ಗ್ಯಾಸ್ ಸಿಲಿಂಡರ್ ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿ
1 min readಗ್ಯಾಸ್ ಸಿಲಿಂಡರ್ ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿ
ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ
ತು0ಬಿದ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಹಾಗೂ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಅಪಘಾತ ಸಂಭಾವಿಸಿ, ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಸಮೀಪ ನಡೆದಿದೆ.
ಆಂಧ್ರ ಪ್ರದೇಶದ ಕಡಪ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಆಂಧ್ರದ ಎಪಿಎಸ್‌ಆರ್‌ಟಿ.ಸಿ ಬಸ್ ಹಾಗೂ ಇಂಡೇನ್ ಗ್ಯಾಸ್ ಸಿಲೆಂಡರ್ ತುಂಬಿಕೊ0ಡು ಹೊಸಕೋಟೆ ಕಡೆಯಿಂದ ಚಿಂತಾಮಣಿ ಕಡೆಗೆ ಹೊರಟಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೆ ಲಾರಿಯಲ್ಲಿದ್ದ ಸಿಲಿಂಡರ್‌ಗಳು ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅದೃಷ್ಠವಶಾತ್ ಸಿಲಿಂಡರ್‌ಗಳು ಲೀಕ್ ಆಗಿಲ್ಲ.
ರಸ್ತೆಯಲ್ಲಿ ತುಂಬಿದ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ದಾವಿಸಿ ಬಂದು, ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಬರುವಷ್ಟರಲ್ಲಿ ಅದೆ ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಅಂಬುಲೆನ್ಸ್ ವ್ಯವಸ್ಥೆ ಮಾಡಿಸಿದ್ದಾರೆ.
ಗಾಯಾಳುಗಳನ್ನ ಚಿಂತಾಮಣಿ ಹಾಗೂ ಹೊಸಕೋಟೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕೀತ್ಸೆ ನೀಡಲಾಗ್ತಿದೆ. ಘಟನೆಗೆ ಸಂಬ0ಧಿಸಿ ಎರಡು ವಾಹನಗಳ ಚಾಲಕರ ನಿರ್ಲಕ್ಷ್ಯವೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.