ವಕ್ಫ್ ನೋಟಿಸ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ
1 min readವಕ್ಫ್ ನೋಟಿಸ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ಸರ್ಕಾರ, ಜಮೀರ್ ವಿರುದ್ಧ ಘೋಷಣೆ
ಹಿಂದೂಗಳ ಮೇಲಿನ ದಬ್ಬಾಳಿಕೆ ನಿಲ್ಲಿಸಲು ರಕಾಜ್ಯ ಸರ್ಕಾರಕ್ಕೆ ಎಚ್ಚರಿಕೆ
ರೈತರ ಜಮೀನು, ಸರ್ಕಾರಿ ಸ್ಮಶಾನಗಳ ಪಹಣಿಗಳ ಕಾಲಂ 11ರಲ್ಲಿ ಇದಕ್ಕಿದ್ದಂತೆ ವಕ್ಫ್ ಆಸ್ತಿ ಎಂದು ನಮೂದಿಸುತ್ತಿರುವ ಷಡ್ಯಂತರದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವಿದೆ ಎಂದು ಬಿಜೆಪಿ ಮುಖಂಡ ಎನ್‌ಎಂ.ರವಿನಾರಾಯಣರೆಡ್ಡಿ ಆರೋಪಿಸಿದರು.
ಗೌರಿಬಿದನೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ವಕ್ಫ್ ಬೋರ್ಡ್ ಭೂ ಕಬಳಿಕೆ ವಿರುದ್ದ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ
ಮಾತನಾಡಿದ ಬಿಜೆಪಿ ಮುಖಂಡ ರವಿನಾರಾಯಣರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಮ್ಮಕ್ಕಿನಿಂದ ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ರೈತರ ಜಮೀನಿಗೆ,ಮಠ ಮಂದಿರಗಳಿಗೆ ವಕ್ಫ್ ಬೋರ್ಡ್ನಿಂದ ನೋಟೀಸ್ ಕೊಡಿಸುವ ಮೂಲಕ ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ನಡೆಸಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಕ್ಫ್ ಮಂಡಳಿ ಕೂಡಲೆ ರೈತರಿಗೆ ಹಾಗೂ ಮಠ ಮಂದಿರಗಳಿಗೆ ನೀಡಿರುವ ನೋಟಿಸ್ ಹಿಂಪಡೆಯಬೇಕೆ0ದು ಆಗ್ರಹಿಸಿದರು.
ಡಾ ಹೆಚ್‌ಎಸ್. ಶಶಿಧರ್ ಮಾತನಾಡಿ, ಹಿಂದುಗಳು ದೀಪಾವಳಿ ಹಬ್ಬದ ಸಡಗರದಲ್ಲಿ ಪಟಾಕಿ ಒಡೆಯುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮ್ಮದ್ ಮೂಲಕ ಹಿಂದೂಗಳ ಮೇಲೆ ವಕ್ಫ್ ಬಾಂಬ್ ಹಾಕುತ್ತಿದ್ದಾರೆ. ಎಲ್ಲರೂ ಒಟ್ಟಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರೇರಿತ ಲ್ಯಾಂಡ್ ಜಿಹಾದ್ ವಿರುದ್ದ ಹೋರಾಟ ನಡೆಸಲು ಸಜ್ಜಾಗಬೇಕೆಂದು ಕರೆ ನೀಡಿದರು.
ಪ್ರತಿಭಟನಾಕಾರರು ಸಚಿವ ಜಮೀರ್ ಅಹ್ಮದ್ ಪ್ರಕೃತಿ ದಹಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಂತರ ತಹಶಿಲ್ದಾರ್ ಮಹೇಶ್ ಎಸ್ ಪತ್ರಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಮೇಶ್ ರಾವ್, ನಗರ ಬಿಜೆಪಿ ಅಧ್ಯಕ್ಷ ಮಾರ್ಕೆಟ್ ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಳೀಧರ್, ಮಧು, ಸೂರ್ಯನಾರಾಯಣ ರೆಡ್ಡಿ, ಬಿಜೆಪಿ ಮಂಡಲ ಕಾರ್ಯದರ್ಶಿ ಜಯಣ್ಣ, ವೇಣುಮಾದವ ಇದ್ದರು.