ಸರ್ಕಾರಿ ಕಾಲೇಜಿನಲ್ಲಿ ಕಟ್ಟಡ ಇದೆ ಕ್ಯಾಂಟೀನ್ ಇಲ್ಲ
1 min readಸರ್ಕಾರಿ ಕಾಲೇಜಿನಲ್ಲಿ ಕಟ್ಟಡ ಇದೆ ಕ್ಯಾಂಟೀನ್ ಇಲ್ಲ
ಹೆಸರಿಗೆ ಸರ್ಕಾರಿ ಡಿಗ್ರಿ ಕಾಲೇಜ್, ಸೌಲಭ್ಯ ಮಾತ್ರ ಶೂನ್ಯ
ಸಮಸ್ಯೆಗಳ ಬಗ್ಗೆ ಗಮನ ಹರಿಸದ ಕಾಲೇಜು ಆಡಳಿತ ಮಂಡಳಿ
ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸುಸಜ್ಜಿತ ಕಟ್ಟಡ ಇದೆ. ಆದರೆ ಕ್ಯಾಂಟಿನ್ ವ್ಯವಸ್ಥೆ ಇಲ್ಲದೆ ಸೈಕಲ್ ಪಾರ್ಕಿಂಗ್, ಮರದ ಕೆಳಗೆ ಕುಳಿತು ಊಟ ಸೇವಿಸುವ ಪರಿಸ್ಥಿತಿ ವಿದ್ಯಾರ್ಥಿಗಳಿಗೆ ನಿರ್ಮಾಣವಾಗಿದೆ.
ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 1,600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಕಾಲೇಜಿಗೆ ಕ್ಯಾಂಟಿನ್ ವ್ಯವಸ್ಥೆ ಇಲ್ಲ. ಕ್ಯಾಂಟಿನ್ ಗಾಗಿ ಕಟ್ಟಡ ನಿರ್ಮಿಸಿದ್ದು, ನಿರ್ವಹಣೆ ಮಾಡಲು ಯಾರೂ ಮುಂದೆ ಬಂದಿಲ್ಲ. ಕೋಟ್ಯಂತರ ರುಪಾಯಿ ಖರ್ಚು ಮಾಡಿ ಕಟ್ಟಿರುವ ಕ್ಯಾಂಟಿನ್ ಕಟ್ಟಡ ಪಾಳು ಬಿದ್ದಿದೆ. ಕ್ಯಾಂಟಿನ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಸೈಕಲ್ ಪಾರ್ಕಿಂಗ್ ಮತ್ತು ಕಾಲೇಜಿನ ಆವರಣದಲ್ಲಿ ಮಳೆ ಬಿಸಿಲು ಎನ್ನದೆ ಊಟ ಮಾಡುವ ಪರಿಸ್ಥಿತಿ ಎದುರಾಗಿದೆ.
ಮಳೆ ಬಂದರ0ತೂ ದೇವರಿಗೆ ಪ್ರೀತಿ ಎಂಬ0ತಾಗಿದೆ ಇಲ್ಲಿನ ಪರಿಸ್ಥಿತಿ. ಕ್ಯಾಂಟಿನ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಕಾಲೇಜಿನಲ್ಲಿ ಬಾಳು ಬಿದ್ದಿರುವ ಕ್ಯಾಂಟಿನ್ ತೆರೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.