ನೀರಾವರಿ ಹೋರಾಟಗಾರ ಪರಮೇಶ್ವರ ಪುಲಕೇಶಿ ಪ್ರಶಸ್ತಿ
1 min readನೀರಾವರಿ ಹೋರಾಟಗಾರ ಪರಮೇಶ್ವರ ಪುಲಕೇಶಿ ಪ್ರಶಸ್ತಿ
ಬೆಂಗಳೂರಿನ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಪ್ರಶಸ್ತಿ ಪ್ರದಾನ
ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ, ಪ್ರಜಾವಾಣಿ ಸಂಪಾದಕ ರವೀಂದ್ರ ಭಟ್ಟರಿಂದ ವಿತರಣೆ
ಬಯಲು ಸೀಮೆ ಜಿಲ್ಲೆಗಳ ನೀರಾವರಿ ಸಮಸ್ಯೆ ನಿವಾರಣೆಗಾಗಿ ಸತತ ಮೂರು ದಶಕಗಳಿಂದ ಹೋರಾಟ ನಡೆಸುತ್ತಿರುವ ಆಂಜನೇಯರೆಡ್ಡಿ ಅವರಿಗೆ ಪರಮೇಶ್ವರ ಪುಲಕೇಶಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಅವರೊಂದಿಗೆ ಇತರೆ ಕ್ಷೇತ್ರಗಳಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿದ ೧೩ ಮಂದಿ ಸಾಧಕರಿಗೆ ನೆನ್ನೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವ ಸಲ್ಲಿಸಿಲಾಯಿತು.
ಬೆಂಗಳೂರಿನ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ಪಕ್ಕದ ಶ್ರೀ ಪರಮೇಶ್ವರ ಪುಲಕೇಶಿ ಮಂಟಪದಲ್ಲಿ ಶುಕ್ರವಾರ ಸಂಜೆ ನಡೆದ ಸುಂದರ ಕಾರ್ಯಕ್ರಮದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯರೆಡ್ಡಿ ಸೇರಿದಂತೆ ಇತರೆ ೧೩ ಮಂದಿಗೆ ಪರಮೇಶ್ವರ ಪುಲಕೇಶಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಾಜಿ ಶಸಾಕ ಜಿ. ನಾರಾಯಣ್ ಕುಮಾರ್ ಸ್ಥಾಪಿತ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಆಂಜನೇಯರೆಡ್ಡಿ ಅವರು ಕಳೆದ ಮೂರು ದಶಕಗಳಿಂದ ನಿರಂತರವಾಗಿ ಶಾಶ್ವತ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಹೋರಾಟ ನಡೆಸುತ್ತಿರುವುದನ್ನು ಪರಿಗಣಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಯುರ್ವೇದ, ವೈದ್ಯಕೀಯ, ರಂಗಭೂಮಿ, ಸಂಗೀತ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರ್ತಿಸಿ ಪ್ರಶಸ್ತಿ ನೀಡಲಾಯಿತು.
ಆಂಜನೇಯರೆಡ್ಡಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿದ್ದು, ಕಳೆದ ೩೦ ವರ್ಷಗಳಿಂದ ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ತುಮಕೂರು ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಹೋರಾಟಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುವ ಆಂಜನೇಯರೆಡ್ಡಿ ಅವರ ಹೋರಾಟ ಕಾಳಜಿಗೆ ಸಂದ ಗೌರವ ಇದಾಗಿದ್ದು, ಇಂದು ಸಂಜೆ ನಡೆದ ಸುಂದರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀ ಪರಮೇಶ್ವರ ಪುಲಿಕೇಶಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಜಾವಾಣಿ ಕಾರ್ಯ ನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟರು, ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾದ
ಡಾ. ಶಂಕರ್ ಎಂ. ಬಿದರಿ, ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್, ಕನ್ನಡ ಚಳವಳಿ ಸಂಸ್ಥೆಯ ಅಧ್ಯಕ್ಷರಾದ ಗುರುದೇವ್ ನಾರಾಯಣಕುಮಾರ್ ಸೇರಿದಂತೆ ಇತರೆ ಗಞ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಇನ್ನು ಶಾಶ್ವತ ನೀರಾವರಿ ಹೋರಾಟವನ್ನು ಪರಿಗಣಿಸಿ ಪರಮೇಶ್ವರ ಪುಲಕೇಶಿ ಪ್ರಶಸ್ತಿಯನ್ನು ನೀಡುತ್ತಿರುವುದು ಸಂತಸ ತಂದಿದೆ, ಆದರೆ ಈ ಪ್ರಶಸ್ತಿಯನ್ನು ಶಾಶ್ವತ ನೀರಾವರಿ ಹೋರಾಟದ ಬೆನ್ನೆಲುಬಾಗಿರುವ ನಮ್ಮ ಎಲ್ಲಾ ಸಹ ಹೋರಾಟಗಾರರಿಗೆ ಅರ್ಪಿಸುತ್ತಿದ್ದೇನೆ. ಪ್ರಶಸ್ತಿಯು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಆಂಜನೇಯರೆಡ್ಡಿ ಪ್ರತಿಕ್ರಿಸಿದ್ದಾರೆ.