ನು ನೇಮಿಸಿ ಬಡರೋಗಿಗಳಿಗೆ ಅನುಕೂಲ ಮಾಡಿಕೊಡಿ, ಇಲ್ಲವೇ ಆಸ್ಪತ್ರೆ ಮುಚ್ಚಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇತ್ತೀಚಿಗೆ ಬಂದ ಮಳೆಯಿಂದ ಹಾನಿಯಾಗಿರುವ ಬೆಳೆಗಳಿಗೆ ಪರಿಹಾರ ನೀಡಬೇಕು, ಚಿತ್ರದುರ್ಗ ಲೋಕಸಭ ಕ್ಷೇತ್ರ ವ್ಯಾಪ್ತಿಯಲ್ಲಿ 10 ಸಾವಿರ ಮನೆಗಳು ಬಿದ್ದಿವೆ, ಅವರಿಗೆ ಶೀಘ್ರ ಪರಿಹಾರ ಒದಗಿಸಬೇಕು, ಈ ಹಿಂದೆ ನಮ್ಮ ಸರ್ಕಾರ ಅದಿಕಾರದಲ್ಲಿದ್ದಾಗ ಎತ್ತಿನಹೊಳೆ ಯೋಜನೆ ಕಾಮಗಾರಿ ಸೇರಿ ಎಲ್ಲಾ ನೀರಾವರಿ ಯೋಜನೆಗಳು ವೇಗವಾಗಿ ನಡೆಯುತ್ತಿತ್ತು, ಕಾಂಗ್ರೆಸ್ ಸರ್ಕಾರ ಬಂದಾಗಿನಿ0ದ ಅನುದಾನ ಕೊರತೆಯಿಂದ ಸಂಪೂರ್ಣವಾಗಿ ನಿಂತು ಹೋಗಿದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದೆ, ಚುನಾವಣೆ ವೇಳೆ ಒಳಮೀಸಲಾತಿ ಜಾರಿ ಮಾಡುವುದಾಗಿ ತಿಳಿಸಿದ್ದರು, ಅದು ಈಗ ಸುಳ್ಳಾಗಿದೆ, ದಲಿತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದೆ, ಮೊದಲ ಸಚಿವ ಸಂಪುಟ ಸಭೆಯಲ್ಲಿ ನಿರ್ಧರ ಮಾಡುತ್ತೇವೆ ಎಂದು ತಿಳಿಸಿದ್ದರು, ಆದರೆ ಈವರೆಗೂ ಅದನ್ನು ಮಾಡಿಯೇ ಇಲ್ಲ, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಆದಷ್ಟು ಬೇಗ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ತುಮಕೂರು ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಪಾವಗಡ ಕ್ಷೇತ್ರದಿಂದ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿ ಚನ್ನಮಲ್ಲಯ್ಯ ಅವರನ್ನು ಗೆಲ್ಲಿಸಬೇಕೆಂದು ಈಗಾಗಲೇ ಕೋರಿದ್ದೇನೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ತಿಮ್ಮರಾಯಪ್ಪ, ತುಮುಲ್ ಅಭ್ಯರ್ಥಿ ಚನ್ನಮಲ್ಲಯ್ಯ ಇದ್ದರು.